AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರವಿಂದ್ ಕೇಜ್ರಿವಾಲ್ ಮತ್ತು ಮಗಳಿಗೆ ಬಿಷ್ಣೋಯ್ ಗ್ಯಾಂಗ್​ನಿಂದ ಕೊಲೆ ಬೆದರಿಕೆ

ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರು ಹೇಳಿಕೊಂಡು ಇದೀಗ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಬೆದರಿಕೆ ಹಾಕಲಾಗಿದೆ. ಬರೋಬ್ಬರಿ 7 ಕೋಟಿ ರೂಪಾಯಿ ಕೊಡುವಂತೆ ಬೇಡಿಕೆ ಇಟ್ಟಿರುವ ಅಪರಿಚಿತ ವ್ಯಕ್ತಿ, ಹಣ ನೀಡದಿದ್ದರೆ ಕೇಜ್ರಿವಾಲ್ ಮಾತ್ರವಲ್ಲ, ಅವರ ಮಗಳನ್ನೂ ಹತ್ಯೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾನೆ. ಈ ಸಂಬಂಧ ಪಂಜಾಬ್‌ನ ಮೊಹಾಲಿಯಲ್ಲಿ ಪ್ರಕರಣ ದಾಖಲಾಗಿದೆ.

ಅರವಿಂದ್ ಕೇಜ್ರಿವಾಲ್ ಮತ್ತು ಮಗಳಿಗೆ ಬಿಷ್ಣೋಯ್ ಗ್ಯಾಂಗ್​ನಿಂದ ಕೊಲೆ ಬೆದರಿಕೆ
ಅರವಿಂದ್ ಕೇಜ್ರಿವಾಲ್ Image Credit source: PTI
ನಯನಾ ರಾಜೀವ್
|

Updated on: Nov 12, 2026 | 2:07 PM

Share

ನವದೆಹಲಿ,ನವೆಂಬರ್ 12: ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಕೊಲೆ ಬೆದರಿಕೆ ಬಂದಿದೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಕರೆ ಮಾಡಿರುವ ವ್ಯಕ್ತಿಯೊಬ್ಬ 7 ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಹಣ ನೀಡದಿದ್ದರೆ ಕೇಜ್ರಿವಾಲ್ ಮತ್ತು ಅವರ ಪುತ್ರಿ ಹರ್ಷಿತಾ ಕೇಜ್ರಿವಾಲ್ ಅವರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಪಂಜಾಬ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

7 ಕೋಟಿ ರೂಪಾಯಿ ಬೇಡಿಕೆ  ನವೆಂಬರ್ 6ರಂದು ಪಂಜಾಬ್‌ನ ಮೊಹಾಲಿ ಪೊಲೀಸರಿಗೆ ಆಮ್ ಆದ್ಮಿ ಪಕ್ಷದ ತಿಲಕ್ ನಗರ ಶಾಸಕ ಜರ್ನೈಲ್ ಸಿಂಗ್ ದೂರು ನೀಡಿದ್ದಾರೆ. ವಿದೇಶಗಳಲ್ಲಿ ಸಂಪರ್ಕ ಹೊಂದಿರುವ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ತಮಗೆ ಕರೆ ಮಾಡಿದ್ದಾನೆ. ವಾಟ್ಸ್‌ಆ್ಯಪ್ ಮೂಲಕವೂ ಬೆದರಿಕೆ ಸಂದೇಶ ಕಳುಹಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಕರೆ ಮಾಡಿದ ವ್ಯಕ್ತಿ 7 ಕೋಟಿ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದಾನೆ. ಹಣ ನೀಡದಿದ್ದರೆ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಮಗಳು ಹರ್ಷಿತಾ ಅವರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಜರ್ನೈಲ್ ಸಿಂಗ್ ಆರೋಪಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಈ ದೂರಿನ ಆಧಾರದ ಮೇಲೆ ಮೊಹಾಲಿ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದ ತನಿಖೆಯನ್ನು ಸೈಬರ್ ಕ್ರೈಂ ವಿಭಾಗದ ಅಧಿಕಾರಿಗಳಿಗೆ ವಹಿಸಲಾಗಿದೆ.

ಇದನ್ನೂ ಓದಿ: ಸಂಜಯ್ ದತ್ ಮೇಲೆ ಬಿಷ್ಣೋಯ್ ಗ್ಯಾಂಗ್ ಕಣ್ಣು; ಇನ್‌ಸ್ಟಾಗ್ರಾಮ್‌ ಮೂಲಕ ಟ್ರ್ಯಾಕ್ ಮಾಡಿದ್ದ ಶೂಟರ್ಸ್

ಬೆದರಿಕೆ ಕರೆ ಬಂದಿರುವ ಮೊಬೈಲ್ ಸಂಖ್ಯೆಯ ವಿವರಗಳು, ಕರೆ ದಾಖಲೆಗಳು, ಇಂಟರ್ನೆಟ್ ಪ್ರೋಟೋಕಾಲ್ (IP) ಮಾಹಿತಿ ಹಾಗೂ ಆರೋಪಿಯ ಸ್ಥಳದ ವಿವರಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಕರೆ ಮಾಡಿರುವ ವ್ಯಕ್ತಿ ನಿಜವಾಗಿಯೂ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ಗೆ ಸೇರಿದವನೋ ಅಥವಾ ಗ್ಯಾಂಗ್ ಹೆಸರನ್ನು ಬಳಸಿಕೊಂಡು ಬೆದರಿಕೆ ಹಾಕಿದ್ದಾನೋ ಎಂಬುದನ್ನು ಪತ್ತೆಹಚ್ಚಲಾಗುತ್ತಿದೆ.

ಕೇಜ್ರಿವಾಲ್ ಕುಟುಂಬಕ್ಕೆ ಭದ್ರತೆ ಕೋರಿದ ಶಾಸಕ ಈ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಶಾಸಕ ಜರ್ನೈಲ್ ಸಿಂಗ್, ಅರವಿಂದ್ ಕೇಜ್ರಿವಾಲ್ ಮತ್ತು ಅವರ ಕುಟುಂಬಕ್ಕೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ ಮಾಡಿದ್ದಾರೆ. ಈ ಪ್ರಕರಣದಲ್ಲಿ ಕೇಜ್ರಿವಾಲ್ ಅವರ ಮಗಳ ಹೆಸರನ್ನೂ ಉಲ್ಲೇಖಿಸಿರುವುದರಿಂದ ಆತಂಕ ಹೆಚ್ಚಾಗಿದೆ.

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಬೆದರಿಕೆ ಈ ಪ್ರಕರಣದಲ್ಲಿ ಕೆಲವು ಪ್ರಮುಖ ಅಂಶಗಳು ಗಮನ ಸೆಳೆಯುತ್ತಿವೆ. ನವೆಂಬರ್ 6ರಂದು ಸಂಜೆ ಸುಮಾರು 6 ಗಂಟೆಗೆ ಶಾಸಕ ಜರ್ನೈಲ್ ಸಿಂಗ್ ಅವರ ವೈಯಕ್ತಿಕ ಮೊಬೈಲ್‌ಗೆ ಅಪರಿಚಿತ ಸಂಖ್ಯೆಯಿಂದ ಕರೆ ಬಂದಿದೆ. ಬಳಿಕ ಅದೇ ಸಂಖ್ಯೆಯಿಂದ ವಾಟ್ಸ್‌ಆ್ಯಪ್ ಸಂದೇಶವೂ ಬಂದಿದೆ. ಸಂದೇಶ ಕಳುಹಿಸಿದವರ ಪ್ರೊಫೈಲ್‌ನಲ್ಲಿ ‘H’ ಎಂಬ ಹೆಸರು ಕಾಣಿಸಿಕೊಂಡಿತ್ತು ಎಂದು ವರದಿಯಾಗಿದೆ.

ಆರೋಪಿ ಕೇವಲ ಫೋನ್‌ನಲ್ಲಿ ಬೆದರಿಕೆ ಹಾಕಿಲ್ಲ. ವಾಟ್ಸ್‌ಆ್ಯಪ್ ಸಂದೇಶದಲ್ಲೂ 7 ಕೋಟಿ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದಾನೆ. ಈ ಸಂದೇಶದ ಸ್ಕ್ರೀನ್‌ಶಾಟ್ ಅನ್ನು ಶಾಸಕ ಪೊಲೀಸರಿಗೆ ಸಾಕ್ಷಿಯಾಗಿ ನೀಡಿದ್ದಾರೆ.

ಯಾವ ಕಾನೂನು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ? ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ (BNS) ಸುಲಿಗೆ, ಬೆದರಿಕೆ ಮತ್ತು ಸಂಘಟಿತ ಅಪರಾಧಕ್ಕೆ ಸಂಬಂಧಿಸಿದ ಸೆಕ್ಷನ್‌ಗಳು ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66D ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸೈಬರ್ ಕ್ರೈಂ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸುನಿಲ್ ಕುಮಾರ್ ತನಿಖೆ ನಡೆಸುತ್ತಿದ್ದಾರೆ. ಕೇಜ್ರಿವಾಲ್‌ಗೆ ಬಂದಿರುವ ಬೆದರಿಕೆಯಲ್ಲಿ ಆರೋಪಿ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯನೆಂದು ಹೇಳಿಕೊಂಡಿದ್ದಾನೆ. ಆದರೆ ಆತನಿಗೂ ಗ್ಯಾಂಗ್‌ಗೂ ನಿಜವಾಗಿಯೂ ಸಂಬಂಧವಿದೆಯೇ ಎಂಬುದು ಇನ್ನೂ ದೃಢಪಟ್ಟಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ಬೆಲೆ ಹೆಚ್ಚಳ ಆಯ್ತು ಈಗ ಬಾಡಿಗೆ ದರವೂ ಏರಿಕೆ!
ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ಬೆಲೆ ಹೆಚ್ಚಳ ಆಯ್ತು ಈಗ ಬಾಡಿಗೆ ದರವೂ ಏರಿಕೆ!
ಮೈಸೂರಿನಲ್ಲಿ ಯುವತಿ ಜತೆ ರ್ಯಾಪಿಡೋ ಚಾಲಕ ಅವಾಚ್ಯ ಸಂಭಾಷಣೆ
ಮೈಸೂರಿನಲ್ಲಿ ಯುವತಿ ಜತೆ ರ್ಯಾಪಿಡೋ ಚಾಲಕ ಅವಾಚ್ಯ ಸಂಭಾಷಣೆ
ಸ್ಟಿಂಗ್ ಪ್ರಕರಣ: ವಿಡಿಯೋ ಮಾಡಿದ್ದೇ ಗೊತ್ತಿಲ್ಲವೆಂದ ಕೃಪಾ ಆಳ್ವ!
ಸ್ಟಿಂಗ್ ಪ್ರಕರಣ: ವಿಡಿಯೋ ಮಾಡಿದ್ದೇ ಗೊತ್ತಿಲ್ಲವೆಂದ ಕೃಪಾ ಆಳ್ವ!
ದಾವಣಗೆರೆಯ ಸೂಳೆಕರೆಗೆ ಅಪರೂಪದ ಅತಿಥಿ ಭೇಟಿ! ನೀರುನಾಯಿಗಳು ಪ್ರತ್ಯಕ್ಷ
ದಾವಣಗೆರೆಯ ಸೂಳೆಕರೆಗೆ ಅಪರೂಪದ ಅತಿಥಿ ಭೇಟಿ! ನೀರುನಾಯಿಗಳು ಪ್ರತ್ಯಕ್ಷ
ಡಿ.2ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ
ಡಿ.2ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ
ಕರಾವಳಿ ಬಳಿಕ ಉತ್ತರ ಕರ್ನಾಟಕದತ್ತ ಮುಖ ಮಾಡಿದ ಪ್ರಮೋದ್ ಶೆಟ್ಟಿ
ಕರಾವಳಿ ಬಳಿಕ ಉತ್ತರ ಕರ್ನಾಟಕದತ್ತ ಮುಖ ಮಾಡಿದ ಪ್ರಮೋದ್ ಶೆಟ್ಟಿ
ಪ್ರಧಾನಿ ಮೋದಿ ಬೆಂಗಳೂರು ಭೇಟಿಯ ಸಂಪೂರ್ಣ ವೇಳಾಪಟ್ಟಿ
ಪ್ರಧಾನಿ ಮೋದಿ ಬೆಂಗಳೂರು ಭೇಟಿಯ ಸಂಪೂರ್ಣ ವೇಳಾಪಟ್ಟಿ
ನಂಜನಗೂಡು ಸಿದ್ದೇಶ್ವರ ಜಾತ್ರೆ ಮೆರವಣಿಗೆ ವೇಳೆ ಗಲಾಟೆ, ಕಲ್ಲುತೂರಾಟ
ನಂಜನಗೂಡು ಸಿದ್ದೇಶ್ವರ ಜಾತ್ರೆ ಮೆರವಣಿಗೆ ವೇಳೆ ಗಲಾಟೆ, ಕಲ್ಲುತೂರಾಟ
Horoscope Today: ಕುಜ ಗ್ರಹವು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಗೆ ಪ್ರವೇಶ
Horoscope Today: ಕುಜ ಗ್ರಹವು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಗೆ ಪ್ರವೇಶ
ಬಿಗ್ ಬಾಸ್ ಮನೆಯಲ್ಲಿ ಗಾನವಿಗೆ ಮೆಮೋರಿ ಲಾಸ್? ಟಾಸ್ಕ್ ಬಳಿಕ ಏನೂ ನೆನಪಿಲ್ಲ
ಬಿಗ್ ಬಾಸ್ ಮನೆಯಲ್ಲಿ ಗಾನವಿಗೆ ಮೆಮೋರಿ ಲಾಸ್? ಟಾಸ್ಕ್ ಬಳಿಕ ಏನೂ ನೆನಪಿಲ್ಲ