ದೆಹಲಿ ಮಹಿಳೆಯರಿಗೆ ಆಮ್ ಆದ್ಮಿ ಗುಡ್ ನ್ಯೂಸ್; ತಿಂಗಳಿಗೆ 2,100 ರೂ. ನೀಡುವುದಾಗಿ ಕೇಜ್ರಿವಾಲ್ ಘೋಷಣೆ

ದೆಹಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ಈಗಾಗಲೇ ಆಮ್ ಆದ್ಮಿ ಪಕ್ಷ ಚುನಾವಣಾ ಪ್ರಚಾರವನ್ನು ಚುರುಕುಗೊಳಿಸಿದ್ದು, ಜಾಮೀನಿನ ಮೇಲೆ ಹೊರಗಿರುವ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಹಲವಾರು ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ಇದೀಗ ಇಂದು ಆಮ್ ಆದ್ಮಿ ಪಕ್ಷದಿಂದ ದೆಹಲಿ ಮಹಿಳೆಯರಿಗಾಗಿ 'ಮಹಿಳಾ ಸಮ್ಮಾನ್ ಯೋಜನೆ'ಯನ್ನು ಘೋಷಿಸಲಾಗಿದೆ. ಇದು ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಗೃಹ ಲಕ್ಷ್ಮಿ ಯೋಜನೆಯ ರೀತಿಯಲ್ಲೇ ಪ್ರತಿ ತಿಂಗಳೂ ಮಹಿಳೆಯರ ಖಾತೆಗೆ ಹಣ ಹಾಕುವ ಯೋಜನೆಯಾಗಿದೆ.

ದೆಹಲಿ ಮಹಿಳೆಯರಿಗೆ ಆಮ್ ಆದ್ಮಿ ಗುಡ್ ನ್ಯೂಸ್; ತಿಂಗಳಿಗೆ 2,100 ರೂ. ನೀಡುವುದಾಗಿ ಕೇಜ್ರಿವಾಲ್ ಘೋಷಣೆ
ಅರವಿಂದ್ ಕೇಜ್ರಿವಾಲ್
Follow us
ಸುಷ್ಮಾ ಚಕ್ರೆ
|

Updated on: Dec 12, 2024 | 2:47 PM

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಗೂ ಮುನ್ನ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಇಂದು (ಗುರುವಾರ) ಮಹಿಳಾ ಸಮ್ಮಾನ್ ಯೋಜನೆಯನ್ನು ಘೋಷಿಸಿದ್ದಾರೆ. ಈ ಕಲ್ಯಾಣ ಯೋಜನೆಯಡಿ ಸರ್ಕಾರವು ದೆಹಲಿಯಲ್ಲಿ ಮಹಿಳೆಯರಿಗೆ ಪ್ರತಿ ತಿಂಗಳು 1000 ರೂ. ನೀಡಲಿದೆ. ದೆಹಲಿ ವಿಧಾನಸಭಾ ಚುನಾವಣೆಯ ನಂತರ ಈ ಮೊತ್ತವನ್ನು ತಿಂಗಳಿಗೆ 2100 ರೂ.ಗೆ ಹೆಚ್ಚಿಸಲಾಗುವುದು ಎಂದು ದೆಹಲಿ ಮಾಜಿ ಮುಖ್ಯಮಂತ್ರಿ ಕೇಜ್ರಿವಾಲ್ ಭರವಸೆ ನೀಡಿದ್ದಾರೆ.

ಚುನಾವಣೆ ಹೊಸ್ತಿಲಲ್ಲಿರುವ ದೆಹಲಿಯಲ್ಲಿ ಕರ್ನಾಟಕದ ಗೃಹಲಕ್ಷ್ಮಿ ಮಾದರಿಯ ಯೋಜನೆಯನ್ನು ಘೋಷಣೆ ಮಾಡಲಾಗಿದೆ. ದೆಹಲಿ ಮಹಿಳೆಯರಿಗೆ ಮಾಸಿಕ 2100 ರೂ. ಹಣವನ್ನು ಖಾತೆಗೆ ಹಾಕುವ ಯೋಜನೆಯನ್ನು ಕೇಜ್ರಿವಾಲ್ ಘೋಷಿಸಿದ್ದಾರೆ. ದೆಹಲಿ ಸಂಪುಟದಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. 18 ವರ್ಷ ಮೇಲ್ಪಟ್ಟ ಪ್ರತಿ ಮಹಿಳೆಗೆ ತಿಂಗಳಿಗೆ 1000 ರೂ. ಸಿಗಲಿದೆ. ಪಿಂಚಣಿ ಯೋಜನೆಯ ಭಾಗವಾಗಿರದ ಮಹಿಳೆಯರು ಈ ಯೋಜನೆಗೆ ಅರ್ಹರಾಗಿರುತ್ತಾರೆ. ಸರ್ಕಾರಿ ನೌಕರರಿಗೆ ಮತ್ತು ಆದಾಯ ತೆರಿಗೆ ಪಾವತಿಸುವವರಿಗೆ ಈ ಯೋಜನೆಯ ಲಾಭ ಪಡೆಯಲು ಅವಕಾಶವಿಲ್ಲ.

ಈ ಯೋಜನೆಗೆ ಅರ್ಹರಾಗಿರುವ ಮಹಿಳೆ ಫಾರ್ಮ್ ಭರ್ತಿ ಮಾಡಬೇಕು. ತಾನು ಯಾವುದೇ ಸರ್ಕಾರಿ ಯೋಜನೆಯ ಭಾಗವಾಗಿಲ್ಲ, ಸರ್ಕಾರಿ ಉದ್ಯೋಗಿ ಅಲ್ಲ ಮತ್ತು ಆದಾಯ ತೆರಿಗೆ ಪಾವತಿದಾರರಲ್ಲ ಎಂದು ಸ್ವಯಂ ಘೋಷಣೆಯನ್ನು ನೀಡಬೇಕು. ಫಾರ್ಮ್ ಜೊತೆಗೆ, ಪ್ರತಿ ಮಹಿಳೆ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ಮಾಹಿತಿಯನ್ನು ಒದಗಿಸಬೇಕಾಗುತ್ತದೆ.

ಇದನ್ನೂ ಓದಿ: ದೆಹಲಿ ಆಟೋ ಚಾಲಕರ ಮನೆಯಲ್ಲಿ ಊಟ ಮಾಡಿದ ಅರವಿಂದ್ ಕೇಜ್ರಿವಾಲ್ ದಂಪತಿ

ಇಂದು ಸಭೆಯನ್ನುದ್ದೇಶಿಸಿ ಮಾತನಾಡಿದ ಅರವಿಂದ್ ಕೇಜ್ರಿವಾಲ್, ಮಹಿಳೆಯರು ಸದ್ಯಕ್ಕೆ ಈ ಯೋಜನೆಯ ಲಾಭ ಪಡೆಯಲು ಸಾಧ್ಯವಿಲ್ಲ. ಆದರೆ ದೆಹಲಿಯಲ್ಲಿ ವಿಧಾನಸಭೆ ಚುನಾವಣೆಯ ನಂತರ ಎಎಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಅವರು ಈ ಆರ್ಥಿಕ ನೆರವು ಪಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಮಹಿಳಾ ಸಮ್ಮಾನ್ ಯೋಜನೆಗೆ ನಾಳೆಯಿಂದಲೇ ನೋಂದಣಿ ಆರಂಭವಾಗಲಿದ್ದು, 2100 ರೂ. ಪ್ರತಿ ತಿಂಗಳೂ ನೀಡಲಾಗುವುದು. 2025ರ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಪ್ ಗೆದ್ದರೆ ಈ ಯೋಜನೆಯ ಹಣ 1000 ರೂ.ನಿಂದ 2100 ರೂ.ಗೆ ಏರಿಕೆಯಾಗಲಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಆಟೋ ಚಾಲಕರಿಗೆ ಬಂಪರ್ ಗಿಫ್ಟ್; 10 ಲಕ್ಷ ರೂ. ವಿಮೆ ಘೋಷಿಸಿದ ಅರವಿಂದ್ ಕೇಜ್ರಿವಾಲ್

“ಎಲ್ಲಿ ಮಹಿಳೆಯರನ್ನು ಪೂಜಿಸಲಾಗುತ್ತದೆಯೋ ಮತ್ತು ಆನಂದಿಸಲಾಗುತ್ತದೆಯೋ ಅಲ್ಲಿ ದೇವರು ನೆಲೆಸಿರುತ್ತಾರೆ. ಮಹಿಳೆಯರು ನಮ್ಮ ದೇಶದ ಭವಿಷ್ಯವನ್ನು ನಿರ್ಮಿಸುತ್ತಾರೆ ಮತ್ತು ಅವರ ಕೆಲಸದಲ್ಲಿ ಅವರನ್ನು ಬೆಂಬಲಿಸುವುದು ಮುಖ್ಯ ಎಂಬ ನಂಬಿಕೆ ನಮ್ಮದು” ಎಂದು ನೂರಾರು ಮಹಿಳೆಯರನ್ನು ಉದ್ದೇಶಿಸಿ ಕೇಜ್ರಿವಾಲ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ