ಬಂಧನ, ಇಡಿ ಕಸ್ಟಡಿ ಪ್ರಶ್ನಿಸಿ ದೆಹಲಿ ಹೈಕೋರ್ಟ್‌ ಮೊರೆ ಹೋದ ಅರವಿಂದ್ ಕೇಜ್ರಿವಾಲ್

ಈಗ ರದ್ದಾಗಿರುವ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಗುರುವಾರ ಕೇಂದ್ರ ತನಿಖಾ ಸಂಸ್ಥೆ ಕೇಜ್ರಿವಾಲ್ ಅವರನ್ನು ಬಂಧಿಸಿದ್ದು ಮಾರ್ಚ್ 28 ರವರೆಗೆ ಇಡಿ ಕಸ್ಟಡಿಗೆ ಕಳುಹಿಸಲಾಗಿದೆ. ಈ ವಿಷಯದಲ್ಲಿ ತುರ್ತು ವಿಚಾರಣೆಯನ್ನು ಕೋರಿ ದೆಹಲಿ ಹೈಕೋರ್ಟ್‌ಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮನವಿ ಸಲ್ಲಿಸಿದ್ದಾರೆ.

ಬಂಧನ, ಇಡಿ ಕಸ್ಟಡಿ ಪ್ರಶ್ನಿಸಿ ದೆಹಲಿ ಹೈಕೋರ್ಟ್‌ ಮೊರೆ ಹೋದ ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
Follow us
|

Updated on:Mar 23, 2024 | 6:39 PM

ದೆಹಲಿ ಮಾರ್ಚ್ 23: ಇದೀಗ ರದ್ದಾದ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ತಮ್ಮ ಬಂಧನ ಮತ್ತು ಜಾರಿ ನಿರ್ದೇಶನಾಲಯ (Enforcement Directorate) ಕಸ್ಟಡಿ ವಿಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ (Delhi high court) ಮೊರೆ ಹೋಗಿದ್ದಾರೆ. ಗುರುವಾರ ಕೇಂದ್ರ ತನಿಖಾ ಸಂಸ್ಥೆ ಕೇಜ್ರಿವಾಲ್ ಅವರನ್ನು ಬಂಧಿಸಿದ್ದು ಮಾರ್ಚ್ 28 ರವರೆಗೆ ಇಡಿ ಕಸ್ಟಡಿಗೆ ಕಳುಹಿಸಲಾಗಿದೆ. ಈ ವಿಷಯದಲ್ಲಿ ತುರ್ತು ವಿಚಾರಣೆಯನ್ನು ಕೋರಿ ದೆಹಲಿ ಹೈಕೋರ್ಟ್‌ಗೆ ಕೇಜ್ರಿವಾಲ್ ಮನವಿ ಸಲ್ಲಿಸಿದ್ದಾರೆ.

ಮನಿ ಲಾಂಡರಿಂಗ್ ತನಿಖೆಯಲ್ಲಿ ಇಡಿ ಯಾವುದೇ ಬಲವಂತದ ಕ್ರಮದಿಂದ ಮಧ್ಯಂತರ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ಗುರುವಾರ ನಿರಾಕರಿಸಿದ ಕೆಲವೇ ಗಂಟೆಗಳ ನಂತರ ಕೇಜ್ರಿವಾಲ್ ಅವರ ಬಂಧನವಾಗಿದೆ. ಶುಕ್ರವಾರ, ಆಮ್ ಆದ್ಮಿ ಪಕ್ಷದ (AAP) ಮುಖ್ಯಸ್ಥರನ್ನು ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರ ಮುಂದೆ ಹಾಜರುಪಡಿಸಲಾಯಿತು. ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಮತ್ತು ಭ್ರಷ್ಟಾಚಾರದ ಸಂಕೀರ್ಣತೆಗಳನ್ನು ಬಿಚ್ಚಿಡಲು ಇದು ಅನಿವಾರ್ಯವಾಗಿದೆ ಎಂದು ಇಡಿ ಒತ್ತಿ ಹೇಳಿದ ನಂತರ ನ್ಯಾಯಾಧೀಶರು ಕೇಜ್ರಿವಾಲ್ ಅವರ ಕಸ್ಟಡಿಗೆ ಇಡಿಗೆ ಅನುಮತಿ ನೀಡಿದ್ದಾರೆ.

ಆರೋಪಿಯ ಪಾತ್ರಕ್ಕೆ ಸಂಬಂಧಿಸಿದಂತೆ ಅವರ ವಿವರವಾದ ಮತ್ತು ನಿರಂತರ ವಿಚಾರಣೆಯ ಉದ್ದೇಶಗಳಿಗಾಗಿ ಮತ್ತು ಅಪರಾಧದ ಉಳಿದ ಆದಾಯವನ್ನು ಬಹಿರಂಗಪಡಿಸಲು ಮತ್ತು ಡಿಜಿಟಲ್ ಸಾಧನಗಳಿಂದ ಪಡೆದ ಡೇಟಾ ಮತ್ತು ಈ ಸಮಯದಲ್ಲಿ ವಶಪಡಿಸಿಕೊಂಡ ವಸ್ತುಗಳೊಂದಿಗೆ ವಿಚಾರಣೆಗೊಳಪಡಿಸು ಆರೋಪಿಯನ್ನು 28.03.2024 ರವರೆಗೆ ಇಡಿ ವಶಕ್ಕೆ ನೀಡಲಾಗಿದೆ ಎಂದು ನ್ಯಾಯಾಧೀಶರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಕೇಜ್ರಿವಾಲ್ ತಮ್ಮ ಮನವಿಯಲ್ಲಿ, ಅವರ ಬಂಧನ ಮತ್ತು ರಿಮಾಂಡ್ ಕಾನೂನುಬಾಹಿರವಾಗಿದೆ. ತಕ್ಷಣ ಬಂಧನದಿಂದ ಬಿಡುಗಡೆ ಮಾಡಲು ನಾನು ಅರ್ಹ ಎಂದು  ಪ್ರತಿಪಾದಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಈ ಪ್ರಕರಣವು 2021-22ರ ದೆಹಲಿ ಸರ್ಕಾರದ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮತ್ತು ಕಾರ್ಯಗತಗೊಳಿಸುವಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದೆ. ಆರೋಪ ಕೇಳಿ ಬಂದ ನಂತರ ಅದನ್ನು  ರದ್ದುಗೊಳಿಸಲಾಯಿತು. ಎಎಪಿಯ ಪ್ರಮುಖ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ಅವರು ಈ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಏತನ್ಮಧ್ಯೆ, ದೆಹಲಿ ಮುಖ್ಯಮಂತ್ರಿ ಜೈಲಿನಿಂದಲೇ ಸರ್ಕಾರವನ್ನು ನಡೆಸುತ್ತಾರೆ ಎಂದು ಎಎಪಿ ನಾಯಕರು ಹೇಳಿದ್ದಾರೆ. ದೆಹಲಿ ಸರ್ಕಾರವನ್ನು ನಡೆಸಲು ಜೈಲಿನಲ್ಲಿ ಕಚೇರಿಯನ್ನು ಸ್ಥಾಪಿಸಲು ನ್ಯಾಯಾಲಯದಿಂದ ಅನುಮತಿ ಪಡೆಯಲಾಗುವುದು ಎಂದು ಪಂಜಾಬ್ ಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಭಗವಂತ್ ಮಾನ್ ಪಿಟಿಐಗೆ ತಿಳಿಸಿದ್ದಾರೆ.

ಇದನ್ನೂ ಓದಿ:  ಅಬಕಾರಿ ನೀತಿ ಪ್ರಕರಣ: ಬಿಆರ್‌ಎಸ್ ನಾಯಕಿ ಕವಿತಾ ಬಂಧನ ಮಾರ್ಚ್ 26 ರವರೆಗೆ ವಿಸ್ತರಣೆ

ಕಾರಾಗೃಹದಿಂದ ಸರ್ಕಾರವನ್ನು ಮುನ್ನಡೆಸುವುದನ್ನು ಕಾನೂನು ನಿಷೇಧಿಸುವುದಿಲ್ಲ. ಆದರೆ ಅರವಿಂದ್ ಕೇಜ್ರಿವಾಲ್ ಅಲ್ಲಿಂದ ತಮ್ಮ ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ವಿವಿಧ ತೊಂದರೆಗಳನ್ನು ಎದುರಿಸಬೇಕಾಗುತ್ತದೆ ಎಂದು ಕಾನೂನು ತಜ್ಞರು ಸೂಚಿಸಿದ್ದಾರೆ.

“ಕೇಜ್ರಿವಾಲ್ ಅವರ ಬಂಧನವು ಮುಖ್ಯಮಂತ್ರಿಯಾಗಿ ಅವರ ಸ್ಥಾನಮಾನವನ್ನು ಬದಲಾಯಿಸುವುದಿಲ್ಲ” ಎಂದು ಸಾಂವಿಧಾನಿಕ ತಜ್ಞ ಪಿಡಿಟಿ ಆಚಾರಿ ಹೇಳಿದ್ದಾರೆ. “ಮುಖ್ಯಮಂತ್ರಿಯಾಗಿ ಅವರು ತಮ್ಮ ಕಾರ್ಯವನ್ನು ಸುಗಮವಾಗಿ ನಿರ್ವಹಿಸಬಹುದೇ ಎಂಬುದು ಜೈಲು ಕೈಪಿಡಿಗೆ ಒಳಪಟ್ಟಿರುತ್ತದೆ” ಎಂದು ಹೇಳಿದರು. “ಜೈಲು ಕೈಪಿಡಿಯು ಅಂತಹ ವಿಷಯಗಳನ್ನು ಅನುಮತಿಸಿದರೆ, ಅದು ಸರಿ. ಇಲ್ಲದಿದ್ದರೆ, ಅವರು ನ್ಯಾಯಾಲಯದಿಂದ ಅನುಮತಿ ಪಡೆಯಬೇಕು. ನಂತರ ನ್ಯಾಯಾಲಯವು ಜೈಲು ಅಧಿಕಾರಿಗಳಿಗೆ ನಿರ್ದಿಷ್ಟ ನಿರ್ದೇಶನವನ್ನು ನೀಡಬೇಕು” ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:30 pm, Sat, 23 March 24

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ