AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Disha Ravi Case: ರೈತರಿಗೆ ಬೆಂಬಲ ನೀಡುವುದು ಅಪರಾಧವಲ್ಲ: ಅರವಿಂದ ಕೇಜ್ರಿವಾಲ್

Greta Thunberg Toolkit: 21ರ ಹರೆಯದ ದಿಶಾ ರವಿ ಅವರ ಬಂಧನವು ಪ್ರಜಾಪ್ರಭುತ್ವ ವ್ಯವಸ್ಥೆ ಮೇಲಿನ ದಾಳಿ. ರೈತರಿಗೆ ಬೆಂಬಲ ನೀಡುವುದು ಅಪರಾಧವಲ್ಲ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

Disha Ravi Case: ರೈತರಿಗೆ ಬೆಂಬಲ ನೀಡುವುದು ಅಪರಾಧವಲ್ಲ: ಅರವಿಂದ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Feb 15, 2021 | 1:29 PM

Share

ನವದೆಹಲಿ : ರೈತರ ಹೋರಾಟಕ್ಕೆ ಸಂಬಂಧಿಸಿ ಪರಿಸರವಾದಿ ಗ್ರೇಟ್​ ಥನ್​ಬರ್ಗ್ (Greta Thunberg) ​ಹಂಚಿಕೊಂಡಿದ್ದ ಟೂಲ್​ ಕಿಟ್​ ಪ್ರಕರಣದಲ್ಲಿ ಪರಿಸರವಾದಿ ದಿಶಾ ರವಿ (Disha Ravi) ಬಂಧನವನ್ನು ಖಂಡಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ರೈತರಿಗೆ ಬೆಂಬಲ ನೀಡುವುದು ಅಪರಾಧವಲ್ಲ ಎಂದು ಟ್ವೀಟ್ ಮಾಡಿದ್ದಾರೆ.

21ರ ಹರೆಯದ ದಿಶಾ ರವಿ ಅವರ ಬಂಧನವು ಪ್ರಜಾಪ್ರಭುತ್ವ ವ್ಯವಸ್ಥೆ ಮೇಲಿನ ದಾಳಿ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಟೂಲ್ ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಪರಿಸರವಾದಿ ದಿಶಾ ರವಿ ಅವರನ್ನು ಪೊಲೀಸರು ಶನಿವಾರ ವಶಕ್ಕೆ ಪಡೆದುಕೊಂಡಿದ್ದರು. ದಿಶಾ ರವಿ ವಿರುದ್ಧ ದೇಶದ್ರೋಹ, ಅಪರಾಧ ಒಳಸಂಚು ಸೇರಿದಂತೆ ಹಲವು ಸೆಕ್ಷನ್‌ಗಳಡಿ ಪ್ರಕರಣ ದಾಖಲಾಗಿವೆ. ಖಲಿಸ್ತಾನಿ ಗುಂಪಿನ ಪೊಯೆಟಿಕ್ ಜಸ್ಟೀಸ್ ಫೌಂಡೇಶನ್ ಎಂದು ಕರೆದುಕೊಳ್ಳುವ ಸಂಘಟನೆ ಈ ಟೂಲ್​ಕಿಟ್ ಸೃಷ್ಟಿಸಿದೆ ಎಂದು ಈ ಹಿಂದೆ ದೆಹಲಿ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದರು. ಇದನ್ನು ಪ್ರಸಾರ ಮಾಡಿರುವ ಆರೋಪ ದಿಶಾ ಮೇಲಿದೆ.

ಇದನ್ನೂ ಓದಿGreta Thunberg toolkit | ಕೇಂದ್ರ ಸರ್ಕಾರಕ್ಕೆ ಭಯ ಶುರುವಾಗಿದೆ; ದಿಶಾ ರವಿ ಬಂಧನ ಖಂಡಿಸಿದ ರಾಹುಲ್ ಗಾಂಧಿ

ನಾನು ಟೂಲ್ ಕಿಟ್ ಮಾಡಿಲ್ಲ. ನಾವು ರೈತರಿಗೆ ಬೆಂಬಲ ನೀಡಲು ಬಯಸುತ್ತೇವೆ. ಫೆಬ್ರವರಿ 3ರಂದು ನಾನು ಎರಡು ಸಾಲು ಎಡಿಟ್ ಮಾಡಿದ್ದೇನೆ ಎಂದು ಭಾನುವಾರ ದೆಹಲಿ ಕೋರ್ಟ್ ನಲ್ಲಿ ದಿಶಾ ರವಿ ಹೇಳಿದ್ದರು.

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ