ಅರವಿಂದ್ ಕೇಜ್ರಿವಾಲ್‌ಗೆ ಜೈಲಿನಲ್ಲಿ ಕೂಲರ್ ನೀಡಿಲ್ಲ; ಆಮ್ ಆದ್ಮಿ ಆರೋಪ

ಅಕ್ರಮ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆಗೆ ಒಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಲೋಕಸಭಾ ಚುನಾವಣೆಯ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ಪಡೆದಿದ್ದರು. ಇದೀಗ ಅವರ ಜಾಮೀನು ಅವಧಿ ಮುಗಿದಿದ್ದು, ಮತ್ತೆ ಜೈಲಿಗೆ ವಾಪಾಸಾಗಿದ್ದಾರೆ.

ಅರವಿಂದ್ ಕೇಜ್ರಿವಾಲ್‌ಗೆ ಜೈಲಿನಲ್ಲಿ ಕೂಲರ್ ನೀಡಿಲ್ಲ; ಆಮ್ ಆದ್ಮಿ ಆರೋಪ
ಅರವಿಂದ್ ಕೇಜ್ರಿವಾಲ್
Follow us
ಸುಷ್ಮಾ ಚಕ್ರೆ
|

Updated on: Jun 03, 2024 | 9:59 PM

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ಸುಪ್ರೀಂ ಕೋರ್ಟ್ (Supreme Court) ನೀಡಿದ್ದ ಮಧ್ಯಂತರ ಜಾಮೀನು ಮುಗಿದ ಹಿನ್ನೆಲೆಯಲ್ಲಿ ಅವರು ಭಾನುವಾರ ತಿಹಾರ್ ಜೈಲಿನಲ್ಲಿ ಶರಣಾಗಿದ್ದಾರೆ. ಮಧ್ಯಂತರ ಜಾಮೀನು ಮುಗಿದ ನಂತರ ತಿಹಾರ್ ಜೈಲಿನಲ್ಲಿರುವ (Tihar Jail)  ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಕಿರುಕುಳ ನೀಡುತ್ತಿದೆ ಎಂದು ದೆಹಲಿ ಸಚಿವೆ ಅತಿಶಿ ಆರೋಪಿಸಿದ್ದಾರೆ.

ಅರವಿಂದ ಕೇಜ್ರಿವಾಲ್ ಅವರನ್ನು ಬಿಜೆಪಿಯವರು ನಕಲಿ ಪ್ರಕರಣದಲ್ಲಿ ಬಂಧಿಸಿದ್ದಾರೆ. ನಿನ್ನೆ ಅರವಿಂದ್ ಕೇಜ್ರಿವಾಲ್ ಶರಣಾಗಿ ತಿಹಾರ್ ಜೈಲಿಗೆ ಹೋಗಿದ್ದರು. ಆದರೆ ಬಿಜೆಪಿ ಆಡಳಿತದ ಕೇಂದ್ರ ಸರ್ಕಾರಕ್ಕೆ ಇನ್ನೂ ನೆಮ್ಮದಿ ಸಿಕ್ಕಿಲ್ಲ. ಅರವಿಂದ್ ಕೇಜ್ರಿವಾಲ್‌ಗೆ ಕಿರುಕುಳ ನೀಡುವುದನ್ನು ಬಿಜೆಪಿ ಬಿಡುತ್ತಿಲ್ಲ. ಕೂಲರ್ ಕೂಡ ನೀಡದ ಸೆಲ್‌ನಲ್ಲಿ ಅವರನ್ನು ಇರಿಸಲಾಗಿದೆ ಎಂದು ಸಚಿವೆ ಅತಿಶಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನಿಗೆ ಇಡಿ ವಿರೋಧ, ಜೂನ್ 5 ರಂದು ಮುಂದಿನ ವಿಚಾರಣೆ

ದೆಹಲಿಯಲ್ಲಿ ತಾಪಮಾನವು 48 ಡಿಗ್ರಿ, 50 ಡಿಗ್ರಿ ಸೆಲ್ಸಿಯಸ್ ತಲುಪುತ್ತಿರುವ ಸಮಯದಲ್ಲಿ ತಿಹಾರ್ ಜೈಲಿನಲ್ಲಿರುವ ಕುಖ್ಯಾತ ಕ್ರಿಮಿನಲ್‌ಗಳಿಗೆ ಕೂಲರ್‌ಗಳನ್ನು ನೀಡಲಾಗುತ್ತಿದೆ. ಆದರೆ ದೆಹಲಿಯ ಮುಖ್ಯಮಂತ್ರಿಯಾಗಿರುವ ಅರವಿಂದ್ ಕೇಜ್ರಿವಾಲ್‌ಗೆ ಈ ಬಿಸಿಲಿನ ಶಾಖದಲ್ಲಿಯೂ ಕೂಲರ್ ನೀಡಿಲ್ಲ. ಇದಕ್ಕೆ ಬಿಜೆಪಿ ನಾಯಕರು ಹಾಗೂ ಅವರ ಲೆಫ್ಟಿನೆಂಟ್ ಗವರ್ನರ್ ಸಕ್ಸೇನಾ ಉತ್ತರಿಸಬೇಕು. ಇದು ಅವರು ಎಷ್ಟು ಕೆಳ ಮಟ್ಟಕ್ಕೆ ಇಳಿದು ರಾಜಕೀಯ ಮಾಡುತ್ತಿದ್ದಾರೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಅವರು ಟೀಕಿಸಿದ್ದಾರೆ.

ಅತಿಶಿ ಆರೋಪಕ್ಕೆ ತಿಹಾರ್ ಜೈಲಿನ ಹಿರಿಯ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದು, “ಅನಾರೋಗ್ಯಕ್ಕೆ ಒಳಗಾಗಿರುವ ಕೈದಿಗಳಿಗೆ ಕೂಲರ್‌ಗಳನ್ನು ನೀಡಲಾಗುತ್ತದೆ. ನ್ಯಾಯಾಲಯವು ಕೂಲರ್ ನೀಡಲು ಆದೇಶಿಸಿದರೆ ನಾವು ನೀಡುತ್ತೇವೆ.” ಎಂದಿದ್ದಾರೆ.

ಭಾನುವಾರದ ವೈದ್ಯಕೀಯ ಪರೀಕ್ಷೆಯ ವೇಳೆ ಆಮ್ ಆದ್ಮಿ ಪಕ್ಷದ ಸಂಚಾಲಕನ ತೂಕವನ್ನು 3 ಯಂತ್ರಗಳಲ್ಲಿ ಅಳೆಯಲಾಗಿದ್ದು, ಅದು ವಿಭಿನ್ನ ತೂಕವನ್ನು ತೋರಿಸುತ್ತಿತ್ತು ಎಂದು ಅತಿಶಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಮಧ್ಯಂತರ ಜಾಮೀನು ಅವಧಿ ಅಂತ್ಯ, ಮತ್ತೆ ತಿಹಾರ್​ ಜೈಲಿಗೆ ತೆರಳಲಿದ್ದಾರೆ ಕೇಜ್ರಿವಾಲ್, ಪಕ್ಷದ ನಾಯಕರಿಗೆ ನೀಡಿದ ಸಂದೇಶವೇನು?

“ಅರವಿಂದ್ ಕೇಜ್ರಿವಾಲ್ ಅವರ ತೂಕ 61 ಕೆಜಿ ಎಂದು ಕಂಡುಬಂದಿದೆ. ತಿಹಾರ್ ಅಧಿಕಾರಿಗಳು ಮತ್ತೊಂದು ಯಂತ್ರವನ್ನು ಬಳಸಿದರು ಅದು ಅವರ ತೂಕವನ್ನು 64 ಕೆಜಿ ಎಂದು ತೋರಿಸಿದೆ. ಇದರಿಂದ ತೃಪ್ತರಾಗದ ತಿಹಾರ್ ಅಧಿಕಾರಿಗಳು ಮೂರನೇ ಯಂತ್ರವನ್ನು ಬಳಸಿದರು. ಅದು ಅವರ ತೂಕ 66.5 ಕೆಜಿ ಎಂದು ತೋರಿಸಿದೆ ಎಂದು ಅತಿಶಿ ಆರೋಪಿಸಿದ್ದಾರೆ.

“ಮಾರ್ಚ್ 21ರಂದು ಇಡಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದಾಗ ಅವರ ತೂಕ 70 ಕೆಜಿ ಮತ್ತು ಸೋಮವಾರ ಶರಣಾಗುವ ಮೊದಲು ಮನೆಯಲ್ಲಿ ತೂಕ ಮಾಡಿದಾಗ ಅದು 63 ಕೆಜಿಗೆ ಇಳಿದಿದೆ. ಒಟ್ಟು 7 ಕೆಜಿ ಇಳಿಕೆಯಾಗಿದೆ. ಇದು ಗಂಭೀರ ವಿಷಯವಾಗಿದೆ. ವೈದ್ಯಕೀಯ ಪರೀಕ್ಷೆಗಾಗಿ ಅವರ ಜಾಮೀನು ಮುಂದೂಡಲು ಮನವಿ ಮಾಡಲಾಗಿತ್ತು. ಆದರೆ ಇದನ್ನು ಇಡಿ ವಿರೋಧಿಸಿದೆ ಎಂದು ಸಚಿವರು ಹೇಳಿದ್ದಾರೆ.

“ಕೇಜ್ರಿವಾಲ್ ಅವರ ಬಿಪಿ 120/76 ಅನ್ನು ಅಳೆಯಲಾಗಿದೆ ಮತ್ತು ಸೋಮವಾರ ಶುಗರ್ ಮಟ್ಟವು 120 ರಷ್ಟಿತ್ತು. ಅವರಿಗೆ ದಿನಕ್ಕೆ 2 ಬಾರಿ ಇನ್ಸುಲಿನ್ ನೀಡಲಾಗುತ್ತದೆ. ಜೈಲಿನಲ್ಲಿ ಇಬ್ಬರು ವೈದ್ಯರಿಂದ ನಿಯಮಿತ ಮೇಲ್ವಿಚಾರಣೆ ಮಾಡಲಾಗುತ್ತಿದೆ” ಎಂದು ತಿಹಾರ್ ಜೈಲಿನ ಅಧಿಕಾರಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ