ಸ್ವಾತಿ ಮಲಿವಾಲ್ ಮೇಲೆ ದೌರ್ಜನ್ಯ; ಬಿಭವ್ ಕುಮಾರ್​​ಗೆ ಮಹಿಳಾ ಆಯೋಗದಿಂದ ಸಮನ್ಸ್

ಅರವಿಂದ್ ಕೇಜ್ರಿವಾಲ್ ಅವರ ಮನೆಯಲ್ಲಿ ತನ್ನ ಮೇಲೆ ದೌರ್ಜನ್ಯ ನಡೆದಿದೆ ಎಂದು ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಆರೋಪಿಸಿದ್ದರು. ಇದನ್ನು ಆಮ್ ಆದ್ಮಿ ಪಕ್ಷ ಕೂಡ ಒಪ್ಪಿಕೊಂಡಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿತ್ತು.

ಸ್ವಾತಿ ಮಲಿವಾಲ್ ಮೇಲೆ ದೌರ್ಜನ್ಯ; ಬಿಭವ್ ಕುಮಾರ್​​ಗೆ ಮಹಿಳಾ ಆಯೋಗದಿಂದ ಸಮನ್ಸ್
ಬಿಭವ್ ಕುಮಾರ್
Follow us
ಸುಷ್ಮಾ ಚಕ್ರೆ
|

Updated on:May 16, 2024 | 4:03 PM

ನವದೆಹಲಿ: ರಾಜ್ಯಸಭಾ ಸದಸ್ಯೆ ಮತ್ತು ದೆಹಲಿ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಸ್ವಾತಿ ಮಲಿವಾಲ್ (Swati Maliwal) ಅವರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಸಹಾಯಕ ಬಿಭವ್ ಕುಮಾರ್ (Bibhav Kumar) ಅವರಿಗೆ ರಾಷ್ಟ್ರೀಯ ಮಹಿಳಾ ಆಯೋಗವು ಸಮನ್ಸ್ ನೀಡಿದೆ. ಈ ಪ್ರಕರಣವನ್ನು ಸ್ವಯಂಪ್ರೇರಿತವಾಗಿ ತೆಗೆದುಕೊಂಡ ಮಹಿಳಾ ಆಯೋಗ ಬಿಭವ್ ಕುಮಾರ್ ಅವರನ್ನು ಮೇ 17ರಂದು ಬೆಳಿಗ್ಗೆ 11 ಗಂಟೆಗೆ ತನ್ನ ಮುಂದೆ ಹಾಜರಾಗುವಂತೆ ಸೂಚಿಸಿದೆ.

ರಾಷ್ಟ್ರೀಯ ಮಹಿಳಾ ಆಯೋಗ ಬಿಭವ್ ಕುಮಾರ್‌ಗೆ ಬರೆದ ಪತ್ರದಲ್ಲಿ, “ಅರವಿಂದ್ ಕೇಜ್ರಿವಾಲ್ ಅವರ ಪಿಎ ತನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಸ್ವಾತಿ ಮಲಿವಾಲ್ ಆರೋಪಿಸಿದ್ದಾರೆ” ಎಂಬ ಶೀರ್ಷಿಕೆಯ ಮಾಧ್ಯಮ ವರದಿಯನ್ನು ರಾಷ್ಟ್ರೀಯ ಮಹಿಳಾ ಆಯೋಗವು ಸ್ವಯಂಪ್ರೇರಿತವಾಗಿ ಗುರುತಿಸಿದೆ. ಈ ಹೇಳಿಕೆಯನ್ನು ಗಮನದಲ್ಲಿಟ್ಟುಕೊಂಡು ಆಯೋಗವು ಮೇ 17ರಂದು ಬೆಳಿಗ್ಗೆ 11 ಗಂಟೆಗೆ ವಿಚಾರಣೆಯನ್ನು ನಿಗದಿಪಡಿಸಿದೆ. ಇದರಲ್ಲಿ ನೀವು ಆಯೋಗದ ಮುಂದೆ ವೈಯಕ್ತಿಕವಾಗಿ ಹಾಜರಾಗಬೇಕಾಗುತ್ತದೆ” ಎಂದು ತಿಳಿಸಿದೆ.

ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್ ಮನೆಯಲ್ಲಿ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ?

ಸ್ವಾತಿ ಮಲಿವಾಲ್ ಮೇಲೆ ಕೇಜ್ರಿವಾಲ್ ಅವರ ಪಿಎ ಬಿಭವ್ ಕುಮಾರ್ ದೌರ್ಜನ್ಯ ಎಸಗಿರುವುದು ಸತ್ಯವೆಂದು ಆಮ್ ಆದ್ಮಿ ಪಕ್ಷ ಒಪ್ಪಿಕೊಂಡಿತ್ತು. ಇದಾದ ನಂತರವೂ ಬುಧವಾರ, ಬಿಭವ್ ಕುಮಾರ್ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ಲಕ್ನೋ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು.

ಸೋಮವಾರ ಎಎಪಿಯ ಹಿರಿಯ ನಾಯಕಿ ಮತ್ತು ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ ತೆರಳಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ ತನ್ನ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ಹೇಳಿದ್ದರು. ಆದರೆ, ಆಕೆ ಅಧಿಕೃತವಾಗಿ ದೂರು ದಾಖಲಿಸಿರಲಿಲ್ಲ. ಸೋಮವಾರ ನಡೆದ ಮುಜುಗರದ ವಿವಾದದ ಬಗ್ಗೆ ಸ್ವಾತಿ ಮಲಿವಾಲ್ ಅಥವಾ ಆಮ್ ಆದ್ಮಿ ಪಕ್ಷ (ಎಎಪಿ) ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.

ಇದನ್ನೂ ಓದಿ: ಸ್ವಾತಿ ಮಲಿವಾಲ್ ಜೊತೆ ಕೇಜ್ರಿವಾಲ್ ಪಿಎ ಅನುಚಿತ ವರ್ತನೆ; ಒಪ್ಪಿಕೊಂಡ ಆಮ್ ಆದ್ಮಿ ಪಾರ್ಟಿ

ದೆಹಲಿಯಲ್ಲಿರುವ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಲು ಸ್ವಾತಿ ಮಲಿವಾಲ್ ಕಾಯುತ್ತಿದ್ದಾಗ ಕೇಜ್ರಿವಾಲ್ ಅವರ ಸಹಾಯಕ ಸ್ವಾತಿ ಮಲಿವಾಲ್ ಅವರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಎಎಪಿ ಸಂಸದ ಸಂಜಯ್ ಸಿಂಗ್ ಇಂದು ಒಪ್ಪಿಕೊಂಡಿದ್ದರು. ಡ್ರಾಯಿಂಗ್ ರೂಮಿನಲ್ಲಿ ಅವರಿಗಾಗಿ ಕಾಯುತ್ತಿದ್ದಾಗ ಬಿಭವ್ ಕುಮಾರ್ ಸ್ವಾತಿಯವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಸಿಎಂ ಈ ವಿಷಯ ತಿಳಿದುಕೊಂಡಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:16 pm, Thu, 16 May 24

ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು