ಸ್ವಾತಿ ಮಲಿವಾಲ್ ಜೊತೆ ಕೇಜ್ರಿವಾಲ್ ಪಿಎ ಅನುಚಿತ ವರ್ತನೆ; ಒಪ್ಪಿಕೊಂಡ ಆಮ್ ಆದ್ಮಿ ಪಾರ್ಟಿ
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಬವ್ ಕುಮಾರ್ ಡ್ರಾಯಿಂಗ್ ರೂಮ್‌ನಲ್ಲಿ ರಾಜ್ಯ ಸಭಾ ಸದಸ್ಯೆ ಸ್ವಾತಿ ಮಲಿವಾಲ್ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಎಎಪಿ ಒಪ್ಪಿಕೊಂಡಿದೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿಯೂ ಆಮ್ ಆದ್ಮಿ ಪಕ್ಷ ತಿಳಿಸಿದೆ.
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಮನೆಯೊಳಗೆ ತನ್ನ ಮೇಲೆ ದೌರ್ಜನ್ಯ ನಡೆದಿದೆ ಎಂದು ಆರೋಪಿಸಿ ಡಿಸಿಡಬ್ಲ್ಯು ಮಾಜಿ ಮುಖ್ಯಸ್ಥೆ ಹಾಗೂ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ (Swati Maliwal) ದೆಹಲಿ ಪೊಲೀಸರಿಗೆ ದೂರು ನೀಡಿದ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷ (AAP) ಈ ಆರೋಪವನ್ನು ಒಪ್ಪಿಕೊಂಡಿದೆ. ಆಮ್ ಆದ್ಮಿ ಪಕ್ಷದ ಮುಖ್ಯಸ್ಥರ ಸಹಾಯಕ ಸ್ವಾತಿ ಮಲಿವಾಲ್ ಅವರೊಂದಿಗೆ “ಅನುಚಿತವಾಗಿ ವರ್ತಿಸಿದ್ದಾರೆ” ಎಂದು ಆಪ್ ಒಪ್ಪಿಕೊಂಡಿದೆ. ಕೇಜ್ರಿವಾಲ್ ಈ ವಿಷಯವನ್ನು ಗಮನಿಸಿದ್ದಾರೆ. ತಪ್ಪು ಮಾಡಿದ ವ್ಯಕ್ತಿಯ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಆಮ್ ಆದ್ಮಿ ಪಕ್ಷ ಹೇಳಿದೆ.
ಎಎಪಿಯ ಹಿರಿಯ ನಾಯಕಿ ಮತ್ತು ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಸೋಮವಾರ ಬೆಳಗ್ಗೆ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ ತೆರಳಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ ತನ್ನ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ಹೇಳಿದ್ದಾರೆ. ಆದರೆ, ಆಕೆ ಅಧಿಕೃತವಾಗಿ ದೂರು ದಾಖಲಿಸಿಲ್ಲ. ಸೋಮವಾರ ನಡೆದ ಮುಜುಗರದ ವಿವಾದದ ಬಗ್ಗೆ ಸ್ವಾತಿ ಮಲಿವಾಲ್ ಅಥವಾ ಆಮ್ ಆದ್ಮಿ ಪಕ್ಷ (ಎಎಪಿ) ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.
ಇದನ್ನೂ ಓದಿ: ಭ್ರಷ್ಟಾಚಾರದ ಅನಭಿಷಿಕ್ತ ದೊರೆ; ಬಿಜೆಪಿಯಿಂದ ಕೇಜ್ರಿವಾಲ್ ಫಿಲ್ಮಿ ಪೋಸ್ಟರ್ ರಿಲೀಸ್
ದೆಹಲಿಯಲ್ಲಿರುವ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಲು ಸ್ವಾತಿ ಮಲಿವಾಲ್ ಕಾಯುತ್ತಿದ್ದಾಗ ಕೇಜ್ರಿವಾಲ್ ಅವರ ಸಹಾಯಕ ಸ್ವಾತಿ ಮಲಿವಾಲ್ ಅವರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಎಎಪಿ ಸಂಸದ ಸಂಜಯ್ ಸಿಂಗ್ ಇಂದು ಒಪ್ಪಿಕೊಂಡಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರ ಡ್ರಾಯಿಂಗ್ ರೂಂನಲ್ಲಿ ಈ ದುರ್ವರ್ತನೆ ನಡೆದಿದೆ ಎಂದು ಸಂಜಯ್ ಸಿಂಗ್ ಹೇಳಿದ್ದಾರೆ.
VIDEO | “Yesterday, a condemnable incident took place. Swati Maliwal had gone to Arvind Kejriwal’s residence to meet him. While she was waiting for him in the drawing room, Vaibhav Kumar allegedly misbehaved with her. The CM has taken cognisance of the matter, and he will take… pic.twitter.com/8VlqkwdKCK
— Press Trust of India (@PTI_News) May 14, 2024
ನಿನ್ನೆ ಖಂಡನೀಯ ಘಟನೆಯೊಂದು ನಡೆದಿದೆ. ಸ್ವಾತಿ ಮಲಿವಾಲ್ ಅವರು ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಲು ಕೇಜ್ರಿವಾಲ್ ನಿವಾಸಕ್ಕೆ ತೆರಳಿದ್ದರು. ಡ್ರಾಯಿಂಗ್ ರೂಮಿನಲ್ಲಿ ಅವರಿಗಾಗಿ ಕಾಯುತ್ತಿದ್ದಾಗ ಬಿಭವ್ ಕುಮಾರ್ ಸ್ವಾತಿಯವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಸಿಎಂ ಈ ವಿಷಯ ತಿಳಿದುಕೊಂಡಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪಿಟಿಐಗೆ ತಿಳಿಸಿದ್ದಾರೆ.
ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್ ಮನೆಯಲ್ಲಿ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ?
ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಮಾಜಿ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ಪಿಸಿಆರ್ ಸಂಖ್ಯೆಗೆ ಬೆಳಿಗ್ಗೆ 9.34 ಕ್ಕೆ ಕರೆ ಮಾಡಿ ಬಿಭವ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವರದಿ ಮಾಡಿದ್ದಾರೆ ಎಂದು ದೆಹಲಿ ಪೊಲೀಸರು ಸೋಮವಾರ ತಿಳಿಸಿದ್ದರು. ದೌರ್ಜನ್ಯ ಪ್ರಕರಣಗಳಲ್ಲಿ ವೈದ್ಯಕೀಯ ಪರೀಕ್ಷೆ ಕಡ್ಡಾಯ ಎಂದು ತಿಳಿಸಿದ ನಂತರ ಆಕೆ ತೆರಳಿದ್ದಾಳೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:34 pm, Tue, 14 May 24