AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಯಾಮಿಲಿ ವೈದ್ಯರ ಜೊತೆ ಕೇಜ್ರಿವಾಲ್ ನಿತ್ಯ ಸಮಾಲೋಚನೆಯ ಮನವಿಗೆ ಕೋರ್ಟ್ ನಕಾರ

Delhi Court rejects Arvind Kejriwal's Plea: ಏಪ್ರಿಲ್ 1ರಿಂದ ತಿಹಾರ್ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಮ್ಮ ಅನಾರೋಗ್ಯ ಸ್ಥಿತಿ ಹಿನ್ನೆಲೆಯಲ್ಲಿ ಫ್ಯಾಮಿಲಿ ಡಾಕ್ಟರ್ ಜೊತೆ ದಿನವೂ ವಿಡಿಯೋ ಕಾಲ್ ಮೂಲಕ ಸಮಾಲೋಚನೆ ನಡೆಸಲು ಅನುಮತಿ ನೀಡಬೇಕು ಎಂದು ಕೋರಿದ್ದರು. ಸಿಎಂ ಮನವಿಯನ್ನು ದೆಹಲಿ ಕೋರ್ಟ್ ತಿರಸ್ಕರಿಸಿದೆ. ಆದರೆ, ಕೇಜ್ರಿವಾಲ್ ಅವರಿಗೆ ಚಿಕಿತ್ಸೆಗೆ ವ್ಯವಸ್ಥೆ ನೀಡಬೇಕು. ಅದಕ್ಕಾಗಿ ಒಂದು ವೈದ್ಯಕೀಯ ಮಂಡಳಿ ರಚಿಸಬೇಕು ಎಂದು ಏಮ್ಸ್ ಆಸ್ಪತ್ರೆಗೆ ಕೋರ್ಟ್ ಆದೇಶಿಸಿದೆ.

ಫ್ಯಾಮಿಲಿ ವೈದ್ಯರ ಜೊತೆ ಕೇಜ್ರಿವಾಲ್ ನಿತ್ಯ ಸಮಾಲೋಚನೆಯ ಮನವಿಗೆ ಕೋರ್ಟ್ ನಕಾರ
ಅರವಿಂದ್ ಕೇಜ್ರಿವಾಲ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 22, 2024 | 6:33 PM

Share

ನವದೆಹಲಿ, ಏಪ್ರಿಲ್ 22: ತನ್ನ ಕುಟುಂಬ ವೈದ್ಯರ ಜೊತೆ ನಿತ್ಯವೂ ವಿಡಿಯೋ ಕಾಲ್ (video consultation) ಮೂಲಕ ಸಮಾಲೋಚನೆ ನಡೆಸಲು ಅವಕಾಶ ಕೊಡಬೇಕು ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಮಾಡಿಕೊಂಡ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಆದರೆ, ಕೇಜ್ರಿವಾಲ್ ಅವರಿಗೆ ಅಗತ್ಯ ಇರುವ ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸಬೇಕು ಎಂದು ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ (Kaveri Baweja) ಅವರು ಏಮ್ಸ್ ಆಸ್ಪತ್ರೆಗೆ (AIIMS hospital) ಆದೇಶಿಸಿದ್ದಾರೆ. ದೆಹಲಿ ಮುಖ್ಯಮಂತ್ರಿಗಳ ಬ್ಲಡ್ ಶುಗರ್ ಮಟ್ಟ ಕಡಿಮೆ ಮಾಡಲು ಇನ್ಸುಲಿನ್ ಅಗತ್ಯ ಇದೆಯಾ ಎಂಬುದು ಅವಲೋಕಿಸಲು ಮತ್ತು ಅವರ ಇತರ ವೈದ್ಯಕೀಯ ಸಮಸ್ಯೆಗಳಿಗೆ ಯಾವ ಚಿಕಿತ್ಸೆ ಕೊಡಬಹುದು ಎಂಬುದನ್ನು ನಿರ್ಧರಿಸಲು ದೆಹಲಿಯ ಏಮ್ಸ್ ಆಸ್ಪತ್ರೆಯು ಒಂದು ವೈದ್ಯಕೀಯ ಮಂಡಳಿಯನ್ನು ರಚಿಸಬೇಕು ಎಂದು ಜಡ್ಜ್ ತಿಳಿಸಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮದ್ಯ ನೀತಿ ಹಗರಣ ಸಂಬಂಧ ಇಡಿಯಿಂದ ಬಂಧಿತರಾಗಿ ಏಪ್ರಿಲ್ 1ರಿಂದ ತಿಹಾರ್ ಜೈಲಿನಲ್ಲಿದ್ದಾರೆ. ಇಲ್ಲಿ ಅವರಿಗೆ ಸರಿಯಾಗಿ ವೈದ್ಯಕೀಯ ಚಿಕಿತ್ಸೆ ಸಿಗುತ್ತಿಲ್ಲ. ಅವರನ್ನು ಕೊಲ್ಲುವ ಹುನ್ನಾರ ನಡೆದಿದೆ ಎಂಬುದು ಎಎಪಿ ಪಕ್ಷ ಮಾಡುತ್ತಿರುವ ಆರೋಪ.

ಇದನ್ನೂ ಓದಿ: ಸೂರತ್​ನಲ್ಲಿ ಚುನಾವಣೆಗೂ ಮುನ್ನವೇ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ

ಅರವಿಂದ್ ಕೇಜ್ರಿವಾಲ್ ಅವರು ಮಧುಮೇಹ ರೋಗಿ. ಜೈಲಿನಲ್ಲಿ ತಮ್ಮ ಶುಗರ್ ಲೆವೆಲ್ ಆತಂಕಕಾರಿ ಎನಿಸುವಷ್ಟು ಹೆಚ್ಚುತ್ತಿದೆ. ಫ್ಯಾಮಿಲಿ ಡಾಕ್ಟರ್ ಜೊತೆ ಸಮಾಲೋಚನೆಗೂ ಅನುಮತಿ ನೀಡುತ್ತಿಲ್ಲ. ಇನ್ಸುಲಿನ್ ಕೊಡುತ್ತಲೂ ಇಲ್ಲ ಎಂಬುದು ಕೇಜ್ರಿವಾಲ್ ಅವರ ದೂರಾಗಿದೆ.

ಜೈಲಿನಲ್ಲಿ ಅರವಿಂದ್ ಕೇಜ್ರಿವಾಲ್ ಅವರು ಮಾವಿನ ಹಣ್ಣು ತಿಂದು ಸಕ್ಕರೆ ಮಟ್ಟ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಇದು ಜಾಮೀನು ಪಡೆಯಲು ಅವರು ಮಾಡುತ್ತಿರುವ ತಂತ್ರ ಎಂದು ಕಳೆದ ವಾರ ಕೋರ್ಟ್ ವಿಚಾರಣೆ ವೇಳೆ ಇಡಿ ವಾದಿಸಿತ್ತು.

ಇದನ್ನೂ ಓದಿ: ನಿಮ್ಮ ಆಸ್ತಿಪಾಸ್ತಿ ಕಬಳಿಸ್ತಾರೆ ಹುಷಾರ್..! ಕಾಂಗ್ರೆಸ್​ನ ಸಂಪತ್ತು ಮರುಹಂಚಿಕೆ ಯೋಜನೆ ವಿರುದ್ಧ ಪ್ರಧಾನಿ ಗುಡುಗು

ಅರವಿಂದ್ ಕೇಜ್ರಿವಾಲ್ ಬಂಧಿಯಾಗಿರುವ ತಿಹಾರ್ ಜೈಲಿನಲ್ಲಿ ಅವರಿಗೆ ಏಮ್ಸ್ ಆಸ್ಪತ್ರೆಯ ಹಿರಿಯ ವೈದ್ಯರೊಂದಿಗೆ ಸಮಾಲೋಚನೆ ನಡೆಸಲು ಅವಕಾಶ ಕೊಡಲಾಗಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಈ ಸಂವಾದದಲ್ಲಿ ಅರವಿಂದ್ ಕೇಜ್ರಿವಾಲ್ ಅವರು ಇನ್ಸುಲಿನ್ ವಿಚಾರವನ್ನು ಪ್ರಸ್ತಾಪಿಸಲೇ ಇಲ್ಲ. ಅಥವಾ ವೈದ್ಯರೂ ಕೂಡ ಇದರ ಅಗತ್ಯ ಇದೆ ಎಂದು ಹೇಳಲಿಲ್ಲ ಎಂಬುದು ತಿಹಾರ್ ಜೈಲಧಿಕಾರಿಗಳು ಹೇಳುತ್ತಿರುವ ಮಾತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ