AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arvind Kejriwal: ದೆಹಲಿ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಗೆ ನಿರ್ಣಯ ಮಂಡಿಸಿದ ಅರವಿಂದ್​​​ ಕೇಜ್ರಿವಾಲ್

ದೆಹಲಿ ಸಿಎಂ ಅರವಿಂದ್​​​ ಕೇಜ್ರಿವಾಲ್ ಅವರು ಇಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ತಮ್ಮ ಸರ್ಕಾರದಕ್ಕೆ ಸಂಖ್ಯಾಬಲ ಇಲ್ಲ ಎಂಬ ಆರೋಪಗಳನ್ನು ಮಾಡಲಾಗುತ್ತಿದೆ. ನಮ್ಮ ಶಾಸಕರು ಬೇರೆ ಪಕ್ಷಗಳಿಗೆ ಹೋಗುತ್ತಿದ್ದಾರೆ ಎಂದು ಆರೋಪಗಳನ್ನು ಮಾಡಲಾಗುತ್ತಿದೆ. ಆದರೆ ನಮ್ಮ ಶಾಸಕರು ನಮ್ಮ ಜತೆಗೆ ಇದ್ದರೆ. ಇದನ್ನು ಜನರ ಮುಂದೆ ಸಾಬೀತು ಪಡೆಸಬೇಕಿದೆ ಅದಕ್ಕಾಗಿ ಇಂದು ದೆಹಲಿ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಗೆ ನಿರ್ಣಯ ಮಂಡಿಸಿದ್ದಾರೆ.

Arvind Kejriwal: ದೆಹಲಿ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಗೆ ನಿರ್ಣಯ ಮಂಡಿಸಿದ ಅರವಿಂದ್​​​ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
ಅಕ್ಷಯ್​ ಪಲ್ಲಮಜಲು​​
|

Updated on:Feb 16, 2024 | 5:13 PM

Share

ದೆಹಲಿ, ಫೆ.16: ದೆಹಲಿ ಮುಖ್ಯಮಂತ್ರಿ ಅರವಿಂದ್​​​ ಕೇಜ್ರಿವಾಲ್​​​​ (Arvind Kejriwal) ಅವರು ಇಂದು ವಿಧಾನಸಭೆಯಲ್ಲಿ ವಿಶ್ವಾಸ ಮತ ಯಾಚನೆಗೆ ನಿರ್ಣಯ ಮಂಡಿಸಿದ್ದಾರೆ. ನಾಳೆ ಸದನದ ಕಲಾಪ ನಡೆಯಲಿದ್ದು, ಪ್ರಸ್ತಾವನೆಯನ್ನು ಚರ್ಚೆಗೆ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ. ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ಸರ್ಕಾರದ ಮೇಲೆ ಒಂದಲ್ಲ ಒಂದು ರೀತಿ ಆರೋಪಗಳನ್ನು ಮಾಡುತ್ತಿದ್ದಾರೆ. ನಮ್ಮ ಸದಸ್ಯರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ. ಇದರ ನಡುವೆ ನಮ್ಮ ಶಾಸಕರು ಹಾಗೂ ನಾಯಕರು ಎಎಪಿ ಪಕ್ಷವನ್ನು ಬಿಟ್ಟು ಬೇರೆ ಪಕ್ಷ ಹೋಗುತ್ತಿದ್ದಾರೆ ಎಂಬ ಸುಳ್ಳು ಸುದ್ದಿಗಳನ್ನು ಮಾಡಲಾಗುತ್ತದೆ. ದೆಹಲಿ ಸರ್ಕಾರದಲ್ಲಿ ಸಂಖ್ಯಾ ಬಲ ಇಲ್ಲ ಎಂದು ಹೇಳುತ್ತಿದ್ದಾರೆ. ನಮ್ಮ ಶಾಸಕರು ನಮ್ಮಲ್ಲಿಯೇ ಇದ್ದರೆ, ಅವರು ಎಲ್ಲಿಯು ಹೋಗಿಲ್ಲ. ಇದನ್ನು ನಾವು ಜನರ ಮುಂದೆ ಸಾಬೀತು ಮಾಡಬೇಕಿದೆ. ಈ ಕಾರಣಕ್ಕೆ ನಾನು ವಿಶ್ವಾಸ ನಿರ್ಣಯವನ್ನು ಮಂಡಿಸುತ್ತೇನೆ ಎಂದು ಹೇಳಿದ್ದಾರೆ.

ಶುಕ್ರವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸುವುದಾಗಿ ಅರವಿಂದ್ ಕೇಜ್ರಿವಾಲ್ ಈ ಹಿಂದೆ ಹೇಳಿದ್ದರು. ಭಾರತೀಯ ಜನತಾ ಪಕ್ಷವು (ಬಿಜೆಪಿ) ಆಮ್ ಆದ್ಮಿ ಪಕ್ಷದ ಶಾಸಕರನ್ನು ಭೇಟಿ ಮಾಡಿ ತಮ್ಮ ಬಳಿ ಸೆಳೆಯುತ್ತಿದ್ದಾರೆ ಮತ್ತು ಅವರು ಸರ್ಕಾರವನ್ನು ಉರುಳಿಸಲು ಪ್ರಯತ್ನಿಸಿದ್ದರೆ ಎಂಬ ಆರೋಪಗಳು ಕೆಲವು ದಿನಗಳ ಹಿಂದೆ ಬರುತ್ತಿತ್ತು. ಈ ಕಾರಣಕ್ಕೆ ನಾನು ಈ ಕ್ರಮವನ್ನು ಅನುಸರಿಸಬೇಕಿದೆ ಎಂದು ಅವರು ವಿಧಾನಸಭೆಯಲ್ಲಿ ಹೇಳಿದ್ದಾರೆ.

ಇನ್ನು ದೆಹಲಿ ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಕೇಜ್ರಿವಾಲ್‌ಗೆ ಪದೇ ಪದೇ ಸಮನ್ಸ್ ನೀಡುವ ವಿಷಯವನ್ನು ಕೂಡ ಈ ಸಭೆಯಲ್ಲಿ ಪ್ರಸ್ತಾಪಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಕೇಜ್ರಿವಾಲ್‌ಗೆ ಅವರಿಗೆ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಆರು ಬಾರಿ ಸಮನ್ಸ್​​ ನೀಡಿದೆ. ಇಂತಹ ಅನೇಕ ಸಮನ್ಸ್​​ಗಳನ್ನು ನೀಡಿ ಮುಖ್ಯಮಂತ್ರಿಗಳನ್ನು ಬಂಧಿಸುವ ಮೂಲಕ ದೆಹಲಿಯಲ್ಲಿ ಸರ್ಕಾರವನ್ನು ಉರುಳಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಎಎಪಿ ಹೇಳಿದೆ.

ಇದನ್ನೂ ಓದಿ: ಕೇಜ್ರಿವಾಲ್,ಸಂಜಯ್ ಸಿಂಗ್ ವಿರುದ್ಧದ ಸಮನ್ಸ್ ರದ್ದತಿಗೆ ಹೈಕೋರ್ಟ್ ನಿರಾಕರಣೆ

ದೆಹಲಿ ವಿಧಾನಸಭೆ ಕಲಾಪ ಫೆ.15ರಂದು ಪ್ರಾರಂಭವಾಗಿದೆ. ಫೆ.21ರವರಗೆ ನಡೆಯಲಿದೆ. ಇದರ ಮಧ್ಯೆ ಹಣಕಾಸು ಸಚಿವ ಅತಿಶಿ ಅವರು 2024ರ ಬಜೆಟ್​​​​ ಕೂಡ ಮಂಡಿಸಲಿದ್ದಾರೆ ಎಂದು ಹೇಳಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:01 pm, Fri, 16 February 24

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!