Uttarakhand Glacier Burst ಸಂಕಷ್ಟದಲ್ಲಿರುವ ಉತ್ತರಾಖಂಡ್ ಜನರಿಗೆ ಯಾವುದೇ ಸಹಾಯ ಮಾಡಲು ಸಿದ್ಧ: ದೆಹಲಿ ಸಿಎಂ ಟ್ವೀಟ್
ಚಮೋಲಿಗೆ ಬಂದೊದಗಿದ ವಿಪತ್ತು ನಿಜಕ್ಕೂ ಆತಂಕಕಾರಿ. ಅಲ್ಲಿನ ಪ್ರತಿಯೊಬ್ಬರೂ ಸುರಕ್ಷಿತವಾಗಿರಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ನವದೆಹಲಿ: ಉತ್ತರಾಖಂಡ್ನ ಚಮೋಲಿ ಜಿಲ್ಲೆಯ ಜೋಶಿಮಠ್ ತಪೋವನ ಪ್ರದೇಶದಲ್ಲಿ ಇಂದು ಹಿಮಸ್ಫೋಟವಾದ ಪರಿಣಾಮ ಅಲ್ಲಿನ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಕ್ಷಣಾ ತಂಡಗಳು ಜನರನ್ನು ರಕ್ಷಿಸುವ ಕಾರ್ಯವನ್ನು ಭರದಿಂದ ಮಾಡುತ್ತಿವೆ. ಈ ಬೆನ್ನಲ್ಲೇ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿ, ಯಾವುದೇ ಸಹಾಯಕ್ಕೂ ನಮ್ಮ ಸರ್ಕಾರ ಸಿದ್ಧ ಎಂದಿದ್ದಾರೆ.
ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅರವಿಂದ್ ಕೇಜ್ರಿವಾಲ್, ಚಮೋಲಿಗೆ ಬಂದೊದಗಿದ ವಿಪತ್ತು ನಿಜಕ್ಕೂ ಆತಂಕಕಾರಿ. ಅಲ್ಲಿನ ಪ್ರತಿಯೊಬ್ಬರೂ ಸುರಕ್ಷಿತವಾಗಿರಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಅಲ್ಲಿನ ಜನರಿಗೆ ಅಗತ್ಯವಿರುವ ಎಲ್ಲ ರೀತಿಯ ಸಹಾಯ ಮಾಡಲೂ ದೆಹಲಿ ಸರ್ಕಾರ ಸಿದ್ಧವಿದೆ ಎಂದು ಹೇಳಿದ್ದಾರೆ. ಇನ್ನು ಗೃಹ ಸಚಿವ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿಯವರೂ ಸಹ ಉತ್ತರಾಖಂಡ್ ಹಿಮ ಕುಸಿತ ಪರಿಸ್ಥಿತಿಯ ಬಗ್ಗೆ ವರದಿ ಕೇಳಿದ್ದಾರೆ. ತಪೋವನ ಪ್ರದೇಶದಲ್ಲಿ ಭಾರತೀಯ ಸೇನೆ ಸೇರಿ ಅನೇಕ ರಕ್ಷಣಾ ಪಡೆಗಳು ಕಾರ್ಯಾಚರಣೆಯಲ್ಲಿ ತೊಡಗಿವೆ.
ಸಹಾಯವಾಣಿ ಪ್ರವಾಹಕ್ಕೆ ಸಿಲುಕಿರುವ ಜನರು ಸಹಾಯಕ್ಕಾಗಿ ವಿಪತ್ತು ನಿರ್ವಹಣಾ ಕೇಂದ್ರವನ್ನು ಸಂಪರ್ಕಿಸುವಂತೆ ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಸೂಚಿಸಿದ್ದಾರೆ. ವಿಪತ್ತು ನಿರ್ವಹಣಾ ಕೇಂದ್ರದ ಸಂಪರ್ಕ ಸಂಖ್ಯೆಗಳು: 1070 ಮತ್ತು 95574 44486.
चमोली ज़िले से आपदा की खबर बेहद चिंताजनक है, ईश्वर से सभी लोगों की सुरक्षा एवं कुशलता की प्रार्थना करता हूं। इस मुश्किल घड़ी में उत्तराखंड की जनता तक हर संभव मदद पहुंचाने के लिए दिल्ली सरकार तैयार है।
— Arvind Kejriwal (@ArvindKejriwal) February 7, 2021
Explainer | ಉತ್ತರಾಖಂಡ್ನಲ್ಲಿ ಹಠಾತ್ ಪ್ರವಾಹ: ಏನಿದು ಹಿಮಕುಸಿತ? ಹೇಗೆ ಸಂಭವಿಸುತ್ತೆ?
Published On - 5:32 pm, Sun, 7 February 21