AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arvind Kejriwal: ದೆಹಲಿ ಅಬಕಾರಿ ನೀತಿ ಪ್ರಕರಣ; ಸಿಎಂ ಅರವಿಂದ ಕೇಜ್ರಿವಾಲ್​ಗೆ ಸಿಬಿಐ ಸಮನ್ಸ್

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್​ಗೆ ಸಿಬಿಐ ಶುಕ್ರವಾರ ಸಮನ್ಸ್ ನೀಡಿದೆ ಎಂದು ಮೂಲಗಳು ತಿಳಿಸಿವೆ.

Arvind Kejriwal: ದೆಹಲಿ ಅಬಕಾರಿ ನೀತಿ ಪ್ರಕರಣ; ಸಿಎಂ ಅರವಿಂದ ಕೇಜ್ರಿವಾಲ್​ಗೆ ಸಿಬಿಐ ಸಮನ್ಸ್
ಅರವಿಂದ ಕೇಜ್ರಿವಾಲ್
ಗಣಪತಿ ಶರ್ಮಾ
|

Updated on:Apr 14, 2023 | 6:01 PM

Share

ಮುಖ್ಯಾಂಶಗಳು

  • ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್​ಗೂ ಸಂಕಷ್ಟ
  • ಭಾನುವಾರ ವಿಚಾರಣೆಗೆ ಹಾಜರಾಗುವಂತೆ ಕೇಜ್ರಿವಾಲ್​ಗೆ ಸಿಬಿಐ ನೋಟಿಸ್
  • ಅಬಕಾರಿ ನೀತಿ ರೂಪಿಸುವಲ್ಲಿ ಕೇಜ್ರಿವಾಲ್ ಸರ್ಕಾರ ಭಾರೀ ವಂಚನೆ ಎಸಗಿದೆ ಎಂದು ಸಿಬಿಐ ಆರೋಪ

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್​ಗೆ (Arvind Kejriwal) ಸಿಬಿಐ (CBI) ಶುಕ್ರವಾರ ಸಮನ್ಸ್ ನೀಡಿದೆ ಎಂದು ಮೂಲಗಳು ತಿಳಿಸಿವೆ. ಇದೇ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ, ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಲಾಗಿತ್ತು. ಭಾನುವಾರದ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ಕೇಜ್ರಿವಾಲ್​ಗೆ ಸಿಬಿಐ ಸೂಚಿಸಿದೆ ಎಂದು ಮೂಲಗಳು ಹೇಳಿವೆ. ಸದ್ಯ ಮನೀಶ್ ಸಿಸೋಡಿಯಾ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಏಪ್ರಿಲ್ 17ರ ವರೆಗೆ ಅವರು ನ್ಯಾಯಾಂಗ ಬಂಧನದಲ್ಲಿ ಇರಲಿದ್ದು, ನಂತರ ನ್ಯಾಯಾಲಯ ಏನು ಆಚದೇಶ ನೀಡಲಿದೆ ಎಂಬುದನ್ನು ಕಾದುನೋಡಬೇಕಿದೆ.

ಕೇಜ್ರಿವಾಲ್ ಸರ್ಕಾರ ಭಾರೀ ವಂಚನೆ ಎಸಗಿದೆ ಎಂದು ಸಿಬಿಐ ಆರೋಪಿಸಿದೆ. ಸಂಸ್ಥೆಯೊಂದರ ಪರವಾಗಿ ಅಬಕಾರಿ ನೀತಿ ರೂಪಿಸಲು ಲಂಚ ಪಡೆಯಲಾಗಿತ್ತು ಎಂದೂ ಸಿಬಿಐ ಆಪಾದಿಸಿದೆ. ಆದರೆ, ಎಎಪಿಯು ಈ ಆರೋಪಗಳನ್ನು ತಳ್ಳಿಹಾಕಿದ್ದು, ರಾಜಕೀಯ ಸೇಡಿನಿಂದ ಕೂಡಿದ ಕ್ರಮ ಎಂದು ದೂರಿದೆ. ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ಕೇಜ್ರಿವಾಲ್ ಅವರೇ ಹಗರಣದ ಮಾಸ್ಟರ್ ಮೈಂಡ್ ಎಂದು ಬಿಜೆಪಿ ಹಲವು ಬಾರಿ ಪ್ರತಿಪಾದಿಸಿದೆ. ಆದರೆ, ಈ ಆರೋಪಗಳನ್ನು ಕೇಜ್ರಿವಾಲ್ ಅಲ್ಲಗಳೆದಿದ್ದಾರೆ. ಇದೀಗ ಈ ಪ್ರಕರಣದಲ್ಲಿ ಸಿಬಿಐಯು ಕೇಜ್ರಿವಾಲ್​ಗೆ ಇದೇ ಮೊದಲ ಬಾರಿಗೆ ಸಮನ್ಸ್ ನೀಡಿದೆ.

ಇದನ್ನೂ ಓದಿ: ದಿಲ್ಲಿಯಲ್ಲಿ ಉಚಿತ ವಿದ್ಯುತ್ ನಿಂತುಹೋಯ್ತಂತೆ! ಕಾರಣವೇನು?

ಸಮನ್ಸ್​ ದೊರೆತ ಬೆನ್ನಲ್ಲೇ ಕೇಜ್ರಿವಾಲ್ ಅವರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಮ್ ಆದ್ಮಿ ಪಕ್ಷವನ್ನು ಚುನಾವಣಾ ಆಯೋಗವು ಅಧಿಕೃತವಾಗಿ ರಾಷ್ಟ್ರೀಯ ಪಕ್ಷವೆಂದು ಗುರುತಿಸಿದೆ. ಹೀಗಾಗಿ ಇನ್ನು ಮುಂದೆ ಎಲ್ಲಾ ಎಎಪಿ ನಾಯಕರು ಜೈಲಿಗೆ ಹೋಗಲು ಸಿದ್ಧರಾಗಿರಬೇಕು ಎಂದು ಕೇಜ್ರಿವಾಲ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಮಧ್ಯೆ, ಸಾರ್ವಜನಿಕ ಆಸ್ತಿ ವಿರೂಪಗೊಳಿಸುವಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಾ ಪೊಲೀಸರೂ ಕೇಜ್ರಿವಾಲ್​ಗೆ​ ಸಮನ್ಸ್ ನೀಡಿದ್ದು, ಏಪ್ರಿಲ್ 27 ರಂದು ವಿಚಾರಣೆಗೆ ಹಾಜರಾಗಲು ಸೂಚಿಸಿದ್ದಾರೆ ಎಂದು ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:33 pm, Fri, 14 April 23

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ