ಸಿಸೋಡಿಯಾ ಬಿಜೆಪಿ ಸೇರಿದರೆ ಬಿಡುಗಡೆಯಾಗಬಹುದು; ಮೋದಿ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ
ಬಿಜೆಪಿ ಷಡ್ಯಂತ್ರವನ್ನು ಮನೆಮನೆಗೆ ಭೇಟಿ ನೀಡಿ ಮನವರಿಕೆ ಮಾಡಿಕೊಡಲಿದ್ದೇವೆ. ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಎಎಪಿಯ ಅಭಿವೃದ್ಧಿ ಕಾರ್ಯಗಳಿಗೆ ಬಿಜೆಪಿ ಅಡ್ಡಿಪಡಿಸುತ್ತಿದೆ ಎಂದು ದೂರಿದ ಕೇಜ್ರಿವಾಲ್, ನಾವು ಬಿಜೆಪಿಗೆ ಹೆದರಲ್ಲ, ಅಭಿವೃದ್ಧಿ ಕಾರ್ಯಗಳನ್ನು ನಿಲ್ಲಿಸುವುದಿಲ್ಲ ಎಂದರು.
ನವದೆಹಲಿ: ಮನೀಷ್ ಸಿಸೋಡಿಯಾ (Manish Sisodia) ಅವರು ಇಂದು ಬಿಜೆಪಿಗೆ ಸೇರಿದರೆ ನಾಳೆಯೇ ಅವರನ್ನು ಬಿಡುಗಡೆ ಮಾಡಬಹುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Arvind Kejriwal) ಹೇಳಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ಅಬಕಾರಿ ನೀತಿ ಹಗರಣ ಆರೋಪದಲ್ಲಿ ಸೀಸೋಡಿಯಾರನ್ನು ಬಂಧಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕೇಜ್ರಿವಾಲ್, ಸಿಸೋಡಿಯಾ ಬಳಿ ಯಾವುದೇ ಅಕ್ರಮ ಹಣ ಪತ್ತೆಯಾಗಿಲ್ಲ. ಎಎಪಿ ಸರ್ಕಾರವು ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಮಾಡಿರುವ ಸುಧಾರಣೆಗಳನ್ನು ಸಹಿಸದೇ ಮೋದಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿ ಷಡ್ಯಂತ್ರವನ್ನು ಮನೆಮನೆಗೆ ಭೇಟಿ ನೀಡಿ ಮನವರಿಕೆ ಮಾಡಿಕೊಡಲಿದ್ದೇವೆ. ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಎಎಪಿಯ ಅಭಿವೃದ್ಧಿ ಕಾರ್ಯಗಳಿಗೆ ಬಿಜೆಪಿ ಅಡ್ಡಿಪಡಿಸುತ್ತಿದೆ ಎಂದು ದೂರಿದ ಕೇಜ್ರಿವಾಲ್, ನಾವು ಬಿಜೆಪಿಗೆ ಹೆದರಲ್ಲ, ಅಭಿವೃದ್ಧಿ ಕಾರ್ಯಗಳನ್ನು ನಿಲ್ಲಿಸುವುದಿಲ್ಲ ಎಂದರು.
ಸಿಸೋಡಿಯಾ ಅವರ ಜನಪರ ಕಾಳಜಿಯನ್ನು ಸಹಿಸದೆ ಬಂಧಿಸಲಾಗಿದೆ ಎಂದು ಟೀಕಿಸಿರುವ ಅವರು, ಮೋದಿಯನ್ನು ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿಗೆ ಹೋಲಿಕೆ ಮಾಡಿದ್ದಾರೆ.
ಇದನ್ನೂ ಓದಿ: ಮನೀಶ್ ಸಿಸೋಡಿಯಾ ನಿರ್ವಹಿಸಿದ್ದ 18 ಇಲಾಖೆಗಳ ಜವಾಬ್ದಾರಿಯನ್ನು ಇಬ್ಬರು ಸಚಿವರಿಗೆ ಹಂಚಿದ ಕೇಜ್ರಿವಾಲ್
ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಭ್ರಷ್ಟಾಚಾರದ ಆರೋಪದ ಮೇಲೆ ಕೇಂದ್ರೀಯ ತನಿಖಾ ದಳದಿಂದ ಬಂಧಿತರಾಗಿರುವ ಮನೀಶ್ ಸಿಸೋಡಿಯಾ ಸಚಿವ ಸ್ಥಾನಕ್ಕೆ ಮಂಗಳವಾರ ರಾತ್ರಿ ರಾಜೀನಾಮೆ ನೀಡಿದ್ದರು. ಸಚಿವರ ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿದಿತ್ತು. ಮತ್ತೊಬ್ಬ ಬಂಧಿತ ಸಚಿವರಾದ ಸತ್ಯೇಂದ್ರ ಜೈನ್ ಕೂಡಾ ರಾಜೀನಾಮೆ ನೀಡಿದ್ದರು. ಬಂಧನ ಪ್ರಶ್ನಿಸಿ ಸಿಸೋಡಿಯಾ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅಲ್ಲಿ ಅವರಿಗೆ ಹಿನ್ನಡೆಯಾಗಿತ್ತು. ಬಂಧನ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ್ದ ಸುಪ್ರೀಂ ಕೋರ್ಟ್, ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನೆ ಮಾಡುವಂತೆ ಸೂಚಿಸಿತ್ತು. ಇದರ ಬೆನ್ನಲ್ಲೇ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:36 pm, Wed, 1 March 23