ಈ ಭಯೋತ್ಪಾದಕ ಭಗತ್ ಸಿಂಗ್, ಅಂಬೇಡ್ಕರ್ ಕನಸನ್ನು ನನಸಾಗಿಸುತ್ತಿದ್ದಾನೆ; ವಿರೋಧಿಗಳಿಗೆ ಕೇಜ್ರಿವಾಲ್ ತಿರುಗೇಟು

| Updated By: ಸುಷ್ಮಾ ಚಕ್ರೆ

Updated on: Feb 19, 2022 | 4:24 PM

Arvind Kejriwal: ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಭಯೋತ್ಪಾದಕ ಎಂದು ಕರೆಯುವ ವ್ಯಕ್ತಿ ಇಂದು ಬಡವರು ಮತ್ತು ಶ್ರೀಮಂತರ ಮಕ್ಕಳು ಒಟ್ಟಿಗೆ ಓದುವ ಶಾಲೆಗಳನ್ನು ಲೋಕಾರ್ಪಣೆ ಮಾಡುತ್ತಿದ್ದಾನೆ. ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಕನಸುಗಳನ್ನು ನನಸಾಗಿಸುತ್ತಿದ್ದಾನೆ ಎಂದು ತಮ್ಮ ವಿರೋಧಿಗಳಿಗೆ ಕೇಜ್ರಿವಾಲ್ ತಿರುಗೇಟು ನೀಡಿದ್ದಾರೆ.

ಈ ಭಯೋತ್ಪಾದಕ ಭಗತ್ ಸಿಂಗ್, ಅಂಬೇಡ್ಕರ್ ಕನಸನ್ನು ನನಸಾಗಿಸುತ್ತಿದ್ದಾನೆ; ವಿರೋಧಿಗಳಿಗೆ ಕೇಜ್ರಿವಾಲ್ ತಿರುಗೇಟು
ಅರವಿಂದ ಕೇಜ್ರಿವಾಲ್
Follow us on

ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಭಯೋತ್ಪಾದಕ ಎಂದು ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಟೀಕಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಅರವಿಂದ್ ಕೇಜ್ರಿವಾಲ್ ನಾನೊಬ್ಬ ಸ್ವೀಟೆಸ್ಟ್​ ಭಯೋತ್ಪಾದಕ (Sweetest Terrorist) ಎಂದು ಹಾಸ್ಯ ಮಾಡಿದ್ದರು. ಅದರ ಬೆನ್ನಲ್ಲೇ ಇಂದು ಮತ್ತೆ ಪ್ರತಿಕ್ರಿಯೆ ನೀಡಿರುವ ಅರವಿಂದ್ ಕೇಜ್ರಿವಾಲ್ ರಾಜಕೀಯ ಪ್ರತಿಸ್ಪರ್ಧಿಗಳಿಂದ ಭಯೋತ್ಪಾದಕ ಎಂದು ಹಣೆಪಟ್ಟಿ ಪಡೆದ ನಾನು 12,000 ಸ್ಮಾರ್ಟ್ ತರಗತಿಗಳನ್ನು ದೇಶಕ್ಕೆ ಅರ್ಪಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 12,430 ಅತ್ಯಾಧುನಿಕ ತರಗತಿ ಕೊಠಡಿಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅರವಿಂದ್ ಕೇಜ್ರಿವಾಲ್, ಚುನಾವಣೆಗೆ ಒಳಪಟ್ಟಿರುವ ಪಂಜಾಬ್‌ನಲ್ಲಿ ಪ್ರತ್ಯೇಕತಾವಾದಿಗಳೊಂದಿಗೆ ಸಂಪರ್ಕ ಹೊಂದಿದ್ದಾರೆಂದು ಆರೋಪಿಸಿ ತಮ್ಮನ್ನು ಗುರಿಯಾಗಿಸಿದ ವಿರೋಧಿಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಾನು ಈ 12,430 ತರಗತಿ ಕೊಠಡಿಗಳನ್ನು ದೇಶಕ್ಕೆ ಅರ್ಪಿಸಿದ್ದೇನೆ. ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಭಯೋತ್ಪಾದಕ ಎಂದು ಕರೆಯುವ ವ್ಯಕ್ತಿ ಇಂದು ಬಡವರು ಮತ್ತು ಶ್ರೀಮಂತರ ಮಕ್ಕಳು ಒಟ್ಟಿಗೆ ಓದುವ ಶಾಲೆಗಳನ್ನು ಲೋಕಾರ್ಪಣೆ ಮಾಡುತ್ತಿದ್ದಾನೆ. ಅವರು ಭಯೋತ್ಪಾದನೆ ಆರೋಪ ಮಾಡುತ್ತಿರುವ ವ್ಯಕ್ತಿ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಕನಸುಗಳನ್ನು ನನಸಾಗಿಸುತ್ತಿದ್ದಾನೆ ಎಂದು ತಮ್ಮ ವಿರೋಧಿಗಳಿಗೆ ಕೇಜ್ರಿವಾಲ್ ತಿರುಗೇಟು ನೀಡಿದ್ದಾರೆ.

ಈಗ ಅಧಿಕಾರಿಗಳು, ನ್ಯಾಯಾಧೀಶರು, ರಿಕ್ಷಾ ಚಾಲಕರು ಮತ್ತು ಕೆಲಸಗಾರರ ಮಕ್ಕಳು ಒಂದೇ ಮೇಜಿನ ಮೇಲೆ ಕುಳಿತು ಒಟ್ಟಿಗೆ ಓದುತ್ತಾರೆ. ದೇಶದ ಜನರು “ಈ ಭ್ರಷ್ಟರಿಗೆ” ತಲೆಬಾಗುವುದಿಲ್ಲ ಎಂದು ಹೇಳಿದ ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್, ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಕನಸುಗಳನ್ನು ನನಸಾಗಿಸುವ ತಮ್ಮ ಪ್ರಯತ್ನವನ್ನು ಮುಂದುವರಿಸುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ನಾನು ಜಗತ್ತಿನ ಸ್ವೀಟೆಸ್ಟ್ ಟೆರರಿಸ್ಟ್ ; ಕುಮಾರ್ ವಿಶ್ವಾಸ್ ಆರೋಪ ನಿರಾಕರಿಸಿದ ಕೇಜ್ರಿವಾಲ್

ಪ್ರಧಾನಿ ನರೇಂದ್ರ ಮೋದಿ, ಅರವಿಂದ್ ಕೇಜ್ರಿವಾಲ್ ಹಿಂದಿವೆ ನಿಗೂಢ ಶಕ್ತಿಗಳು: ಪಂಜಾಬ್​ನಲ್ಲಿ ರಾಹುಲ್ ಗಾಂಧಿ

Published On - 4:22 pm, Sat, 19 February 22