AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನೂನಾತ್ಮಕ ಇದ್ದರೆ ಒಪ್ಪುತ್ತೇನೆ, ಅಕ್ರಮ ಒಪ್ಪೋದಿಲ್ಲ; ಇಡಿ ಸಮನ್ಸ್​ಗೆ ಅರವಿಂದ್ ಕೇಜ್ರಿವಾಲ್ ತೀಕ್ಷ್ಣ ಪ್ರತಿಕ್ರಿಯೆ

Arvind Kejriwal and ED Summons: ದೆಹಲಿ ಸರ್ಕಾರದ ವಿರುದ್ಧ ಆರೋಪಿಸಲಾಗಿರುವ ಅಬಕಾರಿ ಹಗರಣ ಸಂಬಂಧ ಸಿಎಂ ಕೇಜ್ರಿವಾಲ್​ಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ. ಡಿಸೆಂಬರ್ 21ಕ್ಕೆ ವಿಚಾರಣೆಗೆ ಹಾಜರಾಗುವಂತೆ 17ನೇ ತಾರೀಖಿನಂದು ದೆಹಲಿ ಸಿಎಂಗೆ ಇಡಿ ಸಮನ್ಸ್ ಕೊಟ್ಟಿದೆ. ಸಮನ್ಸ್ ಕಾನೂನಾತ್ಮಕವಾಗಿದ್ದರೆ ಒಪ್ಪುತ್ತಿದ್ದೆ. ಇದು ಅಕ್ರಮ ಸಮನ್ಸ್ ಎಂದು ಹೇಳಿರುವ ಕೇಜ್ರಿವಾಲ್, ವಿಚಾರಣೆಗೆ ಹಾಜರಾಗುತ್ತಿಲ್ಲ ಎನ್ನಲಾಗಿದೆ.

ಕಾನೂನಾತ್ಮಕ ಇದ್ದರೆ ಒಪ್ಪುತ್ತೇನೆ, ಅಕ್ರಮ ಒಪ್ಪೋದಿಲ್ಲ; ಇಡಿ ಸಮನ್ಸ್​ಗೆ ಅರವಿಂದ್ ಕೇಜ್ರಿವಾಲ್ ತೀಕ್ಷ್ಣ ಪ್ರತಿಕ್ರಿಯೆ
ಅರವಿಂದ್ ಕೇಜ್ರಿವಾಲ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 21, 2023 | 11:30 AM

ನವದೆಹಲಿ, ಡಿಸೆಂಬರ್ 21: ಜಾರಿ ನಿರ್ದೇಶನಾಲಯ ನೀಡಿರುವ ಸಮನ್ಸ್ ಅನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತೊಮ್ಮೆ ಧಿಕ್ಕರಿಸುತ್ತಿದ್ದಾರೆ. ಇಡಿ ಸಮನ್ಸ್ ಅಕ್ರಮ ಮತ್ತು ರಾಜಕೀಯ ಪ್ರೇರಿತವಾಗಿದೆ ಎಂದು ಆರೋಪಿಸಿರುವ ಕೇಜ್ರಿವಾಲ್, ಸಮನ್ಸ್ ಹಿಂಪಡೆಯಬೇಕೆಂದು ಜಾರಿ ನಿರ್ದೇಶನಾಲಯವನ್ನು ಒತ್ತಾಯಿಸಿದ್ದಾರೆ. ‘ಹಿಂದಿನಂತೆ ಈ ಸಲದ ಸಮನ್ಸ್ ಕೂಡ ಅಕ್ರಮವಾಗಿದೆ,’ ಎಂದು ದೆಹಲಿ ಮುಖ್ಯಮಂತ್ರಿಗಳು ಹೇಳಿದ್ದಾರೆ.

ದೆಹಲಿಯ ಹೊಸ ಅಬಕಾರಿ ನೀತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿರುವ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ ಸಿಎಂ ಅರವಿಂದ್ ಕೇಜ್ರಿವಾಲ್​ರನ್ನು ವಿಚಾರಣೆ ನಡೆಸಲು ಒಂದೆರಡು ಬಾರಿ ಸಮನ್ಸ್ ಕೊಟ್ಟಿದೆ. ಡಿಸೆಂಬರ್ 17ರಂದೂ ಸಮನ್ ಕೊಟ್ಟಿದ್ದು, ಡಿಸೆಂಬರ್ 21ರಂದು ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಇದನ್ನೂ ಓದಿ: ಸಾಮಾನ್ಯ ಶೀತವೆಂದು ಕೋವಿಡ್ ನಿರ್ಲಕ್ಷಿಸಬೇಡಿ, ದೀರ್ಘ ಕಾಲದ ಪರಿಣಾಮ ಅನೇಕ: ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ ಎಚ್ಚರಿಕೆ

ನವೆಂಬರ್ 2ರಂದು ವಿಚಾರಣೆಗೆ ಹಾಜರಾಗುವಂತೆ ಈ ಹಿಂದೆಯೂ ಇಡಿ ಸಮನ್ಸ್ ಕೊಟ್ಟಿತ್ತು. ಅದೇ ದಿನ ಕೇಜ್ರಿವಾಲ್ ಮಧ್ಯಪ್ರದೇಶ ಚುನಾವಣಾ ಪ್ರಚಾರಕ್ಕೆ ತೆರಳಿದ್ದರು.

ನನ್ನ ಜೀವನ ಬಹಳ ಪ್ರಾಮಾಣಿಕತೆ ಮತ್ತು ಪಾರದರ್ಶಕತೆಯಿಂದ ಕೂಡಿದೆ. ಮುಚ್ಚಿಟ್ಟುಕೊಳ್ಳುವುದು ಏನೂ ಇಲ್ಲ… ಕಾನೂನಾತ್ಮಕ ಸಮನ್ಸ್​ಗಳಿಗೆ ತಾನು ಬದ್ಧನಾಗಿರುತ್ತೇನೆ. ಆದರೆ, ಈ ಸಮನ್ಸ್​ಗಳು ಅಕ್ರಮವಾಗಿವೆ. ರಾಜಕೀಯ ಪ್ರೇರಿತವಾಗಿವೆ. ಅವುಗಳನ್ನು ಜಾರಿ ನಿರ್ದೇಶನಾಲಯ ಹಿಂಪಡೆಯಬೇಕು ಎಂದು ದೆಹಲಿ ಸಿಎಂ ತಿಳಿಸಿದ್ದಾರೆ.

ಇದನ್ನೂ ಓದಿ: ಜನರಿಗೆ ಕಾನೂನಿನ ಭಯವಿಲ್ಲ; ಹೆಚ್ಚುತ್ತಿರುವ ರಸ್ತೆ ಅಪಘಾತಗಳ ಬಗ್ಗೆ ನಿತಿನ್ ಗಡ್ಕರಿ ಕಳವಳ

ಇಡಿ ಸಮನ್ಸ್ ಪ್ರಕಾರ ಅರವಿಂದ್ ಕೇಜ್ರಿವಾಲ್ ಇವತ್ತು ವಿಚಾರಣೆಗೆ ಹಾಜರಾಗಬೇಕು. ಆದರೆ, ಅವರು ಪಂಜಾಬ್​ನಲ್ಲಿ ಪೂರ್ವದಲ್ಲೇ ನಿಗದಿಯಾಗಿದ್ದ ವಿಪಶ್ಶನ ಧ್ಯಾನದಲ್ಲಿ ಪಾಲ್ಗೊಳ್ಳಲು ನಿರ್ಧರಿಸಿದ್ದಾರೆ. ವರದಿಗಳ ಪ್ರಕಾರ ಕೇಜ್ರಿವಾಲ್ ಈಗಾಗಲೇ ಪಂಜಾಬ್​ಗೆ ತೆರಳಿದ್ದಾರೆನ್ನಲಾಗಿದೆ.

ಅರವಿಂದ್ ಕೇಜ್ರಿವಾಲ್ ಬಹಳ ಕಾಲದಿಂದ ವಿಪಶ್ಶನಾ ಧ್ಯಾನದ ಅಭ್ಯಾಸ ಮಾಡುತ್ತಿದ್ದಾರೆ. ಪ್ರತೀ ವರ್ಷವೂ ಅವರು ಧ್ಯಾನ ಶಿಬಿರದಲ್ಲಿ ಪಾಲ್ಗೊಳ್ಳುತ್ತಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ