ತನ್ನ ಬಂಧನ ಪ್ರಶ್ನಿಸಿ ಸುಪ್ರೀಂಕೋರ್ಟ್ನಲ್ಲಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಅರವಿಂದ್ ಕೇಜ್ರಿವಾಲ್
ತನ್ನ ಬಂಧನ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಿಂಪಡೆದಿದ್ದಾರೆ. ಮದ್ಯನೀತಿ ಹಾಗೂ ಅಕ್ರೆಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಅವರನ್ನು ಗುರುವಾರ ಬಂಧಿಸಿತ್ತು.
ತನ್ನ ಬಂಧನ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Arvind Kejriwal) ಹಿಂಪಡೆದಿದ್ದಾರೆ. ಮದ್ಯನೀತಿ ಹಾಗೂ ಅಕ್ರೆಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಅವರನ್ನು ಗುರುವಾರ ಬಂಧಿಸಿತ್ತು. ಸುಪ್ರೀಂ ಕೋರ್ಟ್ ವಿಚಾರಣೆಯ ಸಂದರ್ಭದಲ್ಲಿ, ಅರವಿಂದ್ ಕೇಜ್ರಿವಾಲ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಅರ್ಜಿಯನ್ನು ಹಿಂಪಡೆಯಲು ದೆಹಲಿ ಮುಖ್ಯಮಂತ್ರಿ ನಿರ್ಧರಿಸಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು. ಕೇಜ್ರಿವಾಲ್ ಕುಟುಂಬವನ್ನು ಗೃಹಬಂಧನದಲ್ಲಿರಿಸಲಾಗಿದೆ ಎನ್ನುವ ಮಾಹಿತಿಯೂ ಲಭ್ಯವಾಗಿದೆ.
ಪ್ರೋಟೋಕಾಲ್‌ಗಳಿಗೆ ಅನುಗುಣವಾಗಿ ಈಗ ಕೆಳ ನ್ಯಾಯಾಲಯವನ್ನು ಸಂಪರ್ಕಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್, ಆಪಾದಿತ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೀಡಿದ ಎಂಟು ಸಮನ್ಸ್‌ಗಳಿಗೂ ಸ್ಪಂದಿಸಿರಲಿಲ್ಲ. ದೆಹಲಿ ಜಲ ಮಂಡಳಿಯಲ್ಲಿ ನಡೆದ ಅಕ್ರಮಗಳಿಗೆ ಸಂಬಂಧಿಸಿದ ಒಂದು ಸಮನ್ಸ್‌ಗೂ ಕೂಡ ಪ್ರತಿಕ್ರಿಯಿಸಿರಲಿಲ್ಲ.
12 ಅಧಿಕಾರಿಗಳ ತಂಡವು ಸರ್ಚ್ ವಾರಂಟ್‌ನೊಂದಿಗೆ ದೆಹಲಿ ಸಿಎಂ ಕೇಜ್ರಿವಾಲ್ ನಿವಾಸಕ್ಕೆ ತೆರಳಿ ಪರಿಶೀಲನೆ ನಡೆಸಿದ್ದವು. ಈ ವೇಳೆ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದ ಅಧಿಕಾರಿಗಳು, ಬಳಿಕ ಕೇಜ್ರಿವಾಲ್ ಅವರನ್ನು ಬಂಧಿಸಿದ್ದಾರೆ. ಒಂಬತ್ತು ಬಾರಿ ಇ.ಡಿ ಸಮನ್ಸ್ ನೀಡಿದೆ. ಮಧ್ಯಂತರ ರಕ್ಷಣೆ ಕೋರಿ ಕೇಜ್ರಿವಾಲ್ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಬಂಧನದಿಂದ ರಕ್ಷಣೆ ನೀಡಲು ಹೈಕೋರ್ಟ್ ನಿರಾಕರಿಸಿತ್ತು. ಪ್ರಕರಣ ಸಂಬಂಧ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.
ಮತ್ತಷ್ಟು ಓದಿ: ಕೇಜ್ರಿವಾಲ್ ರಾಜೀನಾಮೆ ನೀಡದಿದ್ದರೆ ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಬರಬಹುದೇ?
ಆಮ್ ಆದ್ಮಿ ಪಕ್ಷದ ಸಚಿವರು ಕೇಜ್ರಿವಾಲ್ ಬಂಧನದ ವಿರುದ್ಧ ಪ್ರತಿಭಟನೆ ನಡೆಸಿದ್ದು, ಸಚಿವರಾದ ಅತಿಶಿ, ಸೌರಭ್ ಭಾರದ್ವಾಜ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:49 pm, Fri, 22 March 24