Delhi Budget: ದೆಹಲಿ ಸರ್ಕಾರದ ಬಜೆಟ್ ಮಂಡನೆಗೆ ತಡೆ, ಮೋದಿಗೆ ಪತ್ರ ಬರೆದ ಅರವಿಂದ್ ಕೇಜ್ರಿವಾಲ್

ದೆಹಲಿಯ ಬಜೆಟ್ (2023-24) ಕುರಿತು ದೆಹಲಿ ಸರ್ಕಾರ ಮತ್ತು ಕೇಂದ್ರ ಸರ್ಕಾರ ಮುಖಾಮುಖಿಯಾಗಿದೆ. ದೆಹಲಿಯ ಬಜೆಟ್ ಮಂಗಳವಾರ ಅಂದರೆ ಇಂದು (ಮಾ.21) ಮಂಡನೆಯಾಗಬೇಕಿತ್ತು, ಆದರೆ ಅದನ್ನು ತಡೆಹಿಡಿಯಲಾಗಿತ್ತು. ಇದೀಗ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮೋದಿಗೆ ಪತ್ರ ಬರೆದಿದ್ದಾರೆ.

Delhi Budget: ದೆಹಲಿ ಸರ್ಕಾರದ ಬಜೆಟ್ ಮಂಡನೆಗೆ ತಡೆ, ಮೋದಿಗೆ ಪತ್ರ ಬರೆದ ಅರವಿಂದ್ ಕೇಜ್ರಿವಾಲ್
ಮೋದಿ ಮತ್ತು ಅರವಿಂದ್ ಕೇಜ್ರಿವಾಲ್

Updated on: Mar 21, 2023 | 9:51 AM

ದೆಹಲಿ: ದೆಹಲಿಯ ಬಜೆಟ್ (2023-24) (Delhi Budget) ಕುರಿತು ದೆಹಲಿ ಸರ್ಕಾರ ಮತ್ತು ಕೇಂದ್ರ ಸರ್ಕಾರ ಮುಖಾಮುಖಿಯಾಗಿದೆ. ದೆಹಲಿಯ ಬಜೆಟ್ ಮಂಗಳವಾರ ಅಂದರೆ ಇಂದು (ಮಾ.21) ಮಂಡನೆಯಾಗಬೇಕಿತ್ತು, ಆದರೆ ಅದನ್ನು ತಡೆಹಿಡಿಯಲಾಗಿತ್ತು. ಜಾಹೀರಾತು, ಬಂಡವಾಳ ವೆಚ್ಚದ ಮೇಲಿನ ಖರ್ಚು ಮತ್ತು ಆಯುಷ್ಮಾನ್ ಭಾರತ್ ಮುಂತಾದ ವಿಷಯಗಳ ಬಗ್ಗೆ ಕೇಂದ್ರ ಗೃಹ ಸಚಿವಾಲಯ ಸ್ಪಷ್ಟನೆ ಕೇಳಿದೆ ಎಂದು ಹೇಳಲಾಗುತ್ತಿದೆ. ಇದೇ ವೇಳೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೇಂದ್ರದ ಗೂಂಡಾಗಿರಿ ಎಂದು ಆರೋಪಿಸಿದರು. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಯಾವುದೇ ಸರ್ಕಾರದ ಬಜೆಟ್ ಅನ್ನು ನಿಲ್ಲಿಸಲಾಗಿದೆ ಎಂದು ಹೇಳಿದರು.  ಇದೀಗ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಧಾನಿ ಮೋದಿಗೆ ದಯವಿಟ್ಟು ದೆಹಲಿ ಬಜೆಟ್​​​ನ್ನು ನಿಲ್ಲಿಸಬೇಡಿ ಎಂದು ಪತ್ರ ಬರೆದಿದ್ದಾರೆ.

Published On - 9:47 am, Tue, 21 March 23

ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Loading...
Unable to load recommendations.
Follow Us