AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯಿಂದ ಮತ್ತೊಮ್ಮೆ ಪಂಜಾಬಿಗಳಿಗೆ ದ್ರೋಹ; ರಾಘವ್ ಚಡ್ಡಾ ಸೇರಿ 7 ಸಂಸದರ ರಾಜೀನಾಮೆಗೆ ಕೇಜ್ರಿವಾಲ್ ಪ್ರತಿಕ್ರಿಯೆ

ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಸೇರಿದಂತೆ ಒಟ್ಟು 78 ರಾಜ್ಯಸಭಾ ಸಂಸದರು ಆಪ್ ತೊರೆದು ಬಿಜೆಪಿಗೆ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ. ಆಮ್ ಆದ್ಮಿ ಪಕ್ಷದ ಅತೃಪ್ತರ ಬಣದ ಈ ನಿರ್ಧಾರದ ಬಗ್ಗೆ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ರಾಘವ್ ಚಡ್ಡಾ ಅವರನ್ನು ರಾಜ್ಯಸಭಾ ಉಪನಾಯಕ ಸ್ಥಾನದಿಂದ ಕೆಳಗಿಳಿಸಿದ ನಂತರ ಪಕ್ಷದಲ್ಲಿ ಅತೃಪ್ತಿ ಹೆಚ್ಚಾಗಿತ್ತು. ರಾಘವ್ ಚಡ್ಡಾ ಅವರಿಗೆ ಬಿಜೆಪಿ ನೇತೃತ್ವದ ಎನ್​ಡಿಎ ಸರ್ಕಾರದಲ್ಲಿ ಕೇಂದ್ರ ಸಚಿವ ಸ್ಥಾನ ನೀಡುವ ಸಾಧ್ಯತೆಯಿದೆ ಎಂಬ ಮಾತುಗಳೂ ಕೇಳಿಬರುತ್ತಿವೆ.

ಬಿಜೆಪಿಯಿಂದ ಮತ್ತೊಮ್ಮೆ ಪಂಜಾಬಿಗಳಿಗೆ ದ್ರೋಹ; ರಾಘವ್ ಚಡ್ಡಾ ಸೇರಿ 7 ಸಂಸದರ ರಾಜೀನಾಮೆಗೆ ಕೇಜ್ರಿವಾಲ್ ಪ್ರತಿಕ್ರಿಯೆ
Arvind KejriwalImage Credit source: PTI
ಸುಷ್ಮಾ ಚಕ್ರೆ
|

Updated on: Apr 24, 2026 | 6:13 PM

Share

ನವದೆಹಲಿ, ಏಪ್ರಿಲ್ 24: ಆಮ್ ಆದ್ಮಿ ಪಕ್ಷಕ್ಕೆ ಒಂದರ ಹಿಂದೊಂದರಂತೆ ಹೊಡೆತಗಳು ಬೀಳುತ್ತಲೇ ಇವೆ. ಪಕ್ಷಕ್ಕೆ ನಿಯತ್ತಾಗಿರುವ ಅನೇಕ ನಾಯಕರು ಇದೀಗ ಆಮ್ ಆದ್ಮಿ ಪಕ್ಷದ (AAP) ಧೋರಣೆಯ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಪಕ್ಷದೊಳಗೆ ಅತೃಪ್ತರ ಬಣ ದೊಡ್ಡದಾಗುತ್ತಲೇ ಇದೆ. ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾ ಅವರನ್ನು ಕೇಜ್ರಿವಾಲ್ (Arvind Kejriwal) ವಜಾಗೊಳಿಸಿದ ನಂತರ ಪಕ್ಷದಲ್ಲೇ ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಇಂದು ರಾಘವ್ ಚಡ್ಡಾ ಮಹತ್ವದ ನಿರ್ಧಾರ ತೆಗೆದುಕೊಂಡು ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಬಿಜೆಪಿಗೆ ಸೇರುವುದಾಗಿ ಘೋಷಿಸಿದ್ದಾರೆ. ಹಾಗಂತ ಅವರೊಬ್ಬರೇ ಪಕ್ಷ ಬಿಟ್ಟು ಹೋಗುತ್ತಿಲ್ಲ. ಆಪ್​​ನೊಳಗಿನ ಇನ್ನೂ 6 ರಾಜ್ಯಸಭಾ ಸದಸ್ಯರನ್ನು ಕೂಡ ತಮ್ಮೊಂದಿಗೆ ಕರೆದುಕೊಂಡು ಬಿಜೆಪಿಗೆ ಕಾಲಿಟ್ಟಿದ್ದಾರೆ. ಇದು ಅರವಿಂದ್ ಕೇಜ್ರಿವಾಲ್​ಗೆ ದೊಡ್ಡ ಆಘಾತ ಮೂಡಿಸಿದೆ.

ಈ ಹಿನ್ನೆಲೆಯಲ್ಲಿ ಅರವಿಂದ್ ಕೇಜ್ರಿವಾಲ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.’ಬಿಜೆಪಿ ಮತ್ತೊಮ್ಮೆ ಪಂಜಾಬಿಗಳಿಗೆ ದ್ರೋಹ ಮಾಡಿದೆ’ ಎಂದು ಅವರು ಎಕ್ಸ್​ನಲ್ಲಿ ಪೋಸ್ಟ್ ಮಾಡುವ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಆಮ್ ಆದ್ಮಿ ಪಕ್ಷದ 10 ರಾಜ್ಯಸಭಾ ಸಂಸದರಲ್ಲಿ 7 ಮಂದಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರುವುದಾಗಿ ಘೋಷಿಸಿದ ನಂತರ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಈ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಕೇಜ್ರಿವಾಲ್​ಗೆ ಭಾರೀ ಹೊಡೆತ; 6 ಸಂಸದರೊಂದಿಗೆ ಆಮ್ ಆದ್ಮಿಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ ರಾಘವ್ ಚಡ್ಡಾ

ರಾಘವ್ ಚಡ್ಡಾ ಜೊತೆಗೆ ಸಂದೀಪ್ ಪಾಠಕ್ ಮತ್ತು ಅಶೋಕ್ ಮಿತ್ತಲ್ ಅವರು ಆಮ್ ಆದ್ಮಿ ಪಕ್ಷ ಬಿಟ್ಟು ಹೋಗಿದ್ದಾರೆ. ಪಕ್ಷದ ರಾಜ್ಯಸಭಾ ಸಂಸದರಲ್ಲಿ ಮೂರನೇ ಎರಡರಷ್ಟು ಜನರು ಬಿಜೆಪಿಯೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದ್ದಾರೆ ಎಂದು ರಾಘವ್ ಚಡ್ಡಾ ಸುದ್ದಿಗೋಷ್ಠಿಯಲ್ಲಿ ಹೇಳಿಕೊಂಡಿದ್ದಾರೆ.

“ರಾಜ್ಯಸಭೆಯಲ್ಲಿ 10 ಎಎಪಿ ಸಂಸದರಿದ್ದಾರೆ. ಅವರಲ್ಲಿ 2/3ಕ್ಕಿಂತ ಹೆಚ್ಚು ಜನರು ನಮ್ಮೊಂದಿಗಿದ್ದಾರೆ. ಅವರು ಸಹಿ ಮಾಡಿದ್ದಾರೆ. ಇಂದು ಬೆಳಿಗ್ಗೆ ನಾವು ಸಹಿ ಮಾಡಿದ ಪತ್ರ ಮತ್ತು ದಾಖಲೆಗಳನ್ನು ರಾಜ್ಯಸಭಾ ಅಧ್ಯಕ್ಷರಿಗೆ ಸಲ್ಲಿಸಿದ್ದೇವೆ. ಅವರಲ್ಲಿ ಮೂವರು ನಿಮ್ಮ ಮುಂದೆ ಇದ್ದಾರೆ. ಇವರು ಮಾತ್ರವಲ್ಲದೆ ಹರ್ಭಜನ್ ಸಿಂಗ್, ರಾಜಿಂದರ್ ಗುಪ್ತಾ, ವಿಕ್ರಮಜಿತ್ ಸಿಂಗ್ ಸಹ್ನಿ ಮತ್ತು ಸ್ವಾತಿ ಮಲಿವಾಲ್ ಕೂಡ ಬಿಜೆಪಿಗೆ ಸೇರಲಿದ್ದಾರೆ” ಎಂದು ರಾಘವ್ ಚಡ್ಡಾ ತಿಳಿಸಿದ್ದಾರೆ.

ಇದನ್ನೂ ಓದಿ: ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾ ವಜಾ

“ರಾಜ್ಯಸಭೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರಿದ ಸಂಸತ್ತಿನ ಮೂರನೇ ಎರಡರಷ್ಟು ಸದಸ್ಯರಾದ ನಾವು ಭಾರತದ ಸಂವಿಧಾನದ ನಿಬಂಧನೆಗಳನ್ನು ಚಲಾಯಿಸುತ್ತೇವೆ ಮತ್ತು ಭಾರತೀಯ ಜನತಾ ಪಕ್ಷದೊಂದಿಗೆ (BJP) ವಿಲೀನಗೊಳ್ಳುತ್ತೇವೆ.” ಎಂದು ರಾಘವ್ ಚಡ್ಡಾ ಹೇಳಿದ್ದಾರೆ. ಸ್ವಾತಿ ಮಲಿವಾಲ್, ಹರ್ಭಜನ್ ಸಿಂಗ್, ರಾಜಿಂದರ್ ಗುಪ್ತಾ ಮತ್ತು ವಿಕ್ರಮ್‌ಜಿತ್ ಸಿಂಗ್ ಸಾಹ್ನಿ ಕೂಡ ಎಎಪಿ ತೊರೆದು ಬಿಜೆಪಿ ಸೇರಿದ್ದಾರೆ ಎಂದು ರಾಘವ್ ಚಡ್ಡಾ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ರಾಯಚೂರಲ್ಲಿ ಪೊಲೀಸ್ ಶ್ವಾನಗಳಿಗೆ ಫ್ಯಾನ್, ಏರ್ ಕೂಲರ್​ ವ್ಯವಸ್ಥೆ
ರಾಯಚೂರಲ್ಲಿ ಪೊಲೀಸ್ ಶ್ವಾನಗಳಿಗೆ ಫ್ಯಾನ್, ಏರ್ ಕೂಲರ್​ ವ್ಯವಸ್ಥೆ