AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Liquor Policy Scam: ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಆಗಸ್ಟ್​ 8ರವರೆಗೆ ವಿಸ್ತರಣೆ

ದೆಹಲಿ ಕೋರ್ಟ್​ ಗುರುವಾರ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಆಗಸ್ಟ್ 8 ರವರೆಗೆ ವಿಸ್ತರಿಸಿದೆ. ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳದ (ಸಿಬಿಐ) ದೂರಿನಿಂದ ಅವರು ಆಘಾತಕ್ಕೊಳಗಾಗಿದ್ದಾರೆ. ಕೇಜ್ರಿವಾಲ್ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

Delhi Liquor Policy Scam: ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಆಗಸ್ಟ್​ 8ರವರೆಗೆ ವಿಸ್ತರಣೆ
ಅರವಿಂದ್ ಕೇಜ್ರಿವಾಲ್
ನಯನಾ ರಾಜೀವ್
|

Updated on: Jul 25, 2024 | 12:13 PM

Share

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಅವಧಿ ಆಗಸ್ಟ್​ 8ರವರೆಗೆ ವಿಸ್ತರಿಸಲಾಗಿದೆ. ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಮದ್ಯದ ವ್ಯಾಪಾರಿಗಳಿಗೆ ಪರವಾನಗಿ ನೀಡಲು ದೆಹಲಿ ಸರ್ಕಾರದ 2021-22 ರ ಅಬಕಾರಿ ನೀತಿಯು ಕಾರ್ಟೆಲೈಸೇಶನ್‌ಗೆ ಅವಕಾಶ ಮಾಡಿಕೊಟ್ಟಿದೆ ಮತ್ತು ಅದಕ್ಕಾಗಿ ಲಂಚವನ್ನು ಪಾವತಿಸಿದ ಕೆಲವು ಡೀಲರ್‌ಗಳಿಗೆ ಸಹಾಯ ಮಾಡಿದೆ ಎಂದು ಆರೋಪಿಸಲಾಗಿದೆ. ಆದರೆ ಇದನ್ನು ಆಮ್ ಆದ್ಮಿ ಪಕ್ಷ ನಿರಾಕರಿಸಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಮಾರ್ಚ್ 21 ರಿಂದ ಜೈಲಿನಲ್ಲಿದ್ದಾರೆ ಮತ್ತು ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿದೆ. ಮೇ 10 ರಂದು, ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಸುಪ್ರೀಂ ಕೋರ್ಟ್ ಅವರಿಗೆ 21 ದಿನಗಳ ಮಧ್ಯಂತರ ಜಾಮೀನು ನೀಡಿತು. ಚುನಾವಣೆ ಮುಗಿದ ತಕ್ಷಣ ಜೂನ್ 2ರಂದು ಜೈಲಿಗೆ ಮರಳಿದ್ದರು.

ಮತ್ತಷ್ಟು ಓದಿ: ‘ಸಿಎಂಗೆ ಮನೆಯಲ್ಲಿ ಮಾಡಿದ ಅಡುಗೆಯನ್ನೇ ಬಡಿಸಲಾಗಿತ್ತು; ಕೇಜ್ರಿವಾಲ್ ಆರೋಗ್ಯದ ಕುರಿತು ದೆಹಲಿ ಎಲ್‌ಜಿ ಪತ್ರ

ಕಳೆದ ವಿಚಾರಣೆಯಲ್ಲಿ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಜುಲೈ 25 ರವರೆಗೆ ವಿಸ್ತರಿಸಿದ್ದರು. ತಿಹಾರ್ ಜೈಲಿನಿಂದ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಅವರ ಹಾಜರಾರಾಗಿದ್ದರು. ಕೇಜ್ರಿವಾಲ್ ಮತ್ತು ಇತರ ಆರೋಪಿಗಳ ಪರ ವಕೀಲರಿಗೆ ಪೂರಕ ಆರೋಪ ಪಟ್ಟಿಯ ಪ್ರತಿಯನ್ನು ನೀಡುವಂತೆ ಜಾರಿ ನಿರ್ದೇಶನಾಲಯಕ್ಕೆ (ಇಡಿ) ನ್ಯಾಯಾಲಯ ಸೂಚಿಸಿದೆ.

ಜುಲೈ 9 ರಂದು, ಅರವಿಂದ್ ಕೇಜ್ರಿವಾಲ್ ಮತ್ತು ಎಎಪಿ ವಿರುದ್ಧ ಸಲ್ಲಿಸಲಾದ ಪೂರಕ ಚಾರ್ಜ್ ಶೀಟ್ ಅನ್ನು ನ್ಯಾಯಾಲಯವು ಪರಿಗಣಿಸಿತ್ತು. ವಿನೋದ್ ಚೌಹಾಣ್ ಮತ್ತು ಆಶಿಶ್ ಮಾಥುರ್ ವಿರುದ್ಧ ಸಲ್ಲಿಸಲಾದ ಪೂರಕ ಚಾರ್ಜ್ ಶೀಟ್ ಅನ್ನು ಸಹ ನ್ಯಾಯಾಲಯವು ಪರಿಗಣನೆಗೆ ತೆಗೆದುಕೊಂಡಿದೆ.

ನ್ಯಾಯಾಲಯವು ಚಾರ್ಜ್ ಶೀಟ್ ಅನ್ನು ಗಮನದಲ್ಲಿಟ್ಟುಕೊಂಡು ಅರವಿಂದ್ ಕೇಜ್ರಿವಾಲ್, ವಿನೋದ್ ಚೌಹಾಣ್ ಮತ್ತು ಎಎಪಿಗೆ ಪ್ರೊಡಕ್ಷನ್ ವಾರಂಟ್ ಹೊರಡಿಸಿತ್ತು. ತನಿಖಾ ಅಧಿಕಾರಿ (ಐಒ) ಮೂಲಕ ಆಶಿಶ್ ಮಾಥುರ್ ಅವರಿಗೆ ಸಮನ್ಸ್ ನೀಡಲಾಗಿದೆ.

ಮಾರ್ಚ್ 21 ರಂದು ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಬಂಧಿಸಿತ್ತು. ಜುಲೈ 1 ರಂದು ಇಡಿ ವಿನೋದ್ ಚೌಹಾಣ್ ಮತ್ತು ಆಶಿಶ್ ಮಾಥುರ್ ವಿರುದ್ಧ ಮತ್ತೊಂದು ಪೂರಕ ಪ್ರಾಸಿಕ್ಯೂಷನ್ ದೂರನ್ನು ದಾಖಲಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ