ಅರವಿಂದ್ ಕೇಜ್ರಿವಾಲ್​ಗೆ ಮತ್ತೊಂದು ಆಘಾತ, ಆಪ್ತ ಕಾರ್ಯದರ್ಶಿ ವಿಭವ್ ವಜಾ

|

Updated on: Apr 11, 2024 | 8:27 AM

ದೆಹಲಿ ಮದ್ಯನೀತಿ ಹಗರಣ ಪ್ರಕರಣದಲ್ಲಿ ತಿಹಾರ್ ಜೈಲು ಸೇರಿರುವ ಅರವಿಂದ್ ಕೇಜ್ರಿವಾಲ್(Arvind Kjriwal) ಅವರಿಗೆ ಮತ್ತೊಂದು ದೊಡ್ಡ ಆಘಾತ ಎದುರಾಗಿದೆ. ಅವರ ಆಪ್ತ ಕಾರ್ಯದರ್ಶಿ ವಿಭವ್ ಕುಮಾರ್ ವಿರುದ್ಧ ವಿಜಿಲೆನ್ಸ್ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, ಅವರನ್ನು ವಜಾಗೊಳಿಸಲಾಗಿದೆ. ವಿಭವ್ ಕುಮಾರ್ ಅವರು ತಿಹಾರ್​ ಜೈಲಿನಲ್ಲಿ ಅರವಿಂದ್ ಕೇಜ್ರಿವಾಲ್​ ಅವರನ್ನು ನಿನ್ನೆ ಭೇಟಿಯಾಗಿದ್ದರು.

ಅರವಿಂದ್ ಕೇಜ್ರಿವಾಲ್​ಗೆ ಮತ್ತೊಂದು ಆಘಾತ, ಆಪ್ತ ಕಾರ್ಯದರ್ಶಿ ವಿಭವ್ ವಜಾ
ಅರವಿಂದ್ ಕೇಜ್ರಿವಾಲ್, ವಿಭವ್
Follow us on

ದೆಹಲಿ ಮದ್ಯನೀತಿ ಹಗರಣ ಪ್ರಕರಣದಲ್ಲಿ ತಿಹಾರ್ ಜೈಲು ಸೇರಿರುವ ಅರವಿಂದ್ ಕೇಜ್ರಿವಾಲ್(Arvind Kjriwal) ಅವರಿಗೆ ಮತ್ತೊಂದು ದೊಡ್ಡ ಆಘಾತ ಎದುರಾಗಿದೆ. ಅವರ ಆಪ್ತ ಕಾರ್ಯದರ್ಶಿ ವಿಭವ್ ಕುಮಾರ್ ವಿರುದ್ಧ ವಿಜಿಲೆನ್ಸ್ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, ಅವರನ್ನು ವಜಾಗೊಳಿಸಲಾಗಿದೆ. ವಿಭವ್ ಕುಮಾರ್ ಅವರು ತಿಹಾರ್​ ಜೈಲಿನಲ್ಲಿ ಅರವಿಂದ್ ಕೇಜ್ರಿವಾಲ್​ ಅವರನ್ನು ನಿನ್ನೆ ಭೇಟಿಯಾಗಿದ್ದರು.

ಅರವಿಂದ್ ಕೇಜ್ರಿವಾಲ್ ಅವರ ಖಾಸಗಿ ಕಾರ್ಯದರ್ಶಿ ವಿಭವ್ ಕುಮಾರ್ ನೇಮಕ ಪ್ರಕ್ರಿಯೆ ಸರಿಯಾಗಿ ನಡೆದಿರಲಿಲ್ಲ ಎನ್ನುವ ಕಾರಣ ಕೊಟ್ಟು ಅವರನ್ನು ವಿಚಕ್ಷಣ ಇಲಾಖೆ ವಜಾಗೊಳಿಸಿದೆ. ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ವಿಭವ್ ಕುಮಾರ್ ಅವರನ್ನು ಕೆಲವು ದಿನಗಳ ಹಿಂದೆ ಇಡಿ ವಿಚಾರಣೆ ನಡೆಸಿದ ಸಮಯದಲ್ಲಿ ವಿಜಿಲೆನ್ಸ್ ಇಲಾಖೆ ಅವರ ವಿರುದ್ಧ ಕ್ರಮ ಕೈಗೊಂಡಿದೆ.

ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ಏಪ್ರಿಲ್ 8 ರಂದು ಜಾರಿ ನಿರ್ದೇಶನಾಲಯವು ವಿಭವ್ ಕುಮಾರ್ ಅವರನ್ನು ವಿಚಾರಣೆ ನಡೆಸಿತ್ತು. ದೆಹಲಿ ಮದ್ಯ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ಈ ಸಂಬಂಧ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು.

ಮತ್ತಷ್ಟು ಓದಿ:‘ನಾನು ರಾಜೀನಾಮೆ ನೀಡಬೇಕೇ ಅಥವಾ ಜೈಲಿನಿಂದ ಸರ್ಕಾರ ನಡೆಸಬೇಕೇ, ಜನರನ್ನು ಕೇಳಿ’: ಕೇಜ್ರಿವಾಲ್

ಈ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ಅವರನ್ನೂ ಬಂಧಿಸಲಾಗಿದೆ. ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಲು ಅವರ ಪತ್ನಿ ಸುನೀತಾ ಕೇಜ್ರಿವಾಲ್ ಹಾಗೂ ವಿಭವ್ ಕುಮಾರ್ ಕೂಡ ತಿಹಾರ್​ ಜೈಲಿಗೆ ಹೋಗಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ