ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಬಿಜೆಪಿ ಸೇರಿದ ಅರವಿಂದರ್ ಲವ್ಲಿ
ದೆಹಲಿಯ ಮಾಜಿ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಅರವಿಂದರ್ ಸಿಂಗ್ ಲವ್ಲಿ ಕೆಲವು ದಿನಗಳ ಹಿಂದಷ್ಟೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಿಜೆಪಿಯಿಂದ ಕಾಂಗ್ರೆಸ್‌ಗೆ ಸೇರಿದ್ದ ಅವರು ಮತ್ತೆ ಇದೀಗ ಬಿಜೆಪಿಗೆ ಮರುಸೇರ್ಪಡೆಯಾಗಿದ್ದಾರೆ.
ನವದೆಹಲಿ: ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಕೆಲವು ದಿನಗಳ ನಂತರ ಕಾಂಗ್ರೆಸ್ ಪಕ್ಷದ ದೆಹಲಿಯ ಮಾಜಿ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ (Arvinder Singh Lovely) ಇಂದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾಗಿದ್ದಾರೆ. ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಸಭೆಯಲ್ಲಿ ದೆಹಲಿಯ ಮಾಜಿ ಕಾಂಗ್ರೆಸ್ ಅಧ್ಯಕ್ಷ ಅರವಿಂದರ್ ಲವ್ಲಿ ಅವರು ನಾಲ್ವರು ಮಾಜಿ ಕಾಂಗ್ರೆಸ್ (Congress) ನಾಯಕರೊಂದಿಗೆ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.
ಅರವಿಂದರ್ ಲವ್ಲಿ ಜೊತೆಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದ ಇತರ ನಾಲ್ವರಲ್ಲಿ ಮಾಜಿ ಕಾಂಗ್ರೆಸ್ ಶಾಸಕರಾದ ರಾಜ್‌ಕುಮಾರ್ ಚೌಹಾಣ್, ನೀರಜ್ ಬಸೋಯಾ, ನಸೀಬ್ ಸಿಂಗ್ ಮತ್ತು ದೆಹಲಿ ಯುವ ಕಾಂಗ್ರೆಸ್ ಮುಖ್ಯಸ್ಥ ಅಮಿತ್ ಮಲಿಕ್ ಸೇರಿದ್ದಾರೆ.
STORY | Former Delhi Congress leaders, including Arvinder Singh Lovely, join BJP
READ: https://t.co/HDO8JHDYJY pic.twitter.com/s4UYa8cCcN
— Press Trust of India (@PTI_News) May 4, 2024
ಇದನ್ನೂ ಓದಿ: ಅಮೇಥಿ ಬಿಟ್ಟು ರಾಯ್ಬರೇಲಿಗೆ ಹೋದ ರಾಹುಲ್, ಭಯ ಪಡಬೇಡಿ ಎಂದ ಮೋದಿ
ಬಿಜೆಪಿಗೆ ಸೇರ್ಪಡೆಗೊಂಡ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅರವಿಂದರ್ ಸಿಂಗ್ ಲವ್ಲಿ, ಬಿಜೆಪಿಯ ಬ್ಯಾನರ್‌ನಲ್ಲಿ ಮತ್ತು ಪ್ರಧಾನಿ ನೇತೃತ್ವದಲ್ಲಿ ದೆಹಲಿಯ ಜನರಿಗಾಗಿ ಹೋರಾಡಲು ನಮಗೆ ಅವಕಾಶ ನೀಡಲಾಗಿದೆ. ದೇಶದಲ್ಲಿ ಬಿಜೆಪಿ ಸರ್ಕಾರ ಪ್ರಚಂಡ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದರಲ್ಲಿ ನನಗೆ ಯಾವುದೇ ಅನುಮಾನವಿಲ್ಲ, ಮುಂದಿನ ದಿನಗಳಲ್ಲಿ ದೆಹಲಿಯಲ್ಲೂ ಬಿಜೆಪಿ ಬಾವುಟ ಹಾರಲಿದೆ ಎಂದಿದ್ದಾರೆ.
#WATCH | Congress leader Arvinder Singh Lovely joins BJP at the party headquarters in Delhi in the presence of Union Minister Hardeep Singh Puri.
Arvinder Singh Lovely resigned from the position of Delhi Congress president on April 28. pic.twitter.com/3OJXisQIEd
— ANI (@ANI) May 4, 2024
ಈ ಹಿಂದೆ ಏಪ್ರಿಲ್ 28ರಂದು ಅರವಿಂದರ್ ಲವ್ಲಿ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಆರಂಭದಲ್ಲಿ ಅವರು ಯಾವುದೇ ರಾಜಕೀಯ ಪಕ್ಷಕ್ಕೆ ಸೇರುವ ವದಂತಿಗಳನ್ನು ನಿರಾಕರಿಸಿದ್ದರೂ ಇದೀಗ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿಯಲ್ಲಿ ಲವ್ಲಿಗೆ ಇದು ಮೊದಲ ಅವಧಿಯಲ್ಲ. ಇದಕ್ಕೂ ಮೊದಲು, ಅವರು 2017ರಲ್ಲಿ ಬಿಜೆಪಿಗೆ ಸೇರಿದ್ದರು. ಆದರೆ 9 ತಿಂಗಳ ನಂತರ ಕಾಂಗ್ರೆಸ್‌ಗೆ ಮರಳಿದರು. ಇದೀಗ ಮತ್ತೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್‌ಗೆ ಮತ್ತೊಂದು ಶಾಕ್, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್ ಅಭ್ಯರ್ಥಿ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಲ್ಲಿಸಿದ ರಾಜೀನಾಮೆ ಪತ್ರದಲ್ಲಿ ಅರವಿಂದರ್ ಲವ್ಲಿ ಅವರು 2024ರ ಲೋಕಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷ (ಎಎಪಿ) ಜೊತೆಗಿನ ಮೈತ್ರಿಯೇ ತಮ್ಮ ರಾಜೀನಾಮೆಯ ಹಿಂದಿನ ಕಾರಣವೆಂದು ಉಲ್ಲೇಖಿಸಿದ್ದಾರೆ. ಪಕ್ಷದ ವಿರುದ್ಧ ಸುಳ್ಳು, ಕಪೋಲಕಲ್ಪಿತ ಮತ್ತು ದುರುದ್ದೇಶಪೂರಿತ ಭ್ರಷ್ಟಾಚಾರ ಆರೋಪಗಳನ್ನು ಹೊರಿಸಿರುವ ಪಕ್ಷದ ಜತೆಗಿನ ಮೈತ್ರಿಯನ್ನು ದೆಹಲಿ ಕಾಂಗ್ರೆಸ್ ಘಟಕ ವಿರೋಧಿಸಿತ್ತು. ಈ ವಿರೋಧದ ನಡುವೆಯೂ ಪಕ್ಷವು ರಾಷ್ಟ್ರ ರಾಜಧಾನಿಯಲ್ಲಿ ಎಎಪಿ ಜೊತೆ ಮೈತ್ರಿ ಮಾಡಿಕೊಳ್ಳಲು ಮುಂದಾಯಿತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ