Arvinder Singh Lovely Resigns: ದೆಹಲಿ ಕಾಂಗ್ರೆಸ್​ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ

|

Updated on: Apr 28, 2024 | 10:42 AM

ದೆಹಲಿ ಕಾಂಗ್ರೆಸ್ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Arvinder Singh Lovely Resigns: ದೆಹಲಿ ಕಾಂಗ್ರೆಸ್​ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ
Follow us on

ದೆಹಲಿ ಕಾಂಗ್ರೆಸ್(Congress) ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ(Arvinder Singh Lovely) ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಲೋಕಸಭೆ ಚುನಾವಣೆ(Lok Sabha Election)ಗೂ ಮುನ್ನ ದೆಹಲಿಯಲ್ಲಿ ಕಾಂಗ್ರೆಸ್ ಭಾರೀ ಹಿನ್ನೆಡೆ ಅನುಭವಿಸಿದೆ.

ಪಕ್ಷದ ರಾಜ್ಯಾಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ವಿರುದ್ಧ ಸುಳ್ಳು, ಕಪೋಲಕಲ್ಪಿತ ಮತ್ತು ದುರುದ್ದೇಶಪೂರಿತ ಭ್ರಷ್ಟಾಚಾರ ಆರೋಪಗಳನ್ನು ಹೊರಿಸುವ ಏಕೈಕ ಆಧಾರದ ಮೇಲೆ ರಚಿಸಲಾದ ಪಕ್ಷದೊಂದಿಗಿನ ಮೈತ್ರಿಗೆ ದೆಹಲಿ ಕಾಂಗ್ರೆಸ್ ಘಟಕವು ವಿರುದ್ಧವಾಗಿದೆ ಎಂದು ಅರವಿಂದರ್ ಲವ್ಲಿ ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ. ಇದರ ಹೊರತಾಗಿಯೂ ದೆಹಲಿಯಲ್ಲಿ ಆಪ್ ಜೊತೆ ಮೈತ್ರಿ ಮಾಡಿಕೊಳ್ಳಲು ಪಕ್ಷ ನಿರ್ಧರಿಸಿದೆ ಎಂದಿದ್ದಾರೆ.

ದೆಹಲಿ ಕಾಂಗ್ರೆಸ್‌ನ ಶಿಸ್ತು ಸಮಿತಿ ಸಭೆಯ ನಂತರ ದೆಹಲಿಯ ಮಾಜಿ ಸಚಿವ ಮತ್ತು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಸದಸ್ಯ ರಾಜ್‌ಕುಮಾರ್ ಚೌಹಾಣ್ ಪಕ್ಷಕ್ಕೆ ರಾಜೀನಾಮೆ ನೀಡಿದ ಕೆಲವು ದಿನಗಳ ನಂತರ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ ನೀಡಿದ್ದಾರೆ.

ಮತ್ತಷ್ಟು ಓದಿ: ಲೋಕಸಭೆ ಚುನಾವಣೆ ಸಮಯದಲ್ಲೇ ಬಿಜೆಪಿ ಎಂಎಲ್​ಸಿ ಕೆಪಿ ನಂಜುಂಡಿ ರಾಜೀನಾಮೆ, ನಾಳೆ ಕಾಂಗ್ರೆಸ್ ಸೇರ್ಪಡೆ

ದೆಹಲಿ ಕಾಂಗ್ರೆಸ್‌ನ ಶಿಸ್ತು ಸಮಿತಿಯು ಮಂಗಳವಾರ ಸಭೆ ನಡೆಸಿದ್ದು, ಚೌಹಾಣ್ ವಿರುದ್ಧದ ದೂರುಗಳ ಬಗ್ಗೆ ಯಾವುದೇ ಕ್ರಮ ಕೈಗೊಳ್ಳಬೇಕೆ ಎಂದು ನಿರ್ಧರಿಸಲು ಎಐಸಿಸಿಗೆ ಬಿಟ್ಟಿತ್ತು.

 

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:21 am, Sun, 28 April 24