Aryan Khan: ಮುಂಬೈ ಡ್ರಗ್ಸ್​ ಪ್ರಕರಣ; ಶಾರುಖ್ ಖಾನ್ ಮಗ ಆರ್ಯನ್ ಖಾನ್​ಗೆ ಎನ್​ಸಿಬಿಯಿಂದ ಕ್ಲೀನ್ ಚಿಟ್

Mumbai Cruise Drugs Case: ಮುಂಬೈ ಡ್ರಗ್ಸ್​ ಪ್ರಕರಣದಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಅವರ ಮಗ ಆರ್ಯನ್ ಖಾನ್​ಗೆ ಎನ್​ಸಿಬಿ ಕ್ಲೀನ್ ಚಿಟ್ ನೀಡಿದೆ ಎಂದು ಮೂಲಗಳು ತಿಳಿಸಿವೆ.

Aryan Khan: ಮುಂಬೈ ಡ್ರಗ್ಸ್​ ಪ್ರಕರಣ; ಶಾರುಖ್ ಖಾನ್ ಮಗ ಆರ್ಯನ್ ಖಾನ್​ಗೆ ಎನ್​ಸಿಬಿಯಿಂದ ಕ್ಲೀನ್ ಚಿಟ್
ಆರ್ಯನ್ ಖಾನ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on:May 27, 2022 | 2:04 PM

ಡ್ರಗ್ಸ್​ ಪಾರ್ಟಿ ಪ್ರಕರಣದಲ್ಲಿ (Mumbai Drug Case) ಬಂಧನಕ್ಕೊಳಗಾಗಿದ್ದ ಬಾಲಿವುಡ್ ನಟ ಶಾರುಖ್ ಖಾನ್ ಅವರ ಮಗ ಆರ್ಯನ್ ಖಾನ್ (Aryan Khan) ವಿರುದ್ಧದ ಆರೋಪಪಟ್ಟಿಯನ್ನು ಇಂದು ನಾರ್ಕೋಟಿಕ್ ಕಂಟ್ರೋಲ್ ಬ್ಯೂರೋ (NCB) ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಅದನ್ನು ಸೆಷನ್ಸ್ ನ್ಯಾಯಾಲಯದಲ್ಲಿ ಇಲಾಖೆಯ ಮುಂದೆ ಸಲ್ಲಿಸಲಾಗಿದೆ. ಈ ಪ್ರಕರಣದಲ್ಲಿ ಆರ್ಯನ್ ಖಾನ್​ಗೆ ಎನ್​ಸಿಬಿಯಿಂದ (NCB) ಕ್ಲೀನ್ ಚಿಟ್ ಸಿಕ್ಕಿದೆ. ಬಾಲಿವುಡ್ ಬಾದ್​ಷಾ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್‌​ನನ್ನು ಕಳೆದ ವರ್ಷ ಮುಂಬೈ ಕರಾವಳಿಯ ಕ್ರೂಸ್ ಮೇಲಿನ ದಾಳಿ ವೇಳೆ ಡ್ರಗ್ಸ್ ಪತ್ತೆಯಾದ ಹಿನ್ನೆಲೆಯಲ್ಲಿ ಬಂಧಿಸಲಾಗಿತ್ತು. ಬಳಿಕ ಆತನಿಗೆ ಜಾಮೀನು ನೀಡಲಾಗಿತ್ತು.

ಈ ಪ್ರಕರಣದಲ್ಲಿ 14 ಮಂದಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದ 6 ಮಂದಿ ವಿರುದ್ಧ ದೂರು ದಾಖಲಾಗಿರಲಿಲ್ಲ. ಮೇ 29ರಂದು ಚಾರ್ಜ್‌ಶೀಟ್ ಸಲ್ಲಿಸಲು 60 ದಿನಗಳ ವಿಸ್ತರಣೆಯು ಮುಕ್ತಾಯಗೊಳ್ಳುತ್ತಿದ್ದಂತೆ ಎನ್‌ಸಿಬಿ ತನ್ನ ಅಂತಿಮ ಆರೋಪಪಟ್ಟಿಯನ್ನು ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದೆ. ಆರ್ಯನ್ ಖಾನ್ ಬಳಿ ದಾಳಿ ವೇಳೆ ಯಾವುದೇ ಡ್ರಗ್ಸ್ ಪತ್ತೆಯಾಗಿಲ್ಲ ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ.

ಏನಿದು ಪ್ರಕರಣ?: ಆರ್ಯನ್ ಖಾನ್‌ 2021ರ ಅಕ್ಟೋಬರ್‌ನಲ್ಲಿ ಡ್ರಗ್ ಕೇಸ್‌ನಲ್ಲಿ ಸಿಲುಕಿಕೊಂಡಿದ್ದರು. ಮುಂಬೈನ ಸಮುದ್ರ ತೀರದ ಐಷಾರಾಮಿ ಹಡಗಿನಲ್ಲಿ ಡ್ರಗ್ ಪಾರ್ಟಿ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ ಕಳೆದ ವರ್ಷ ಅಕ್ಟೋಬರ್ 8ರಂದು ಆತನನ್ನು ಬಂಧಿಸಲಾಗಿತ್ತು. ಹಲವು ದಿನಗಳ ಕಾಲ ಜೈಲಿನಲ್ಲಿದ್ದ ಆರ್ಯನ್‌ಗೆ ಸತತ ಪ್ರಯತ್ನದ ನಂತರ ಅಕ್ಟೋಬರ್ 28ರ ವೇಳೆಗೆ ಆತನಿಗೆ ಜಾಮೀನು ಸಿಕ್ಕಿತ್ತು.

ಇದನ್ನೂ ಓದಿ
Image
ಆರ್ಯನ್ ಖಾನ್​ ಕೇಸ್​​ನ ಪ್ರಮುಖ ಸಾಕ್ಷಿ ಪ್ರಭಾಕರ್ ಸೇಲ್ ಸಾವಿನ ಬಗ್ಗೆ ತನಿಖೆ ನಡೆಸಲು ಮಹಾರಾಷ್ಟ್ರ ಗೃಹ ಸಚಿವರಿಂದ ಆದೇಶ !
Image
Aryan Khan: ಕ್ರೂಸ್ ಶಿಪ್ ಪ್ರಕರಣದಲ್ಲಿ ಆರ್ಯನ್ ಖಾನ್ ವಿರುದ್ಧ ಯಾವುದೇ ಪುರಾವೆ ಇಲ್ಲ ಎಂಬ ವರದಿ ಅಲ್ಲಗಳೆದ ಎಸ್​ಐಟಿ
Image
ಪುತ್ರ ಆರ್ಯನ್​ ವಿವಾದದ ಬಳಿಕ ಮೊದಲ ಬಾರಿಗೆ ಕೆಲಸಕ್ಕೆ ಮರಳಿದ ಶಾರುಖ್​: ಫೋಟೋ ವೈರಲ್​
Image
ಆರ್ಯನ್​ ಖಾನ್​​ಗೆ ಬಾಡಿಗಾರ್ಡ್​ ಫೈನಲ್​? ವರ್ಷದ ಸಂಬಳ 2.7 ಕೋಟಿ ರೂಪಾಯಿ

ಇದನ್ನೂ ಓದಿ: ಎನ್​ಸಿಬಿ ವಿಚಾರಣೆಯಿಂದ ತಪ್ಪಿಸಿಕೊಂಡ ಆರ್ಯನ್​ ಖಾನ್​; ಶಾರುಖ್​ ಮಗ ಕೊಟ್ಟ ಕಾರಣ ಏನು?

ಜಾಮೀನು ಸಿಕ್ಕಿದ ನಂತರವೂ ಆತನ ವಿರುದ್ಧ ತನಿಖೆ ಮುಂದುವರೆದಿತ್ತು. ಈ ಪ್ರಕರಣದ ತನಿಖೆಯನ್ನು ಎಸ್‌ಐಟಿಗೆ ವಹಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್‌ಶೀಟ್ ಸಲ್ಲಿಸಲು ಎನ್‌ಸಿಬಿಯ ಎಸ್‌ಐಟಿ 90 ದಿನಗಳ ಕಾಲಾವಕಾಶ ಕೋರಿತ್ತು. ಅದರಂತೆ ಇಂದು ಎನ್​ಸಿಬಿ ಅಂತಿಮ ವರದಿಯನ್ನು ಸಲ್ಲಿಸಿದೆ.

ಮುಂಬೈನ ಐಷಾರಾಮಿ ಹಡಗಿನಲ್ಲಿ ಡ್ರಗ್ ಪಾರ್ಟಿ ಮಾಡಲಾಗುತ್ತಿದೆ ಎಂಬ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಕಳೆದ ಅಕ್ಟೋಬರ್​ನಲ್ಲಿ ಎನ್‌ಸಿಬಿ ದಾಳಿ ನಡೆಸಿತ್ತು. ಆ ದಾಳಿಯಲ್ಲಿ ಆರ್ಯನ್ ಖಾನ್ ಸೇರಿ 14 ಮಂದಿಯನ್ನು ಬಂಧಿಸಲಾಗಿತ್ತು. ದಾಳಿ ವೇಳೆ ಕ್ರೂಸ್ ಹಡಗಿನಿಂದ 13 ಗ್ರಾಂ ಕೊಕೇನ್, ಐದು ಗ್ರಾಂ ಮೆಫೆಡ್ರೋನ್, 21 ಗ್ರಾಂ ಗಾಂಜಾ, 22 ಎಂಡಿಎಂಎ (ಎಕ್ಸ್ಟಸಿ) ಮಾತ್ರೆಗಳು ಮತ್ತು 1.33 ಲಕ್ಷ ರೂ. ನಗದನ್ನು ಎನ್‌ಸಿಬಿ ವಶಪಡಿಸಿಕೊಂಡಿತ್ತು. ಮುಂಬೈ ಡ್ರಗ್ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಆರ್ಯನ್ ಖಾನ್ 25 ದಿನಕ್ಕೂ ಹೆಚ್ಚು ಸಮಯ ಜೈಲಿನಲ್ಲಿ ಕಳೆದಿದ್ದರು. ಬಳಿಕ ಆತನಿಗೆ ಜಾಮೀನು ಸಿಕ್ಕಿತ್ತು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕಾಣಿಸಿಕೊಂಡ ಆರ್ಯನ್​ ಖಾನ್​; ಮಗನ ಹೆಗಲಿಗೆ ದೊಡ್ಡ ಜವಾಬ್ದಾರಿ ಹೊರಿಸಿದ ಶಾರುಖ್​?

ದಾಳಿ ವೇಳೆ ಆರ್ಯನ್​ ಖಾನ್​ ಬಳಿ ಡ್ರಗ್ಸ್​ ಪತ್ತೆಯಾಗಿಲ್ಲ. ಅಂತಾರಾಷ್ಟ್ರೀಯ ಮಾದಕವಸ್ತು ಕಳ್ಳಸಾಗಣೆ ಸಿಂಡಿಕೇಟ್​ನ ಭಾಗವಾಗಿದ್ದರು ಎಂಬ ಬಗ್ಗೆ ಯಾವುದೇ ಪುರಾವೆಗಳಿಲ್ಲ ಎಂದು ಎಸಿಬಿ ವರದಿ ಸಲ್ಲಿಸಿದೆ. ಹೀಗಾಗಿ ಆರ್ಯನ್​ ಖಾನ್​ ಈ ಪ್ರಕರಣದಲ್ಲಿ ನಿರ್ದೋಷಿ ಎಂದು ಎನ್​ಸಿಬಿ ಘೋಷಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:19 pm, Fri, 27 May 22

ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ