ಅತ್ಯಾಚಾರ ಪ್ರಕರಣ; ಸ್ವಯಂಘೋಷಿತ ದೇವಮಾನ ಅಸಾರಾಂ ಬಾಪು ದೋಷಿ ಎಂದು ಗಾಂಧಿನಗರ ಕೋರ್ಟ್​ ಘೋಷಣೆ

|

Updated on: Jan 30, 2023 | 6:34 PM

2018ರಲ್ಲಿ ಜೋಧ್‌ಪುರ ನ್ಯಾಯಾಲಯವು ನಗರದ ತನ್ನ ಆಶ್ರಮದಲ್ಲಿ 16 ವರ್ಷದ ಹುಡುಗಿಯ ಮೇಲೆ ಅತ್ಯಾಚಾರ ಎಸಗಿದ್ದಕ್ಕಾಗಿ ಅಸಾರಾಂ ಬಾಪುವನ್ನು ತಪ್ಪಿತಸ್ಥನೆಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಅತ್ಯಾಚಾರ ಪ್ರಕರಣ; ಸ್ವಯಂಘೋಷಿತ ದೇವಮಾನ ಅಸಾರಾಂ ಬಾಪು ದೋಷಿ ಎಂದು ಗಾಂಧಿನಗರ ಕೋರ್ಟ್​ ಘೋಷಣೆ
ಅಸಾರಾಂ ಬಾಪು
Follow us on

ಗಾಂಧಿನಗರ: 2013ರ ಅತ್ಯಾಚಾರ ಪ್ರಕರಣದಲ್ಲಿ (Rape Case) ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪು (Asaram Bapu) ದೋಷಿ ಎಂದು ಗಾಂಧಿನಗರ ಸೆಷನ್ಸ್ ಕೋರ್ಟ್ ಇಂದು ತೀರ್ಪು ನೀಡಿದೆ. 2013ರಲ್ಲಿ ಸೂರತ್‌ನ ಅಪ್ರಾಪ್ತ ಬಾಲಕಿಯೊಬ್ಬಳು ರಾಜಸ್ಥಾನದ ಆಶ್ರಮದಲ್ಲಿ ಅಸಾರಾಂ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಿದ್ದಳು. ಈ ದೂರಿನ ಆಧಾರದಲ್ಲಿ ಆತನನ್ನು 2013ರ ಆಗಸ್ಟ್​ 31ರಂದು ಬಂಧಿಸಲಾಗಿತ್ತು. ಆಗಿನಿಂದ ಅಸಾರಾಂ ಬಾಪು ಜೈಲಿನಲ್ಲಿದ್ದಾರೆ.

ಅಸಾರಾಂ ಬಾಪು ಸೇರಿದಂತೆ 7 ಮಂದಿಯನ್ನು ಆರೋಪಿಗಳೆಂದು ಹೆಸರಿಸಲಾದ ಈ ಪ್ರಕರಣದಲ್ಲಿ 68 ಜನರ ಹೇಳಿಕೆಗಳನ್ನು ದಾಖಲಿಸಲಾಗಿದೆ. ಈ ಹಿಂದೆ 8 ಜನರನ್ನು ಆರೋಪಿಗಳೆಂದು ಹೆಸರಿಸಲಾಗಿತ್ತು. ಪ್ರಸ್ತುತ ಜೋಧ್‌ಪುರ ಜೈಲಿನಲ್ಲಿರುವ ಅಸಾರಾಂ ಬಾಪು ವರ್ಚುವಲ್ ಆಗಿ ವಿಚಾರಣೆಗೆ ಹಾಜರಾಗಿದ್ದರು.

ಇದನ್ನೂ ಓದಿ: ಅಸಾರಾಂ ಬಾಪು ಆಶ್ರಮದೊಳಗೆ ನಿಲ್ಲಿಸಿದ್ದ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಬಾಲಕಿಯ ಶವ ಪತ್ತೆ

2018ರಲ್ಲಿ ಜೋಧ್‌ಪುರ ನ್ಯಾಯಾಲಯವು ನಗರದ ತನ್ನ ಆಶ್ರಮದಲ್ಲಿ 16 ವರ್ಷದ ಹುಡುಗಿಯ ಮೇಲೆ ಅತ್ಯಾಚಾರ ಎಸಗಿದ್ದಕ್ಕಾಗಿ ಅಸಾರಾಂ ಬಾಪುವನ್ನು ತಪ್ಪಿತಸ್ಥನೆಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು. 77 ವರ್ಷದ ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಸೇರಿ ನಾಲ್ವರು ಆರೋಪಿಗಳನ್ನು ದೋಷಿ ಎಂದು ಘೋಷಿಸಲಾಗಿತ್ತು.

2013ರ ಆಗಸ್ಟ್ 15ರಂದು ಅಸಾರಾಂ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಛಿಂದ್ವಾರದಲ್ಲಿರುವ ಅಸಾರಾಂ ಆಶ್ರಮದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಉತ್ತರಪ್ರದೇಶದ ಷಹಜಹಾನ್‌ಪುರದ ಬಾಲಕಿ ದೂರು ನೀಡಿದ್ದಳು. ಆ ದೂರು ಆಧರಿಸಿ 2013ರ ಸೆಪ್ಟೆಂಬರ್ 1ರಂದು ಇಂದೋರ್‌ನಲ್ಲಿ ಅಸಾರಾಂ ಅವರನ್ನು ಬಂಧಿಸಿ ಜೋಧಪುರಕ್ಕೆ ಕರೆತರಲಾಗಿತ್ತು. ಸೆಪ್ಟೆಂಬರ್ 2ರಿಂದ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ