ಲಖಿಂಪುರ ಖೇರಿ ಹಿಂಸಾಚಾರ: ಕೇಂದ್ರ ಸಚಿವರ ಪುತ್ರ ಆಶೀಶ್​ ಮಿಶ್ರಾಗೆ ಪೊಲೀಸರಿಂದ ಸಮನ್ಸ್​

ಲಖಿಂಪುರ ಖೇರಿಯಲ್ಲಿ ರೈತರತ್ತ ಕಾರು ಹರಿದ ಪ್ರಕರಣದಲ್ಲಿ ತಮ್ಮ ಪಾತ್ರವೇನೂ ಇಲ್ಲ ಎಂದು ಆಶೀಶ್​ ಮಿಶ್ರಾ ಹೇಳಿಕೊಂಡಿದ್ದಾರೆ. ನಾನು ಘಟನೆ ನಡೆದಾಗ ಲಖಿಂಪುರದಲ್ಲಿ ಇರಲಿಲ್ಲ ಎಂದೂ ಹೇಳಿದ್ದಾರೆ.

ಲಖಿಂಪುರ ಖೇರಿ ಹಿಂಸಾಚಾರ: ಕೇಂದ್ರ ಸಚಿವರ ಪುತ್ರ ಆಶೀಶ್​ ಮಿಶ್ರಾಗೆ ಪೊಲೀಸರಿಂದ ಸಮನ್ಸ್​
ಆಶೀಶ್​ ಮಿಶ್ರಾ
Follow us
TV9 Web
| Updated By: Lakshmi Hegde

Updated on:Oct 07, 2021 | 5:44 PM

ಲಖಿಂಪುರ ಖೇರಿ ಹಿಂಸಾಚಾರ (Lakhimpur Kheri violence) ಪ್ರಕರಣದಲ್ಲಿ ಕೇಂದ್ರ ಗೃಹ ಇಲಾಖೆ ರಾಜ್ಯ ಸಚಿವ ಅಜಯ್​ ಮಿಶ್ರಾ ಪುತ್ರ ಆಶೀಶ್​ ಮಿಶ್ರಾ (Ashish Mishra)ರಿಗೆ ಉತ್ತರಪ್ರದೇಶ ಪೊಲೀಸರು ಇಂದು ಸಮನ್ಸ್​ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.  ಇನ್ನು ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಈಗಾಗಲೇ ಆಶೀಶ್​ ಮಿಶ್ರಾ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಅಂದು ರೈತರಿಗೆ ಡಿಕ್ಕಿ ಹೊಡೆದ ಬೆಂಗಾವಲು ವಾಹನದಲ್ಲಿ ಇದ್ದ ಆಶೀಶ್​ ಪಾಂಡೆ ಮತ್ತು ಲವಕುಶ್​ ಎಂಬುವರನ್ನು ಇಂದು ಬಂಧಿಸಲಾಗಿದೆ. ಇವರಿಬ್ಬರೂ ಆಶೀಶ್​ ಮಿಶ್ರಾ ಆಪ್ತರೂ ಹೌದು ಎಂದು ಲಖನೌ ರೇಂಜ್​​ನ ಐಜಿ ಲಕ್ಷ್ಮೀ ಸಿಂಗ್​ ತಿಳಿಸಿದ್ದಾರೆ.  

ರೈತರಿಗೆ ವಾಹನಗಳು ಡಿಕ್ಕಿ ಹೊಡೆದ ಸ್ಥಳದಿಂದ ಕಿಯೋಸ್ಕ್​ ಯಂತ್ರಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಅದಕ್ಕೆ ಸಂಬಂಧಪಟ್ಟ ವಿಧಿವಿಜ್ಞಾನ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಆಶೀಶ್​ ಮಿಶ್ರಾ ನಾಪತ್ತೆಯಾಗಿದ್ದು, ಅವರನ್ನು ಹುಡುಕುವ ಕೆಲಸ ಆಗುತ್ತಿದೆ ಎಂದೂ ಲಕ್ಷ್ಮೀ ಸಿಂಗ್​ ಮಾಹಿತಿ ನೀಡಿದ್ದಾರೆ. ರೈತರಿಗೆ ಡಿಕ್ಕಿ ಹೊಡೆದ ಕಾರಿನಲ್ಲಿ ಆಶೀಶ್​ ಮಿಶ್ರಾ ಇದ್ದರು ಮತ್ತು ಅವರು ರೈತರತ್ತ ಗುಂಡನ್ನೂ ಹಾರಿಸಿದ್ದಾರೆ ಎಂಬುದು ಎಫ್​ಐಆರ್​ನಲ್ಲಿ ದಾಖಲಾಗಿದೆ. ಸದ್ಯಕ್ಕಂತೂ ಅವರು ಕಾಣಿಸುತ್ತಿಲ್ಲ. ಶೋಧ ಮುಂದುವರಿಸುತ್ತೇವೆ ಎಂದೂ ಲಕ್ಷ್ಮೀಸಿಂಗ್​ ಹೇಳಿದ್ದಾರೆ.

ಆರೋಪ ನಿರಾಕರಿಸಿರುವ ಆಶೀಶ್​ ಮಿಶ್ರಾ ಲಖಿಂಪುರ ಖೇರಿಯಲ್ಲಿ ರೈತರತ್ತ ಕಾರು ಹರಿದ ಪ್ರಕರಣದಲ್ಲಿ ತಮ್ಮ ಪಾತ್ರವೇನೂ ಇಲ್ಲ ಎಂದು ಆಶೀಶ್​ ಮಿಶ್ರಾ ಹೇಳಿಕೊಂಡಿದ್ದಾರೆ. ನಾನು ಘಟನೆ ನಡೆದಾಗ ಲಖಿಂಪುರ ಖೇರಿಯಲ್ಲಿ ಇರಲಿಲ್ಲ.  ಬೆಳಗ್ಗೆ 9ಗಂಟೆಯಿಂದಲೂ ಬೇರೆ ಒಂದು ಕಾರ್ಯಕ್ರಮದಲ್ಲಿ ಇದ್ದೆ ಎಂದಿದ್ದಾರೆ. ಹಾಗೇ, ಕೇಂದ್ರ ಸಚಿವ ಅಜಯ್​ ಮಿಶ್ರಾ ಕೂಡ ಇದನ್ನೇ ಹೇಳಿದ್ದಾರೆ. ಹಾಗೂ ಒಮ್ಮೆ ನನ್ನ ಪುತ್ರ ಇರುವುದು ಸಾಬೀತಾದರೆ ತಾವು ರಾಜೀನಾಮೆ ನೀಡುವುದಾಗಿಯೂ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಹರ್ಯಾಣದಲ್ಲೂ ಪ್ರತಿಭಟನಾ ನಿರತ ರೈತರತ್ತ ನುಗ್ಗಿದ ಕಾರು; ಪೊಲೀಸರಿಗೆ ದೂರು ನೀಡಿದ ಗಾಯಾಳು ರೈತ

ಲಖಿಂಪುರ ಖೇರಿ ಹಿಂಸಾಚಾರ: ಕೇಂದ್ರ ಸಚಿವರ ಪುತ್ರನ ಆಪ್ತರಿಬ್ಬರ ಬಂಧನ !

Published On - 5:34 pm, Thu, 7 October 21

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್