Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿ ಮನವೊಲಿಕೆಗೆ ಪ್ರಯತ್ನಿಸುವೆ; ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆ ಬಗ್ಗೆ ಶಾಸಕರೊಂದಿಗೆ ಅಶೋಕ್ ಗೆಹ್ಲೋಟ್ ಚರ್ಚೆ

Congress President Election: ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲು ರಾಹುಲ್ ಗಾಂಧಿಯನ್ನು ಕೊನೆಯ ಬಾರಿಗೆ ಮನವೊಲಿಸಲು ಪ್ರಯತ್ನಿಸುವುದಾಗಿ ಅಶೋಕ್ ಗೆಹ್ಲೋಟ್ ಶಾಸಕರಿಗೆ ತಿಳಿಸಿದ್ದಾರೆ.

ರಾಹುಲ್ ಗಾಂಧಿ ಮನವೊಲಿಕೆಗೆ ಪ್ರಯತ್ನಿಸುವೆ; ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆ ಬಗ್ಗೆ ಶಾಸಕರೊಂದಿಗೆ ಅಶೋಕ್ ಗೆಹ್ಲೋಟ್ ಚರ್ಚೆ
ಅಶೋಕ್ ಗೆಹ್ಲೋಟ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Sep 21, 2022 | 10:37 AM

ಜೈಪುರ: ಕಾಂಗ್ರೆಸ್ ಅಧ್ಯಕ್ಷ (Congress President) ಸ್ಥಾನಕ್ಕೆ ಮುಂಚೂಣಿಯಲ್ಲಿರುವ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ನಿನ್ನೆ (ಮಂಗಳವಾರ) ರಾತ್ರಿ ತಮ್ಮ ಶಾಸಕರೊಂದಿಗೆ ಸಭೆ ನಡೆಸಿದ್ದಾರೆ. 71 ವರ್ಷದ ಕಾಂಗ್ರೆಸ್ ಹಿರಿಯ ನಾಯಕ ಅಶೋಕ್ ಗೆಹ್ಲೋಟ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವುದಾಗಿ ಶಾಸಕರಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ಆದರೆ, ನಾನು ನಿಮ್ಮಿಂದ ದೂರವಿರುವುದಿಲ್ಲ ಎಂದು ಅವರು ಶಾಸಕರಿಗೆ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

  1. ನಿನ್ನೆ ತಡರಾತ್ರಿಯ ಸಭೆಯಲ್ಲಿ ಅಶೋಕ್ ಗೆಹ್ಲೋಟ್ ಅವರು ಮೊದಲು ಕೇರಳಕ್ಕೆ ಹೋಗಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹುದ್ದೆಗೆ ಸ್ಪರ್ಧಿಸುವಂತೆ ರಾಹುಲ್ ಗಾಂಧಿಯನ್ನು ಒತ್ತಾಯಿಸುವುದಾಗಿ ಹೇಳಿದ್ದಾರೆ.
  2. ನಾನು ಎಲ್ಲಿಗೆ ಹೋದರೂ ರಾಜಸ್ಥಾನಕ್ಕೆ ಸೇವೆ ಸಲ್ಲಿಸುತ್ತಲೇ ಇರುತ್ತೇನೆ. ನಾನು ಎಲ್ಲಿಗೂ ಹೋಗುವುದಿಲ್ಲ, ಚಿಂತಿಸಬೇಡಿ ಎಂದು ಅಶೋಕ್ ಗೆಹ್ಲೋಟ್ ಹೇಳಿದ್ದಾರೆ. ಈ ಹಂತದಲ್ಲಿ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಡುವ ಯಾವುದೇ ಆಲೋಚನೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.
  3. ಅಶೋಕ್ ಗೆಹ್ಲೋಟ್ ಇಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ. 2024ರ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ಬೆಂಬಲವನ್ನು ಪಡೆಯಲು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆಯಲ್ಲಿರುವ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಇಂದು ಸಂಜೆ ತೆರಳಲಿದ್ದಾರೆ.
  4. ಅಶೋಕ್ ಗೆಹ್ಲೋಟ್ ಇಂದು ತನ್ನ ಪ್ರವಾಸವನ್ನು ಪ್ರಾರಂಭಿಸುತ್ತಿದ್ದಂತೆ, ಅವರು ದೆಹಲಿ, ಕೇರಳ ಮತ್ತು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದಾರೆ. ದೆಹಲಿಯಲ್ಲಿ ಸೆಪ್ಟೆಂಬರ್ 25 ಮತ್ತು 28ರ ನಡುವೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಲು ಅಶೋಕ್ ಗೆಹ್ಲೋಟ್ ನಿರ್ಧರಿಸಿದ್ದಾರೆ.
  5. ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲು ರಾಹುಲ್ ಗಾಂಧಿಯನ್ನು ಕೊನೆಯ ಬಾರಿಗೆ ಮನವೊಲಿಸಲು ಪ್ರಯತ್ನಿಸುವುದಾಗಿ ಅಶೋಕ್ ಗೆಹ್ಲೋಟ್ ಶಾಸಕರಿಗೆ ತಿಳಿಸಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಕಳಪೆ ಪ್ರದರ್ಶನದ ನಂತರ ರಾಹುಲ್ ಗಾಂಧಿ ಅವರು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದರು. ನಂತರ ಮತ್ತೆ ಅಧ್ಯಕ್ಷ ಸ್ಥಾನಕ್ಕೇರಲು ನಿರಾಕರಿಸಿದ್ದರು.
  6. ತಾವು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವಾಗ ಎಲ್ಲರೂ ದೆಹಲಿಗೆ ಬರಬೇಕು ಎಂದು ರಾಜಸ್ಥಾನ ಮುಖ್ಯಮಂತ್ರಿ ಶಾಸಕರಿಗೆ ಹೇಳಿದ್ದಾರೆ. ನಾನು ಪಕ್ಷದ ಆಜ್ಞೆಯನ್ನು ಮಾಡುತ್ತೇನೆ ಮತ್ತು ನಾನು ಪಕ್ಷದ ನಿಷ್ಠಾವಂತ ಸೈನಿಕ ಎಂದು ಹೇಳಿದ್ದಾರೆ.
  7. ಕಾಂಗ್ರೆಸ್ ನಾಯಕ ಶಶಿ ತರೂರ್ ಕೂಡ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಇಂಗಿತವನ್ನು ಘೋಷಿಸಿದ್ದಾರೆ. ಅಲ್ಲದೆ, ಅವರು ಸೋನಿಯಾ ಗಾಂಧಿಯವರಿಂದ ಅನುಮತಿ ಪಡೆದಿದ್ದಾರೆ.
  8. ಅಶೋಕ್ ಗೆಹ್ಲೋಟ್ ಅವರು ಗಾಂಧಿ ಕುಟುಂಬದ ನಿಷ್ಠಾವಂತ ನಿಷ್ಠರಾಗಿದ್ದರೆ ಶಶಿ ತರೂರ್ 2020ರಲ್ಲಿ ಸೋನಿಯಾ ಗಾಂಧಿಗೆ ಬರೆದ ಪತ್ರದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ವ್ಯಾಪಕವಾದ ಸುಧಾರಣೆಗಳನ್ನು ಒತ್ತಾಯಿಸಿದ 23 ಹಿರಿಯ ಪಕ್ಷದ ನಾಯಕರ ಭಾಗವಾಗಿದ್ದರು.
  9. ರಾಹುಲ್ ಗಾಂಧಿಯನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡುವ ಪರವಾಗಿ ನಿರ್ಣಯವನ್ನು ಅಂಗೀಕರಿಸುವಲ್ಲಿ ರಾಜಸ್ಥಾನ ಕಾಂಗ್ರೆಸ್ ಮುಂಚೂಣಿಯಲ್ಲಿದೆ. ಹರಿಯಾಣ, ಜಾರ್ಖಂಡ್, ಛತ್ತೀಸ್​ಗಢ, ಗುಜರಾತ್, ತಮಿಳುನಾಡು, ಬಿಹಾರ, ಮಹಾರಾಷ್ಟ್ರ, ಜಮ್ಮು ಕಾಶ್ಮೀರದ ಕಾಂಗ್ರೆಸ್ ಘಟಕಗಳು ಇದೇ ರೀತಿಯ ನಿರ್ಣಯಗಳನ್ನು ಅಂಗೀಕರಿಸಿವೆ.
  10. ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸೆಪ್ಟೆಂಬರ್ 30ರವರೆಗೆ ನಾಮಪತ್ರಗಳನ್ನು ಸ್ವೀಕರಿಸಲಾಗುವುದು. ಅಕ್ಟೋಬರ್ 17ರಂದು ಚುನಾವಣೆ ನಿಗದಿಯಾಗಿದ್ದು, ಅಕ್ಟೋಬರ್ 19ರಂದು ಫಲಿತಾಂಶ ಪ್ರಕಟವಾಗಲಿದೆ.
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್