ಉದಯಪುರ ಟೈಲರ್ ಕನ್ಹಯ್ಯಾ ಲಾಲ್ ಕೊಲೆ ಹಿಂದೆ ಬಿಜೆಪಿ ಕೈವಾಡವಿದೆ: ಅಶೋಕ್ ಗೆಹ್ಲೋಟ್
ಉದಯಪುರ ಟೈಲರ್ ಕನ್ಹಯ್ಯಾ ಲಾಲ್ ಕೊಲೆಯ ಹಿಂದೆ ಬಿಜೆಪಿ ಕೈವಾಡವಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್(Ashok Gehlot) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಟೈಲರ್ ಕನ್ಹಯ್ಯಾ ಲಾಲ್ ಹಂತಕರು ಭಾರತೀಯ ಜನತಾ ಪಕ್ಷದೊಂದಿಗೆ (ಬಿಜೆಪಿ) ಸಂಪರ್ಕ ಹೊಂದಿದ್ದಾರೆ ಎಂದು ಹೇಳಿದ್ದಾರೆ. ಕಳೆದ ವರ್ಷ ಜೂನ್ 28 ರಂದು ಉದಯಪುರದಲ್ಲಿ ಇಬ್ಬರು ಕನ್ಹಯ್ಯಾ ಲಾಲ್ ಅವರ ಅಂಗಡಿಗೆ ನುಗ್ಗಿ ಕತ್ತು ಸೀಳಿ ಹತ್ಯೆ ಮಾಡಿದ್ದರು.

ಕನ್ಹಯ್ಯಾ ಲಾಲ್ ಹತ್ಯೆಯ ಹಿಂದಿನ ಆರೋಪಿಗಳನ್ನು ಆತನ ಹತ್ಯೆಗೆ ಕೆಲವು ದಿನಗಳ ಮೊದಲು ಪೊಲೀಸರು ಮತ್ತೊಂದು ಪ್ರಕರಣದಲ್ಲಿ ಬಂಧಿಸಿದ್ದರು. ಅವರನ್ನು ಬಿಡುಗಡೆ ಮಾಡಲು ಬಿಜೆಪಿ ನಾಯಕರು ಪೊಲೀಸ್ ಠಾಣೆಗೆ ಬಂದಿದ್ದರು ಎಂದು ಗೆಹ್ಲೋಟ್ ಆರೋಪಿಸಿದ್ದಾರೆ. ನವೆಂಬರ್ 25 ರಂದು ರಾಜಸ್ಥಾನದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕೋಮು ಉದ್ವಿಗ್ನತೆಯನ್ನು ಉಂಟುಮಾಡಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ಆರೋಪಿಸಿದ್ದಾರೆ.
ಮತ್ತಷ್ಟು ಓದಿ: ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ಭಯೋತ್ಪಾದಕರ ಬಗ್ಗೆ ಸಹಾನುಭೂತಿ ಹೊಂದಿದೆ: ಮೋದಿ
ಕಾಂಗ್ರೆಸ್‌ಗೆ ಭಯೋತ್ಪಾದಕರ ಬಗ್ಗೆ ಸಹಾನುಭೂತಿ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ಹಿಂದೆ ಹೇಳಿಕೆ ನೀಡಿದ ಬೆನ್ನಲ್ಲೇ ಗೆಹ್ಲೋಟ್ ಈ ಹೇಳಿಕೆ ನೀಡಿದ್ದಾರೆ.
ಗುರುವಾರ ಉದಯಪುರ ಬಳಿ ಚುನಾವಣಾ ರ್ಯಾಲಿಯಲ್ಲಿ ಟೈಲರ್ ಕನ್ಹಯ್ಯಾ ಲಾಲ್ ಅವರ ಕ್ರೂರ ಹತ್ಯೆಯನ್ನು ಉಲ್ಲೇಖಿಸಿ ಅವರು ಈ ಹೇಳಿಕೆಯನ್ನು ನೀಡಿದ್ದರು.
ಕನ್ಹಯ್ಯಾ ಲಾಲ್ ಜಿ ಹತ್ಯೆಯು ರಾಜ್ಯ ಸರ್ಕಾರಕ್ಕೆ ದೊಡ್ಡ ಕಳಂಕವಾಗಿದೆ, ಭಯೋತ್ಪಾದಕರ ಬಗ್ಗೆ ಸಹಾನುಭೂತಿ ಹೊಂದಿರುವ ಕಾಂಗ್ರೆಸ್ ಸರ್ಕಾರ ಇರುವುದರಿಂದ ಉದಯಪುರದಲ್ಲಿ ಇಂತಹ ಹೇಯ ಘಟನೆ ಸಂಭವಿಸಿದೆ ಎಂದು ಮೋದಿ ಹೇಳಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ