AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶೋಕ್ ಗೆಹ್ಲೋಟ್ ಅವರ ನಾಯಕಿ ವಸುಂಧರಾ ರಾಜೇ ಎಂದು ತೋರುತ್ತದೆ: ಸಚಿನ್ ಪೈಲಟ್

ಭ್ರಷ್ಟಾಚಾರ ಮತ್ತು ಯುವಜನತೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಎತ್ತಿ ತೋರಿಸಲು ಅಜ್ಮೀರ್‌ನಿಂದ ಜೈಪುರದವರೆಗೆ "ಜನಸಂಘರ್ಷ್ ಯಾತ್ರೆ" ನಡೆಸುವುದಾಗಿ ಸಚಿನ್ ಪೈಲಟ್ ಘೋಷಿಸಿದ್ದಾರೆ. ಯಾತ್ರೆ ಯಾರ ವಿರುದ್ಧವೂ ಅಲ್ಲ ಭ್ರಷ್ಟಾಚಾರದ ವಿರುದ್ಧ ಎಂದು ಅವರು ಹೇಳಿದ್ದಾರೆ.

ಅಶೋಕ್ ಗೆಹ್ಲೋಟ್ ಅವರ ನಾಯಕಿ ವಸುಂಧರಾ ರಾಜೇ ಎಂದು ತೋರುತ್ತದೆ: ಸಚಿನ್ ಪೈಲಟ್
ಸಚಿನ್ ಪೈಲಟ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: May 09, 2023 | 1:54 PM

Share

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ಅವರ ನಾಯಕಿ ಸೋನಿಯಾ ಗಾಂಧಿ ಅಲ್ಲ, ಬಿಜೆಪಿಯ ವಸುಂಧರಾ ರಾಜೇ (Vasundhara Raje) ಎಂದು ತೋರುತ್ತಿದೆ ಎಂದು ಸಚಿನ್ ಪೈಲಟ್ ವಾಗ್ದಾಳಿ ನಡೆಸಿದ್ದಾರೆ. 2020 ರಲ್ಲಿ ಸಚಿನ್ ಪೈಲಟ್ (Sachin Pilot) ಕೆಲವು ಶಾಸಕರೊಂದಿಗೆ ದಂಗೆ ಎದ್ದಾಗ ವಸುಂಧರಾ ರಾಜೇ  ತಮ್ಮ ಸರ್ಕಾರವನ್ನು ಉಳಿಸಲು ಸಹಾಯ ಮಾಡಿದರು ಎಂದು ಗೆಹ್ಲೋಟ್ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿನ್ ಪೈಲಟ್, ಮುಖ್ಯಮಂತ್ರಿಯವರ ಭಾಷಣವನ್ನು ಕೇಳಿದ ನಂತರ, ಅವರ ನಾಯಕಿ ಸೋನಿಯಾ ಗಾಂಧಿ ಅಲ್ಲ. ಅವರ ನಾಯಕಿ ವಸುಂಧರಾ ರಾಜೇ ಎಂದು ನಾನು ತೋರುತ್ತದೆ ಎಂದಿದ್ದಾರೆ.

ಬಿಜೆಪಿ ತನ್ನ ಸರ್ಕಾರವನ್ನು ಉರುಳಿಸಲು ಪ್ರಯತ್ನಿಸಿದೆ ಎಂದು ಅವರು ಆರೋಪಿಸಿದ್ದಾರೆ. ನಂತರ ಬಿಜೆಪಿ ನಾಯಕರೊಬ್ಬರು ತಮ್ಮ ಸರ್ಕಾರವನ್ನು ಉಳಿಸಲು ಸಹಾಯ ಮಾಡಿದರು ಎಂದು ಅವರು ಹೇಳುತ್ತಾರೆ. ಈ ವೈರುಧ್ಯದ ಹೇಳಿಕೆಯನ್ನು ಅವರು ವಿವರಿಸಬೇಕು ಎಂದಿದ್ದಾರೆ ಸಚಿನ್.

ಧೋಲ್‌ಪುರದಲ್ಲಿ ನಡೆದ ರ್ಯಾಲಿಯಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ವಸುಂಧರಾ ರಾಜೇ ಮತ್ತು ಇತರ ಇಬ್ಬರು ಬಿಜೆಪಿ ನಾಯಕರು ತಮ್ಮ ಸರ್ಕಾರವನ್ನು ಉಳಿಸಲು ಸಹಾಯ ಮಾಡಿದರು. ಬಿಜೆಪಿಗೆ ಸೇರಲು ಮತ್ತು ತಮ್ಮ ಸರ್ಕಾರವನ್ನು ಉರುಳಿಸಲು ಶಾಸಕರಿಗೆ ಹಣವನ್ನು ನೀಡಲಾಗಿತ್ತು ಎಂದು ಹೇಳಿದ್ದರು.

ಈ ಬಗ್ಗೆ ಮಾತೆತ್ತದ ಸಚಿನ್ ಪೈಲಟ್, ಗೆಹ್ಲೋಟ್ ಅವರು ತಮ್ಮ ಪಕ್ಷದ ಶಾಸಕರನ್ನು ಅವಮಾನಿಸಿದ್ದಾರೆ ಮತ್ತು ಚುನಾವಣೆಗೆ ಮುಂಚಿತವಾಗಿ ತಮ್ಮದೇ ಪಕ್ಷಕ್ಕೆ ಹಾನಿ ಮಾಡಿದ್ದಾರೆ ಎಂದು ಆರೋಪಿಸಿದರು. ನಾನು ಪದೇ ಪದೇ ಮನವಿ ಮಾಡಿದರೂ ವಸುಂಧರಾ ರಾಜೇ ಸರ್ಕಾರ ಭ್ರಷ್ಟಾಚಾರದ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ ಎಂದು ನನಗೆ ಈಗ ಅರ್ಥವಾಗಿದೆ. ಬಿಜೆಪಿ ನಾಯಕರೊಂದಿಗಿನ ರಹಸ್ಯ ಒಪ್ಪಂದಿಂದ ಅಶೋಕ್ ಗೆಹ್ಲೋಟ್ ತನಿಖೆಯನ್ನು ಸ್ಥಗಿತಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಸಚಿನ್ ಆರೋಪಿಸಿದ್ದಾರೆ.

ಕಳೆದ ಎರಡೂವರೆ ವರ್ಷಗಳಲ್ಲಿ ಗೆಹ್ಲೋಟ್‌ರಿಂದ ಹೆಚ್ಚಿನ ದಾಳಿಗಳನ್ನು ನಾನು ಸಹಿಸಿಕೊಂಡಿದ್ದೇನೆ ಎಂದು ಮಾಜಿ ಉಪಮುಖ್ಯಮಂತ್ರಿ ಸಚಿನ್ ಹೇಳಿದ್ದಾರೆ. ಇಂತಹ ನಿಂದನೆಗಳ ಹೊರತಾಗಿಯೂ, ನಾನು ಪಕ್ಷಕ್ಕೆ ಹಾನಿ ಮಾಡಬಾರದು ಎಂದು ನಾನು ಏನನ್ನೂ ಹೇಳಲಿಲ್ಲ. ನನ್ನನ್ನು ದೇಶದ್ರೋಹಿ ಎಂದರು. 2020ರಲ್ಲಿ ನಾವು ರಾಜಸ್ಥಾನದಲ್ಲಿ ನಾಯಕತ್ವ ಬದಲಾವಣೆಯನ್ನು ಬಯಸಿದ್ದೇವೆ. ನಾವು ಅಹ್ಮದ್ ಪಟೇಲ್ ಜತೆ ಮಾತನಾಡದ್ದು,ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗಿದೆ. ಗೆಹ್ಲೋಟ್ ಸೋನಿಯಾ ಗಾಂಧಿಯವರನ್ನೂ ಅವಮಾನಿಸಿದ್ದಾರೆ ಎಂದಿದ್ದಾರೆ ಪೈಲಟ್.

ಇದನ್ನೂ ಓದಿ: Cyclone Mocha: ಮೋಚಾ ಚಂಡಮಾರುತ: ಕೇರಳಕ್ಕೆ ಯೆಲ್ಲೋ ಅಲರ್ಟ್​, ಇನ್ಯಾವ ರಾಜ್ಯಗಳಲ್ಲಿ ಮಳೆಯಾಗಲಿದೆ ಇಲ್ಲಿದೆ ಮಾಹಿತಿ

ಭ್ರಷ್ಟಾಚಾರ ಮತ್ತು ಯುವಜನತೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಎತ್ತಿ ತೋರಿಸಲು ಅಜ್ಮೀರ್‌ನಿಂದ ಜೈಪುರದವರೆಗೆ “ಜನಸಂಘರ್ಷ್ ಯಾತ್ರೆ” ನಡೆಸುವುದಾಗಿ ಸಚಿನ್ ಪೈಲಟ್ ಘೋಷಿಸಿದ್ದಾರೆ. ಯಾತ್ರೆ ಯಾರ ವಿರುದ್ಧವೂ ಅಲ್ಲ ಭ್ರಷ್ಟಾಚಾರದ ವಿರುದ್ಧ ಎಂದು ಅವರು ಹೇಳಿದ್ದಾರೆ.

ರಾಜಸ್ಥಾನ ಚುನಾವಣೆಗೆ ತಿಂಗಳುಗಳು ಬಾಕಿ ಇರುವಾಗ ಸಚಿನ್ ಪೈಲಟ್ ಈ ಯಾತ್ರೆ ಕೈಗೊಳ್ಳುತ್ತಿರುವುದು ಕಾಂಗ್ರೆಸ್‌ಗೆ ಹೆಚ್ಚು ಮುಜುಗರವನ್ನುಂಟುಮಾಡಲಿದೆ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?