WITT Speaker Gallery Day 2: ವಾಟ್ ಇಂಡಿಯಾ ಥಿಂಕ್ಸ್ ಟುಡೇ’ ಕಾರ್ಯಕ್ರಮದಲ್ಲಿ ಅಶ್ವಿನಿ ವೈಷ್ಣವ್ ಮೆಗಾ ಸಂವಾದ

ವಾಟ್ ಇಂಡಿಯಾ ಥಿಂಕ್ಸ್ ಟುಡೇ' ಕಾರ್ಯಕ್ರಮದಲ್ಲಿ ಕೇಂದ್ರ ರೈಲ್ವೆ, ಸಂವಹನ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಪೋಯ್ಸ್ಡ್ ಫಾರ್ ದಿ ಬಿಗ್ ಲೀಪ್ ವಿಷಯದ ಬಗ್ಗೆ ಸಂವಾದ ನಡೆಸಲಿದ್ದಾರೆ. ಫೆ.25ರಂದು ದೆಹಲಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

WITT Speaker Gallery Day 2: ವಾಟ್ ಇಂಡಿಯಾ ಥಿಂಕ್ಸ್ ಟುಡೇ' ಕಾರ್ಯಕ್ರಮದಲ್ಲಿ ಅಶ್ವಿನಿ ವೈಷ್ಣವ್ ಮೆಗಾ ಸಂವಾದ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on: Feb 21, 2024 | 6:43 PM

ಕೇಂದ್ರ ರೈಲ್ವೆ, ಸಂವಹನ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಟಿವಿ9 ನೆಟ್‌ವರ್ಕ್‌ ನಡೆಸುತ್ತಿರುವ ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಫೆ. 25ರಂದು ದೆಹಲಿಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಅಶ್ವಿನಿ ವೈಷ್ಣವ್ ಅವರು ಪೋಯ್ಸ್ಡ್ ಫಾರ್ ದಿ ಬಿಗ್ ಲೀಪ್ ಎಂಬ ವಿಷಯದ ಬಗ್ಗೆ ಸಂವಾದ ನಡೆಸಲಿದ್ದಾರೆ. ಪ್ರಧಾನಿ ಮೋದಿ ಅವರು ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕೇಂದ್ರ ಸಚಿವರಾದ ಜೈಶಂಕರ್​​​​, ಸ್ಮೃತಿ ಇರಾನಿ, ಅನುರಾಗ್​​ ಠಾಗೂರ್​​​ ಹಾಗು ಅನೇಕ ಉದ್ಯಮಿಗಳು ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಭಾರತವು ‘ಮುಂದಿನ ಬಿಗ್ ಲೀಪ್’ಗೆ ಹೇಗೆ ಸಜ್ಜಾಗಿದೆ ಎಂಬುದ ಒಳನೋಟದ ಬಗ್ಗೆ ಅಶ್ವಿನ್​​​ ವೈಷ್ಣವ್​​ ಅವರು ಹಂಚಿಕೊಳ್ಳಲಿದ್ದಾರೆ. ಪ್ರಧಾನಿ ಮೋದಿ ಉಪಸ್ಥಿತಿಯಲ್ಲಿ ನಡೆಯಲಿರುವ ಈ ಮೂರು ದಿನದ ಕಾರ್ಯಕ್ರಮದಲ್ಲಿ ಅಶ್ವಿನ್​​​ ವೈಷ್ಣವ್ ಕೂಡ ಪ್ರಮುಖ ಪಾತ್ರವಹಿಸಲಿದ್ದಾರೆ. 2047 ರ ವೇಳೆಗೆ ಭಾರತವನ್ನು ಸೂಪರ್ ಪವರ್ ಮಾಡುವ ಪ್ರಧಾನಿ ಮೋದಿಯವರ ದೃಷ್ಟಿಯನ್ನು ಸಾಕಾರಗೊಳಿಸಲು ‘ವಿಕಸಿತ್​ ಭಾರತ್’ ಕಾರ್ಯಕ್ರಮದಲ್ಲಿ ಇವರು ಕೂಡ ಅಗ್ರಮಾನ್ಯರು.

ಈ ಹಿಂದಿನ ಟಿವಿ9 ನೆಟ್​ವರ್ಕ್​​ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅಶ್ವಿನ್​​​ ವೈಷ್ಣವ್ ಕೆಲವೊಂದು ಪ್ರಮುಖ ಮಾತಗಳನ್ನು ಹೇಳಿದ್ದಾರೆ. ಭಾರತ ಸರ್ಕಾರ ಅರೆವಾಹಕ ವಲಯಕ್ಕೆ ಸಮಗ್ರ ಪರಿಸರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಡಾಲರ್​​ ಡಾಲರ್​​ ಪೋತ್ಸಾಹಗಳನ್ನು ನೀಡುತ್ತಿದೆ ಎಂದು ಹೇಳಿದರು. ಭಾರತಕ್ಕೆ ಬೇರೆ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡಿದೆ. ಹಾಗೆ ಕೇಂದ್ರ ರೈಲ್ವೆ ಕ್ಷೇತ್ರಕ್ಕೂ ಹೆಚ್ಚು ಪ್ರಾಮುಖ್ಯತೆ ನೀಡಿ ಡಿಜಿಟಲ್​​​​ ಸ್ಪರ್ಶ ನೀಡಿದೆ ಎಂದು ಹೇಳಿದರು.

ಇದನ್ನೂ ಓದಿ : ಕ್ರೀಡಾ ಕ್ಷೇತ್ರದಲ್ಲಿ ಭವಿಷ್ಯದ ಯೋಜನೆ ಬಗ್ಗೆ ಸಂವಾದ ನಡೆಸಲಿರುವ ಅನುರಾಗ್ ಠಾಕೂರ್

ಅಶ್ವಿನ್​​​ ವೈಷ್ಣವ್ ಅವರು ಪ್ರಸ್ತುತ ಭಾರತ ಸರ್ಕಾರದಲ್ಲಿ ರೈಲ್ವೆ, ಸಂವಹನ, ಎಲೆಕ್ಟ್ರಾನಿಕ್ಸ್ ಮತ್ತು ಐಟಿಯ ಪ್ರಮುಖ ಖಾತೆಗಳ ಸಚಿವರಾಗಿದ್ದಾರೆ. ಇವರು 1994 ರ ಬ್ಯಾಚ್‌ನ ಒಡಿಶಾ ಕೇಡರ್‌ನ IAS ಅಧಿಕಾರಿ. ಅವರು ಒಡಿಶಾ ರಾಜ್ಯವನ್ನು ಪ್ರತಿನಿಧಿಸುವ ರಾಜ್ಯಸಭೆಯ ಸದಸ್ಯರಾಗಿದ್ದಾರೆ. ಆಡಳಿತದ ಗುಣಲಕ್ಷಣಗಳು ಉದ್ಯಮಶೀಲತೆ ಮತ್ತು ಸಾರ್ವಜನಿಕ ಸೇವೆಗಳಲ್ಲಿ ಅನುಭವ ಅವರಿಗೆ ಹೆಚ್ಚಿತ್ತು. ಭಾರತೀಯ ಆಡಳಿತ ಸೇವೆಗಳ (IAS) ಅಧಿಕಾರಿಯಾಗಿದ್ದ ಅವಧಿಯಲ್ಲಿ, ವೈಷ್ಣವ್ ಸಕ್ರಿಯವಾಗಿ ತಳಮಟ್ಟದ ಸೇವೆಗಳಲ್ಲಿ ಕೆಲಸಗಳನ್ನು ಮಾಡಿದ ಅನುಭವ ಅವರಿಗಿದೆ.

ಅಕ್ಟೋಬರ್ 1999 ರ ಒಡಿಶಾ ಸೂಪರ್ ಸೈಕ್ಲೋನ್ ಸಮಯದಲ್ಲಿ ಬಾಲಸೋರ್‌ನಲ್ಲಿರುವ ಅವರ ತಂಡವು ಗಮನಾರ್ಹವಾದ ಕೆಲಸವನ್ನು ಮಾಡಿತ್ತು. ತಂತ್ರಜ್ಞಾನ ಮತ್ತು ಸಮುದಾಯ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದರು. ಚಂಡಮಾರುತ ಒಬ್ಬ ಅಧಿಕಾರಿಯಾಗಿ ಅವರು ಮಾಡಿದ ಕೆಲಸ ಅದ್ಭುತವಾಗಿತ್ತು. ಈ ಕ್ಷಣಕ್ಕೂ ಒಡಿಶಾದ ಜನ ಅವರನ್ನು ನೆನಪಿಸಿಕೊಳ್ಳುತ್ತಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್