ದೆಹಲಿ ಡಿಸೆಂಬರ್ 18: ಜ್ಞಾನವಾಪಿ ಮಸೀದಿ (Gyanvapi survey case) ಆವರಣದ ವೈಜ್ಞಾನಿಕ ಸಮೀಕ್ಷೆಯ ವರದಿಯನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ಇಂದು (ಸೋಮವಾರ) ವಾರಣಾಸಿ ಜಿಲ್ಲಾ ನ್ಯಾಯಾಲಯಕ್ಕೆ (Varanasi district court) ಸಲ್ಲಿಸಿದೆ. 1,000 ಪುಟಗಳ ದಾಖಲೆಯನ್ನು ಮುಚ್ಚಿದ ಕವರ್‌ನಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಹಿಂದೂ ಅರ್ಜಿದಾರರ ಪರ ವಾದ ಮಂಡಿಸುತ್ತಿರುವ ವಕೀಲ ಮದನ್ ಮೋಹನ್ ಯಾದವ್ ಅವರು, “ಮುಚ್ಚಿದ ಕವರ್‌ನಲ್ಲಿ ವರದಿಯನ್ನು ಎಎಸ್‌ಐ ಅವರ ಸ್ಥಾಯಿ ವಕೀಲ ಅಮಿತ್ ಶ್ರೀವಾಸ್ತವ ಅವರು ನ್ಯಾಯಾಲಯದ ಮುಂದೆ ಇರಿಸಿದ್ದಾರೆ” ಎಂದು ಹೇಳಿದರು. ಎಎಸ್‌ಐನ ನಾಲ್ವರು ಹಿರಿಯ ಅಧಿಕಾರಿಗಳು ಕೂಡ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ವರದಿಯನ್ನು ಸಾರ್ವಜನಿಕಗೊಳಿಸದಂತೆ ಜ್ಞಾನವಾಪಿ ಮಸೀದಿಯ ವಕೀಲರು ನ್ಯಾಯಾಲಯವನ್ನು ಕೋರಿದರು, ಆದರೆ ಹಿಂದೂ ಕಡೆಯವರು ವರದಿಯನ್ನು ಸಾರ್ವಜನಿಕಗೊಳಿಸುವಂತೆ ನ್ಯಾಯಾಲಯವನ್ನು ಒತ್ತಾಯಿಸಿದರು.
#WATCH | Varanasi, UP: Advocate Vishnu Shankar Jain, representing the Hindu side in the Gyanvapi survey case, says, “The report cannot be filed in a sealed cover, the ASI has violated the Supreme Court order. We’ve filed our petition before the court that the copy of the ASI… pic.twitter.com/gOJQgbHKtG
— ANI (@ANI) December 18, 2023
“ಮುಚ್ಚಿದ ಕವರ್‌ನಲ್ಲಿ ವರದಿಯನ್ನು ಸಲ್ಲಿಸಲು ಸಾಧ್ಯವಿಲ್ಲ, ಎಎಸ್‌ಐ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಿದೆ. ನಾವು ನ್ಯಾಯಾಲಯದ ಮುಂದೆ ನಮ್ಮ ಅರ್ಜಿಯನ್ನು ಸಲ್ಲಿಸಿದ್ದೇವೆ. ಎಎಸ್‌ಐ ವರದಿಯ ಪ್ರತಿಯನ್ನು ಸಾರ್ವಜನಿಕ ಡೊಮೇನ್‌ನಲ್ಲಿ ಲಭ್ಯವಾಗುವಂತೆ ಮಾಡಬೇಕು ಮತ್ತು ಈ ವಿಷಯವನ್ನು ಡಿಸೆಂಬರ್ 21 ರಂದು ವಿಚಾರಣೆಯ ಸಮಯದಲ್ಲಿ ಪ್ರಸ್ತಾಪಿಸಲಾಗುವುದು ಎಂದು ಜ್ಞಾನವಾಪಿ ಸಮೀಕ್ಷೆ ಪ್ರಕರಣದಲ್ಲಿ ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಹೇಳಿದ್ದಾರೆ.
ಇದನ್ನೂ ಓದಿ: ಚಳಿಗಾಲದ ಅಧಿವೇಶನ: 30ಕ್ಕೂ ಹೆಚ್ಚು ಸಂಸದರನ್ನು ಅಮಾನತುಗೊಳಿಸಿದ ಲೋಕಸಭಾ ಸ್ಪೀಕರ್
ಡಿಸೆಂಬರ್ 21 ರಂದು ನ್ಯಾಯಾಲಯವು ವರದಿ ಬಗ್ಗೆ ವಿಚಾರಣೆ ನಡೆಸಲಿದೆ.
ವರದಿಯನ್ನು ಅಂತಿಮವಾಗಿ ಆರು ವಿಸ್ತರಣೆಗಳ ನಂತರ ಸಲ್ಲಿಸಲಾಯಿತು. ನವೆಂಬರ್ 2 ರಂದು, ಆಗಸ್ಟ್‌ನಲ್ಲಿ ಪ್ರಾರಂಭವಾದ ಸಮೀಕ್ಷೆಯನ್ನು “ಪೂರ್ಣಗೊಳಿಸಿದೆ” ಎಂದು ಅದು ಹೇಳಿದೆ. ಆದರೆ, ಸಮೀಕ್ಷೆ ವೇಳೆ ಬಳಸಿದ ಸಲಕರಣೆಗಳ ವಿವರಗಳನ್ನು ಸಲ್ಲಿಸುವುದು ಸೇರಿದಂತೆ ವರದಿಯನ್ನು ಸಂಪಾದಿಸಲು ಹೆಚ್ಚಿನ ಕಾಲಾವಕಾಶವನ್ನು ಎಎಸ್‌ಐ ಕೇಳಿತ್ತು.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 4:20 pm, Mon, 18 December 23