AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಞಾನವಾಪಿ ಮಸೀದಿಯ ಎಎಸ್‌ಐ ಸಮೀಕ್ಷೆ ವರದಿ ಸಾರ್ವಜನಿಕಗೊಳಿಸಲಾಗುವುದು: ವಾರಣಾಸಿ ನ್ಯಾಯಾಲಯ

ಎಎಸ್ಐ ಡಿಸೆಂಬರ್ 19 ರಂದು ವಾರಣಾಸಿ ನ್ಯಾಯಾಲಯದಲ್ಲಿ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ತಾನು ಕೈಗೊಂಡ ವೈಜ್ಞಾನಿಕ ಸಮೀಕ್ಷೆಯ ವರದಿಯನ್ನು ಸಲ್ಲಿಸಿತ್ತು. ವಾರಣಾಸಿ ನ್ಯಾಯಾಲಯದ ನಿರ್ದೇಶನದ ಮೇರೆಗೆ ಎಎಸ್ಐ ಈ  ಸಮೀಕ್ಷೆಯನ್ನು ಕೈಗೊಂಡಿತ್ತು, ಮಸೀದಿಯನ್ನು ಹಿಂದೂ ದೇವಾಲಯದ ಪೂರ್ವ ಅಸ್ತಿತ್ವದಲ್ಲಿರುವ ರಚನೆಯ ಮೇಲೆ ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸುವುದಕ್ಕಾಗಿತ್ತು ಈ ಸಮೀಕ್ಷೆ.

ಜ್ಞಾನವಾಪಿ ಮಸೀದಿಯ ಎಎಸ್‌ಐ ಸಮೀಕ್ಷೆ ವರದಿ ಸಾರ್ವಜನಿಕಗೊಳಿಸಲಾಗುವುದು: ವಾರಣಾಸಿ ನ್ಯಾಯಾಲಯ
ಜ್ಞಾನವಾಪಿ ಮಸೀದಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ| Edited By: |

Updated on:Feb 02, 2024 | 12:03 PM

Share

ದೆಹಲಿ ಜನವರಿ 24: ಜ್ಞಾನವಾಪಿ ಮಸೀದಿಯ (Gyanvapi Mosque) ಕುರಿತಾದ ಭಾರತೀಯ ಪುರಾತತ್ವ ಸಮೀಕ್ಷೆಯ (ASI) ವರದಿಯನ್ನು ಸಾರ್ವಜನಿಕಗೊಳಿಸಲಾಗುವುದು. ಅದನ್ನು ಹಿಂದೂ ಮತ್ತು ಮುಸ್ಲಿಂ ಎರಡೂ ಕಡೆಯವರಿಗೆ ಸಿಗುವಂತೆ ಮಾಡಲಾಗುವುದು ಎಂದು ವಾರಣಾಸಿ ನ್ಯಾಯಾಲಯವು (Varanasi court) ಇಂದು (ಜನವರಿ 24 ರಂದು) ತೀರ್ಪು ನೀಡಿದೆ.

ಎಎಸ್ಐ ಡಿಸೆಂಬರ್ 19 ರಂದು ವಾರಣಾಸಿ ನ್ಯಾಯಾಲಯದಲ್ಲಿ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ತಾನು ಕೈಗೊಂಡ ವೈಜ್ಞಾನಿಕ ಸಮೀಕ್ಷೆಯ ವರದಿಯನ್ನು ಸಲ್ಲಿಸಿತ್ತು. ವಾರಣಾಸಿ ನ್ಯಾಯಾಲಯದ ನಿರ್ದೇಶನದ ಮೇರೆಗೆ ಎಎಸ್ಐ ಈ  ಸಮೀಕ್ಷೆಯನ್ನು ಕೈಗೊಂಡಿತ್ತು, ಮಸೀದಿಯನ್ನು ಹಿಂದೂ ದೇವಾಲಯದ ಪೂರ್ವ ಅಸ್ತಿತ್ವದಲ್ಲಿರುವ ರಚನೆಯ ಮೇಲೆ ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸುವುದಕ್ಕಾಗಿತ್ತು ಈ ಸಮೀಕ್ಷೆ.

ಸಂಸ್ಥೆಯು ತನ್ನ ಮನವಿಯಲ್ಲಿ, 1991 ರ ದಾವೆಯಲ್ಲಿ ಸಮೀಕ್ಷೆಯ ವರದಿಯನ್ನು ಪ್ರಸ್ತುತಪಡಿಸಬೇಕು ಎಂದು ಒತ್ತಿಹೇಳುತ್ತಾ, ಹೈಕೋರ್ಟ್‌ನ ಆದೇಶವನ್ನು ಎತ್ತಿ ತೋರಿಸಿದೆ.

ವರದಿಯ ವಿಷಯವನ್ನು ಸಾರ್ವಜನಿಕರಿಗೆ ಬಹಿರಂಗಪಡಿಸುವ ಸಂಭಾವ್ಯ ಪರಿಣಾಮಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಎಎಸ್ಐ, ವದಂತಿಗಳ ಹರಡುವಿಕೆ ಮತ್ತು ಇದು ನಡೆಯುತ್ತಿರುವ ಕೆಲಸದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಹೇಳಿತ್ತು.

ಇಂದು, ನ್ಯಾಯಾಲಯವು ಎರಡೂ ಕಡೆಯವರನ್ನು ಆಲಿಸಿದೆ. ಎಎಸ್‌ಐ ವರದಿಯ ಹಾರ್ಡ್ ಕಾಪಿಯನ್ನು ಎರಡೂ ಕಡೆಯವರಿಗೆ ಒದಗಿಸಲಾಗುವುದು ಎಂದು ಒಮ್ಮತಕ್ಕೆ ಬಂದಿತು. ಇಮೇಲ್ ಮೂಲಕ ವರದಿ ನೀಡಲು ಎಎಸ್‌ಐ ಆಕ್ಷೇಪ ವ್ಯಕ್ತಪಡಿಸಿದೆ. ಹಾಗಾಗಿ ವರದಿಯ ಹಾರ್ಡ್ ಕಾಪಿ ಪಡೆಯಲು ಎರಡೂ ಕಡೆಯವರು ಒಪ್ಪಿಕೊಂಡರು ಎಂದು ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ.

ಇದನ್ನೂ ಓದಿ: ಅಯೋಧ್ಯೆ ರಾಮ ಮಂದಿರದಲ್ಲಿ ಪೇಜಾವರ ಶ್ರೀಗಳ ಮುಂದಾಳತ್ವ: 48 ದಿನಗಳ ಕಾಲ ನೂರಾರು ಮಂದಿ ಪ್ರತ್ಯೇಕ ವೈದಿಕರಿಂದ ಯಜ್ಞಯಾಗ

ಜ್ಞಾನವಾಪಿ ಆವರಣದ ಸಮೀಕ್ಷೆಯ ಬಗ್ಗೆ

17 ನೇ ಶತಮಾನದ ಮಸೀದಿಯನ್ನು ಹಿಂದೂ ದೇವಾಲಯದ ಪೂರ್ವ ಅಸ್ತಿತ್ವದಲ್ಲಿರುವ ರಚನೆಯ ಮೇಲೆ ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸಲು ASI ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಆವರಣದ ವೈಜ್ಞಾನಿಕ ಸಮೀಕ್ಷೆಯನ್ನು ನಡೆಸಿತು. ವುಝೂಖಾನಾ  ಪ್ರದೇಶವನ್ನು ಹೊರತುಪಡಿಸಿ ಮಸೀದಿಯ ಸಂಪೂರ್ಣ ಆವರಣದಲ್ಲಿ ಸಮೀಕ್ಷೆ ನಡೆದಿದೆ.

ಸ್ಥಳದಲ್ಲಿ ಯಾವುದೇ ಉತ್ಖನನವನ್ನು ಮಾಡಲಾಗುವುದಿಲ್ಲ ಮತ್ತು ರಚನೆಗೆ ಯಾವುದೇ ಹಾನಿ ಉಂಟಾಗುವುದಿಲ್ಲ ಎಂದು ಎಎಸ್ಐ ಪರವಾಗಿ ಮಾಡಿದ ವಾಗ್ದಾನವನ್ನು ದಾಖಲಿಸಿಕೊಂಡು ಆದೇಶಗಳನ್ನು ನೀಡಲಾಯಿತು.

ಅಲಹಾಬಾದ್ ಹೈಕೋರ್ಟ್ ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದ ನಂತರ ಮತ್ತು ಈ ಕ್ರಮವು “ನ್ಯಾಯದ ಹಿತಾಸಕ್ತಿಯಲ್ಲಿ ಅಗತ್ಯ” ಎಂದು ತೀರ್ಪು ನೀಡಿದ ನಂತರ ಸಮೀಕ್ಷೆಯು ಪ್ರಾರಂಭವಾಯಿತು. ಅಲಹಾಬಾದ್ ಹೈಕೋರ್ಟ್ ಆದೇಶದ ನಂತರ, ಜ್ಞಾನವಾಪಿ ಸಮಿತಿಯು ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತು. ಎಎಸ್‌ಐ ಸಮೀಕ್ಷೆ ಕುರಿತ ಹೈಕೋರ್ಟ್‌ನ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್‌ ಕಳೆದ ವರ್ಷ ಆಗಸ್ಟ್‌ನಲ್ಲಿ ನಿರಾಕರಿಸಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:00 pm, Wed, 24 January 24

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ