AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ ಚಲಾಯಿಸಿದ್ದೇನೆ, ರೇಷನ್​ ಕಾರ್ಡ್​ ಇದೆ ಭಾರತದಲ್ಲೇ ಇರ್ತೀನಿ ಎಂದ ಪಾಕ್ ಪ್ರಜೆ

ಕಳೆದ 17 ವರ್ಷಗಳಿಂದ ಇಲ್ಲೇ ಇದ್ದೇನೆ, ಇಲ್ಲೇ ಮತ ಚಲಾಯಿಸಿದ್ದೇನೆ, ಪಡಿತರ ಚೀಟಿಯೂ ಇದೆ, ನಾನಂತೂ ಭಾರತವನ್ನು ಬಿಟ್ಟು ಹೋಗುವುದಿಲ್ಲ ಎಂದು ಪಾಕ್ ಪ್ರಜೆ ಒಸಾಮಾ ಹಠ ಹಿಡಿದಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಅನಂತ್​ನಾಗ್ ಜಿಲ್ಲೆಯಲ್ಲಿರುವ ಪಹಲ್ಗಾಮ್(Pahalgam)​ನಲ್ಲಿ ಉಗ್ರರು ದಾಳಿ ನಡೆಸಿ 26 ಮಂದಿಯನ್ನು ಕೊಂದ ಬಳಿಕ ಪಾಕಿಸ್ತಾನ ಹಾಗೂ ಭಾರತದ ಸಂಬಂಧ ಮತ್ತಷ್ಟು ಹದಗೆಟ್ಟಿದೆ. ಈ ಮೊದಲೇ ಕಾಶ್ಮೀರಕ್ಕಾಗಿ ಹೋರಾಡುತ್ತಿದ್ದ ಎರಡೂ ದೇಶಗಳು ಮತ್ತೀಗ ಹೊಸ ಕಾದಾಟ ಶುರು ಮಾಡಿವೆ.

ಮತ ಚಲಾಯಿಸಿದ್ದೇನೆ, ರೇಷನ್​ ಕಾರ್ಡ್​ ಇದೆ ಭಾರತದಲ್ಲೇ ಇರ್ತೀನಿ ಎಂದ ಪಾಕ್ ಪ್ರಜೆ
ಒಸಾಮಾ
ನಯನಾ ರಾಜೀವ್
|

Updated on: Apr 30, 2025 | 3:03 PM

Share

ನವದೆಹಲಿ, ಏಪ್ರಿಲ್ 30:  ‘‘ಕಳೆದ 17  ವರ್ಷಗಳಿಂದ ಇಲ್ಲೇ ಇದ್ದೇನೆ,  ಇಲ್ಲೇ ಮತ ಚಲಾಯಿಸಿದ್ದೇನೆ, ಪಡಿತರ ಚೀಟಿ ಇದೆ, ಇಲ್ಲೇ 10-12ನೇ ತರಗತಿಯವರೆಗೆ ಓದಿದ್ದೇನೆ, ಇಲ್ಲಿಯೇ ಇರುತ್ತೇನೆ’’ ಎನ್ನುವ ಪಾಕಿಸ್ತಾನ(Pakistan) ಪ್ರಜೆಯ ಹೇಳಿಕೆಯು ಎಲ್ಲರಲ್ಲಿ ಅಚ್ಚರಿಯುಂಟು ಮಾಡಿದೆ. ಆದರೆ ಪಾಕಿಸ್ತಾನದ ಪ್ರಜೆಯಾಗಿ ಭಾರತದ ಪ್ರಜೆಗಳಿಗೆ ಸಿಗುವಂಥಾ ಸವಲತ್ತುಗಳು ಹೇಗೆ ಸಿಕ್ಕಿತು ಎನ್ನುವ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. ನಾನು ಅಲ್ಲಿಗೆ ಹೋಗಿ ಏನು ಮಾಡಲಿ ಎಂದು ಒಸಾಮಾ ಎಂಬಾತ ಪ್ರಶ್ನೆ ಮಾಡಿದ್ದಾನೆ.

ಜಮ್ಮು ಮತ್ತು ಕಾಶ್ಮೀರದ ಅನಂತ್​ನಾಗ್ ಜಿಲ್ಲೆಯಲ್ಲಿರುವ ಪಹಲ್ಗಾಮ್(Pahalgam)​ನಲ್ಲಿ ಉಗ್ರರು ದಾಳಿ ನಡೆಸಿ 26 ಮಂದಿಯನ್ನು ಕೊಂದ ಬಳಿಕ ಪಾಕಿಸ್ತಾನ ಹಾಗೂ ಭಾರತದ ಸಂಬಂಧ ಮತ್ತಷ್ಟು ಹದಗೆಟ್ಟಿದೆ. ಈ ಮೊದಲೇ ಕಾಶ್ಮೀರಕ್ಕಾಗಿ ಹೋರಾಡುತ್ತಿದ್ದ ಎರಡೂ ದೇಶಗಳು ಮತ್ತೀಗ ಹೊಸ ಕಾದಾಟ ಶುರು ಮಾಡಿವೆ.

ಇದನ್ನೂ ಓದಿ
Image
ಬನ್ನೇರುಘಟ್ಟ ಜೂ, ಸಫಾರಿಗೆ ಆನ್​ಲೈನ್ ಮೂಲಕ ಟಿಕೆಟ್ ಬುಕ್ ಮಾಡುವಾಗ ಎಚ್ಚರ
Image
‘ಭಾರತವನ್ನು ದ್ವೇಷಿಸುತ್ತೇನೆ’: ವೈದ್ಯೆ ಅಫೀಫ ಫಾತಿಮಾ ದೇಶ ವಿರೋಧಿ ಪೋಸ್ಟ್
Image
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ವಿಶೇಷ ಬಸ್ ಸೌಲಭ್ಯ
Image
ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಆನ್​ಲೈನ್ ವಂಚನೆ: ಎಚ್ಚರದಿಂದಿರಿ

ಭಾರತವು ಪಾಕಿಸ್ತಾನಿಗಳಿಗೆ ಹೊಸ ವೀಸಾವನ್ನು ಕೊಡುವುದಿಲ್ಲ, ಮೊದಲು ವೀಸಾ ಪಡೆದಿರುವವರು ಕೂಡ ದೇಶವನ್ನು ತೊರೆಯಬೇಕು ಎನ್ನುವ ಹೇಳಿಕೆಯನ್ನು ಕೇಂದ್ರ ಸರ್ಕಾರ ನೀಡಿದ ತಕ್ಷಣ ಭಾರತದಲ್ಲಿ ಆರಾಮವಾಗಿದ್ದ ಪಾಕ್ ಪ್ರಜೆಗಳು ಮತ್ತೆ ತಮ್ಮ ದೇಶಕ್ಕೆ ಹೋಗುವುದಿಲ್ಲ ಎಂದು ಹಠ ಹಿಡಿದಿದ್ದಾರೆ.

ಒಸಾಮಾ ಎನ್ನುವ ಪಾಕ್ ಪ್ರಜೆ ಮಾತನಾಡಿ, ಪಾಕಿಸ್ತಾನಿ ಪ್ರಜೆಗಳನ್ನು ಗಡೀಪಾರು ಮಾಡುವ ನಿರ್ಧಾರವನ್ನು ಭಾರತ ಸರ್ಕಾರ ಮರುಪರಿಶೀಲಿಸಬೇಕೆಂದು ಮನೆ ಮಾಡಿದ್ದಾರೆ.

ಮತ್ತಷ್ಟು ಓದಿ: 6 ತಿಂಗಳಿಂದ ಮನೆಯಲ್ಲಿ ಸಿಲಿಂಡರ್ ಇಲ್ಲ: ಪಾಕ್ ಪತ್ರಕರ್ತ ಅಹ್ಮದ್

ಪಾಕಿಸ್ತಾನಿ ಪ್ರಜೆಗಳು ಭಾರತವನ್ನು ತೊರೆದು ಪಾಕಿಸ್ತಾನಕ್ಕೆ ಮರಳಲು ಭಾರತ ಸರ್ಕಾರ ಕಟ್ಟುನಿಟ್ಟಿನ ಗಡುವು ವಿಧಿಸಿದ ನಂತರ ಹಲವಾರು ಜನರು ಅಟ್ಟಾರಿ ಗಡಿ ಚೆಕ್‌ಪೋಸ್ಟ್‌ಗೆ ಆಗಮಿಸುತ್ತಿರುವುದು ಕಂಡುಬಂದಿದೆ. ಪಾಕಿಸ್ತಾನಿ ಪ್ರಜೆಗಳನ್ನು ಭಾರತದಲ್ಲಿ ನಿಷೇಧಿಸುವುದರ ಜೊತೆಗೆ, ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಭಾರತ ಸರ್ಕಾರ ಪಾಕಿಸ್ತಾನದೊಂದಿಗಿನ ಸಿಂಧೂ ನದಿ ನೀರು ಒಪ್ಪಂದವನ್ನು ಸಹ ರದ್ದುಗೊಳಿಸಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ