Assam Accident: ಅಸ್ಸಾಂನಲ್ಲಿ ಭೀಕರ ರಸ್ತೆ ಅಪಘಾತ, 7 ವಿದ್ಯಾರ್ಥಿಗಳ ದುರ್ಮರಣ

ಅಸ್ಸಾಂನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.

Assam Accident: ಅಸ್ಸಾಂನಲ್ಲಿ ಭೀಕರ ರಸ್ತೆ ಅಪಘಾತ, 7 ವಿದ್ಯಾರ್ಥಿಗಳ ದುರ್ಮರಣ
ಅಪಘಾತ
Image Credit source: NDTV

Updated on: May 29, 2023 | 12:08 PM

ಅಸ್ಸಾಂನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಇನ್ನೂ ಕೆಲವರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಗುವಾಹಟಿಯ ಜಂಟಿ ಪೊಲೀಸ್ ಕಮಿಷನರ್, ತುಬೆ ಪ್ರತೀಕ್ ವಿಜಯ್ ಕುಮಾರ್ ಅವರು ದೂರವಾಣಿ ಮೂಲಕ ಎಎನ್‌ಐಗೆ ತಿಳಿಸಿದರು, ಅಪಘಾತದಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ. ಅರಿಂದಮ್, ನಿಯೋರ್ ದೇಕಾ, ಕೌಶಿಕ್ ಮೋಹನ್, ಉಪಂಗ್ಶು ಶರ್ಮಾ, ರಾಜ್ ಕಿರಣ್ ಭುಯಾನ್, ಎಮನ್ ಹಾಗೂ ಕೌಶಿಕ್ ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಗಳಾಗಿದ್ದಾರೆ.

ಘಟನೆ ಕುರಿತು ಮಾಹಿತಿ ನೀಡಿದ ಜಂಟಿ ಪೊಲೀಸ್ ಕಮಿಷನರ್ ತುಬೆ ಪ್ರತೀಕ್ ವಿಜಯ್ ಕುಮಾರ್, ಭಾನುವಾರ ತಡರಾತ್ರಿ ಜಲುಕ್ಬರಿ ಪ್ರದೇಶದಲ್ಲಿ ನಡೆದ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರು ವಿದ್ಯಾರ್ಥಿಗಳು ಎಂಬುದು ತಿಳಿದುಬಂದಿದೆ.

ಮತ್ತಷ್ಟು ಓದಿ: Koppal News: ಲಾರಿಗೆ ಕಾರು ಡಿಕ್ಕಿ: ಸ್ಥಳದಲ್ಲಿಯೇ 6 ಜನ ದುರ್ಮರಣ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

ಭಾನುವಾರ ತಡರಾತ್ರಿ ಜಲುಕ್ಬರಿ ಪ್ರದೇಶದಲ್ಲಿ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಸ್ಕಾರ್ಪಿಯೋ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದು, ನಂತರ ಜಲುಕ್‌ಬರಿ ಫ್ಲೈಓವರ್ ರಸ್ತೆಯಲ್ಲಿ ನಿಂತಿದ್ದ ಪಿಕಪ್ ವ್ಯಾನ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಮಾಹಿತಿ ನೀಡಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:01 pm, Mon, 29 May 23