ಅಸ್ಸಾಂನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಬಸ್​, 14 ಮಂದಿ ಸಾವು, 27ಜನರಿಗೆ ಗಂಭೀರ ಗಾಯ

|

Updated on: Jan 03, 2024 | 9:23 AM

ಟ್ರಕ್​ಗೆ ಬಸ್​ ಡಿಕ್ಕಿ ಹಡೆದ ಪರಿಣಾಮ 14 ಮಂದಿ ಸಾವನ್ನಪ್ಪಿದ್ದು, 27ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ಅಸ್ಸಾಂನ ದೇರ್ಗಾಂವ್​ನಲ್ಲಿ ನಡೆದಿದೆ. ಇಂದು ಬೆಳಗಿನ ಜಾವ ಸುಮಾರು 5 ಗಂಟೆ ವೇಳೆ 45 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್ ಟ್ರಕ್​ಗೆ ಡಿಕ್ಕಿ ಹೊಡೆದಿತ್ತು, ಇದರಿಂದ ಕನಿಷ್ಠ 14 ಮಂದಿ ಸ್ಥಳದಲ್ಲೇ ಉಸಿರುಚೆಲ್ಲಿದ್ದಾರೆ.

ಅಸ್ಸಾಂನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಬಸ್​, 14 ಮಂದಿ ಸಾವು, 27ಜನರಿಗೆ ಗಂಭೀರ ಗಾಯ
ಅಪಘಾತ
Image Credit source: India Today
Follow us on

ಟ್ರಕ್​ಗೆ ಬಸ್​ ಡಿಕ್ಕಿ ಹಡೆದ ಪರಿಣಾಮ 14 ಮಂದಿ ಸಾವನ್ನಪ್ಪಿದ್ದು, 27ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ಅಸ್ಸಾಂನ ದೇರ್ಗಾಂವ್​ನಲ್ಲಿ ನಡೆದಿದೆ. ಇಂದು ಬೆಳಗಿನ ಜಾವ ಸುಮಾರು 5 ಗಂಟೆ ವೇಳೆ 45 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್ ಟ್ರಕ್​ಗೆ ಡಿಕ್ಕಿ ಹೊಡೆದಿತ್ತು, ಇದರಿಂದ ಕನಿಷ್ಠ 14 ಮಂದಿ ಸ್ಥಳದಲ್ಲೇ ಉಸಿರುಚೆಲ್ಲಿದ್ದಾರೆ.

ತಿನ್ಸುಕಿಯಾದ ತಿಲಿಂಗ ಮಂದಿರಕ್ಕೆ 45 ಸದಸ್ಯರನ್ನು ಒಳಗೊಂಡ ಬಸ್​ ತೆರಳುತ್ತಿತ್ತು. ಪಿಕ್​ನಿಕ್​ಗೆಂದು ಜನರು ಬೆಳಗಿನ ಜಾವ 3 ಗಂಟೆಗೆ ಪ್ರಯಾಣವನ್ನು ಆರಂಭಿಸಿದ್ದರು.

ಮಾರ್ಗರಿಟಾದಿಂದ ಬರುತ್ತಿದ್ದ ಕಲ್ಲಿದ್ದಲು ತುಂಬಿದ ಟ್ರಕ್ ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಗೊಂಡ ಪ್ರಯಾಣಿಕರನ್ನು ರಕ್ಷಿಸಿ ಜೋರ್ಹತ್ ವೈದ್ಯಕೀಯ ಕಾಲೇಜಿಗೆ ದಾಖಲಿಸಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರು: ಕಳೆದ 10 ವರ್ಷಗಳಲ್ಲೇ 2023ರಲ್ಲಿ ಅತಿಹೆಚ್ಚು ಮಾರಣಾಂತಿಕ ಅಪಘಾತ, ವರದಿ

ಗಾಯಗೊಂಡಿರುವ ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸ್ಥಳದಲ್ಲೇ ಸಾವನ್ನಪ್ಪಿದ 14 ಪ್ರಯಾಣಿಕರ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ