Assam Assembly Elections 2021: 70 ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; 11 ಕಡೆ ಹೊಸಬರಿಗೆ ಅವಕಾಶ

| Updated By: ganapathi bhat

Updated on: Apr 06, 2022 | 7:25 PM

ಬಿಜೆಪಿ ಒಟ್ಟು 70 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿದ್ದು, 26 ಕ್ಷೇತ್ರಗಳಿಂದ ಅಸೊಮ್ ಗಾನಾ ಪರಿಷದ್ ಮತ್ತು 8 ಕ್ಷೇತ್ರಗಳಿಂದ ಯುನೈಟೆಡ್ ಪೀಪಲ್ಸ್ ಪಾರ್ಟಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ.

Assam Assembly Elections 2021: 70 ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; 11 ಕಡೆ ಹೊಸಬರಿಗೆ ಅವಕಾಶ
ಬಿಜೆಪಿ ಪ್ರಧಾನ ಕಾರ್ಯದರ್ಶೀ ಅರುಣ್ ಸಿಂಗ್
Follow us on

ಗುವಾಹಟಿ: ಅಸ್ಸಾಂ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಇಂದು (ಮಾರ್ಚ್ 5) ಘೋಷಣೆ ಮಾಡಿದೆ. ಜತೆಗೆ, ಅಸ್ಸಾಂ ಗಣ ಪರಿಷತ್ ಮತ್ತು ಯುನೈಟೆಡ್ ಪೀಪಲ್ಸ್ ಪಾರ್ಟಿಯೊಂದಿಗೆ ಮೈತ್ರಿ ಮಾಡಿಕೊಂಡಿರುವುದಾಗಿ ಬಿಜೆಪಿ ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೇಳಿಕೆ ನೀಡಿದ್ದಾರೆ.

ಒಟ್ಟು 70 ಕ್ಷೇತ್ರಗಳ ಅಭ್ಯರ್ಥಿ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. 26 ಕ್ಷೇತ್ರಗಳಿಂದ ಅಸ್ಸಾಂ ಗಣ ಪರಿಷತ್ ಮತ್ತು 8 ಕ್ಷೇತ್ರಗಳಿಂದ ಯುನೈಟೆಡ್ ಪೀಪಲ್ಸ್ ಪಾರ್ಟಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಹಾಲಿ ಮುಖ್ಯಮಂತ್ರಿ ಸರ್ವಾನಂದ ಸೋನೋವಾಲ ಮಜುಲಿ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ. ಬಿಜೆಪಿ ನಾಯಕ ಹಾಗೂ ಸಚಿವ ಹಿಮಂತ್ ಬಿಶ್ವ ಶರ್ಮಾ ಜಲುಕ್ಬರಿ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.

ಬಿಜೆಪಿ ಬಿಡುಗಡೆ ಮಾಡಿರುವ ಮೊದಲ ಪಟ್ಟಿಯಲ್ಲಿ, 11 ಕ್ಷೇತ್ರಗಳಲ್ಲಿ ಪ್ರಸ್ತುತ ಶಾಸಕರಾಗಿರುವ ಅಭ್ಯರ್ಥಿಗಳ ಬದಲು ಹೊಸ ಮುಖಗಳನ್ನು ಪರಿಚಯಿಸಿದೆ. ಈ ಕುರಿತು ವಿವರಗಳನ್ನು ಅರುಣ್ ಸಿಂಗ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅಸ್ಸಾಂ ಗಣ ಪರಿಷತ್ ಮತ್ತು ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬರಲ್ ನಾಯಕರು ಹಾಜರಿದ್ದರು.

ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಹಾಗೂ ಮತ ಎಣಿಕೆ ದಿನಾಂಕಗಳು ಪ್ರಕಟವಾಗಿದೆ. ಎಲ್ಲ ರಾಜ್ಯಗಳಲ್ಲಿಯೂ ಮೇ 2 ರಂದು ಮತ ಎಣಿಕೆ ನಡೆಯಲಿದೆ. ಪಶ್ಚಿಮ ಬಂಗಾಳದಲ್ಲಿ ಮಾರ್ಚ್ 27, ಏಪ್ರಿಲ್ 1, ಏಪ್ರಿಲ್ 6, ಏಪ್ರಿಲ್ 10, ಏಪ್ರಿಲ್ 17, ಏಪ್ರಿಲ್ 22, ಏಪ್ರಿಲ್ 26 ಹಾಗೂ ಏಪ್ರಿಲ್ 29ರಂದು ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮತ ಎಣಿಕೆಯು ಮೇ 2ರಂದು ನಡೆಯಲಿದೆ. ಕೇರಳದಲ್ಲಿ ಏಪ್ರಿಲ್ 6ರಂದು ಚುನಾವಣೆ ಮತ್ತು ಮೇ 2ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಏಪ್ರಿಲ್ 6ರಂದು ಚುನಾವಣೆ ಮತ್ತು ಮೇ 2ರಂದು ಮತ ಎಣಿಕೆ ನಡೆಯಲಿದೆ.

ಅಸ್ಸಾಂನಲ್ಲಿ 27 ಮಾರ್ಚ್, ಏಪ್ರಿಲ್ 1 ಮತ್ತು ಏಪ್ರಿಲ್ 6ರಂದು, ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ. ಮೇ 2ರಂದು ಮತ ಎಣಿಕೆ ನಡೆಯಲಿದೆ. ಅಸ್ಸಾಂನಲ್ಲಿ ಒಟ್ಟು 3 ಹಂತಗಳಲ್ಲಿ ಮತದಾನ ನಡೆಯಲಿದೆ. ಕೇರಳದಲ್ಲಿ 14 ಜಿಲ್ಲೆ, 148 ಕ್ಷೇತ್ರಗಳಲ್ಲಿ ಒಂದೇ ಬಾರಿ ಚುನಾವಣೆ ನಡೆಯಲಿದೆ. ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಕೂಡ ಒಂದೇ ಬಾರಿ ಚುನಾವಣೆ ನಡೆಯಲಿದೆ. ಪಶ್ಚಿಮ ಬಂಗಾಳ ರಾಜ್ಯದಲ್ಲಿ 8 ಹಂತಗಳಲ್ಲಿ ಚುನಾವಣೆ ನಡೆಯಲಿದೆ.

ಇದನ್ನೂ ಓದಿ: Assam Elections 2021: ಅಸ್ಸಾಂನಲ್ಲೂ ಬಿಜೆಪಿ-ಕಾಂಗ್ರೆಸ್ ನಡುವೆ ಸಮರ ಜೋರು

Photo Gallery: ಅಸ್ಸಾಂ ಚಹಾ ತೋಟದಲ್ಲಿ ಪ್ರಿಯಾಂಕಾ ಗಾಂಧಿ; ಕಾರ್ಮಿಕರ ಕಷ್ಟ-ಸುಖ ಅರಿತ ಕಾಂಗ್ರೆಸ್ ನಾಯಕಿ

Published On - 9:52 pm, Fri, 5 March 21