Assam Election 2021 Opinion Poll: ಬಿಜೆಪಿ ನೇತೃತ್ವದ ಎನ್​ಡಿಎಗೆ 73 ಸೀಟ್, ಕಾಂಗ್ರೆಸ್​ಗೆ ಮತ್ತೆ ವಿರೋಧ ಪಕ್ಷದ ಸ್ಥಾನ

ಕುತೂಹಲ ಕೆರಳಿಸಿರುವ ಅಸ್ಸಾಂ ಚುನಾವಣೆಯ ಬಗ್ಗೆ ಟಿವಿ9 ನೆಟ್​ವರ್ಕ್ ಚುನಾವಣಾಪೂರ್ವ ಸಮೀಕ್ಷೆ ನಡೆಸಿದೆ. ಅಸ್ಸಾಂನಲ್ಲಿ ಗೆಲುವಿನ ಹಾರ ಯಾರ ಕೊರಳಿಗೆ? ಸೋಲು ಯಾರಿಗೆ? ಎಂಬ ಪ್ರಶ್ನೆಗೆ ಸಮೀಕ್ಷೆ ಸೂಚಿಸುವ ಉತ್ತರವೇನು ಎಂದು ಇಲ್ಲಿ ತಿಳಿದುಕೊಳ್ಳಿ. #TV9opinionpoll

Assam Election 2021 Opinion Poll: ಬಿಜೆಪಿ ನೇತೃತ್ವದ ಎನ್​ಡಿಎಗೆ 73 ಸೀಟ್, ಕಾಂಗ್ರೆಸ್​ಗೆ ಮತ್ತೆ ವಿರೋಧ ಪಕ್ಷದ ಸ್ಥಾನ
ಬಿಜೆಪಿ ಹಾಗೂ ಕಾಂಗ್ರೆಸ್ ಧ್ವಜ
Follow us
TV9 Web
| Updated By: ganapathi bhat

Updated on:Apr 05, 2022 | 1:14 PM

ಗುವಹಾಟಿ: ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ಶೀಘ್ರದಲ್ಲೇ ವಿಧಾನಸಭಾ ಚುನಾವಣೆ ಆರಂಭವಾಗಲಿದೆ. ಉತ್ತರದ ರಾಜ್ಯಗಳಾದ ಪಶ್ಚಿಮ ಬಂಗಾಳದಲ್ಲಿ 8 ಹಾಗೂ ಅಸ್ಸಾಂನಲ್ಲಿ 3 ಹಂತಗಳಲ್ಲಿ ಮತದಾನ ನಡೆಯಲಿದೆ. ಕುತೂಹಲ ಕೆರಳಿಸಿರುವ ಅಸ್ಸಾಂ ಚುನಾವಣೆಯ ಬಗ್ಗೆ ಟಿವಿ9 ನೆಟ್​ವರ್ಕ್ ಚುನಾವಣಾಪೂರ್ವ ಸಮೀಕ್ಷೆ ನಡೆಸಿದೆ. ಅಸ್ಸಾಂನಲ್ಲಿ ಗೆಲುವಿನ ಹಾರ ಯಾರ ಕೊರಳಿಗೆ? ಸೋಲು ಯಾರಿಗೆ? ಎಂಬ ಪ್ರಶ್ನೆಗೆ ಸಮೀಕ್ಷೆ ಸೂಚಿಸುವ ಉತ್ತರವೇನು ಎಂದು ಇಲ್ಲಿ ತಿಳಿದುಕೊಳ್ಳಿ.

ಚುನಾವಣಾ ಪೂರ್ವ ಸಮೀಕ್ಷೆಯ ಪ್ರಕಾರ 126 ಸದಸ್ಯ ಬಲದ ಅಸ್ಸಾಂನಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಎನ್​ಡಿಎ 73 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಈಗ ವಿರೋಧ ಪಕ್ಷದ ಸ್ಥಾನದಲ್ಲಿರುವ ಯುಪಿಎ ಮೈತ್ರಿಕೂಟ 50 ಸ್ಥಾನಗಳನ್ನು ಪಡೆಯಲಿದೆ. ಪಕ್ಷೇತರರು 3 ಸ್ಥಾನಗಳಲ್ಲಿ ವಿಜಯ ಸಾಧಿಸಲಿದ್ದಾರೆ.

ಅದರಂತೆ, ಒಟ್ಟು 126 ಶಾಸಕರ ಬಲದ ಅಸ್ಸಾಂ ವಿಧಾನಸಭೆಯಲ್ಲಿ ಎನ್​ಡಿಎ 73, ಯುಪಿಎ 50 ಹಾಗೂ ಇತರೆ 3 ಸ್ಥಾನ ಗೆಲುವು ಎಂಬ ಲೆಕ್ಕಾಚಾರ ಲಭ್ಯವಾಗಿದೆ. ಸಮೀಕ್ಷೆ ಸೂಚಿಸುವಂತೆ ಮತ್ತೆ ಬಿಜೆಪಿ ನೇತೃತ್ವದ ಎನ್​ಡಿಎ ಸರ್ಕಾರ ಅಸ್ಸಾಂನಲ್ಲಿ ಅಧಿಕಾರಕ್ಕೇರಲಿದೆ. ಕಾಂಗ್ರೆಸ್ ನೇತೃತ್ವದ ಯುಪಿಎ ವಿರೋಧ ಪಕ್ಷವಾಗಿ ಉಳಿದುಕೊಳ್ಳಲಿದೆ.

ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಹಾಗೂ ಮತ ಎಣಿಕೆ ದಿನಾಂಕಗಳು ಪ್ರಕಟವಾಗಿದೆ. ಎಲ್ಲ ರಾಜ್ಯಗಳಲ್ಲಿಯೂ ಮೇ 2 ರಂದು ಮತ ಎಣಿಕೆ ನಡೆಯಲಿದೆ. ಪಶ್ಚಿಮ ಬಂಗಾಳದಲ್ಲಿ ಮಾರ್ಚ್ 27, ಏಪ್ರಿಲ್ 1, ಏಪ್ರಿಲ್ 6, ಏಪ್ರಿಲ್ 10, ಏಪ್ರಿಲ್ 17, ಏಪ್ರಿಲ್ 22, ಏಪ್ರಿಲ್ 26 ಹಾಗೂ ಏಪ್ರಿಲ್ 29ರಂದು ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮತ ಎಣಿಕೆಯು ಮೇ 2ರಂದು ನಡೆಯಲಿದೆ. ಕೇರಳದಲ್ಲಿ ಏಪ್ರಿಲ್ 6ರಂದು ಚುನಾವಣೆ ಮತ್ತು ಮೇ 2ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಏಪ್ರಿಲ್ 6ರಂದು ಚುನಾವಣೆ ಮತ್ತು ಮೇ 2ರಂದು ಮತ ಎಣಿಕೆ ನಡೆಯಲಿದೆ. ಅಸ್ಸಾಂನಲ್ಲಿ 27 ಮಾರ್ಚ್, ಏಪ್ರಿಲ್ 1 ಮತ್ತು ಏಪ್ರಿಲ್ 6ರಂದು, ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ. ಮೇ 2ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: West Bengal Election 2021 Opinion Poll: ಟಿಎಂಸಿಗೆ 146 ಸೀಟು, ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿಗೆ ಗೆಲುವು ಎಂದ ಜನ

Assembly Elections 2021: ಪಂಚರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಯಾರು ಗೆಲ್ಲಬಹುದು? ಸಮೀಕ್ಷೆ ಏನು ಹೇಳುತ್ತಿದೆ?

Published On - 9:21 pm, Wed, 24 March 21

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ