AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assam Assembly Elections 2021: ಕಾಂಗ್ರೆಸ್ ಜೊತೆ ಆರ್​ಜೆಡಿ ಮೈತ್ರಿ; ಮೊದಲ ಹಂತದಲ್ಲಿ 1 ಕ್ಷೇತ್ರದಿಂದ ಸ್ಪರ್ಧೆ

ಅಸ್ಸಾಂ ವಿಧಾನಸಭಾ ಚುನಾವಣೆಯ ಮೊದಲ ಹಂತದಲ್ಲಿ 47 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಈ ಪೈಕಿ 43 ಕ್ಷೇತ್ರಗಳಿಂದ ಕಾಂಗ್ರೆಸ್ ಸ್ಪರ್ಧಿಸಲಿದೆ. AIUDF, CPI(ML), AGM ಮತ್ತು RJD ಉಳಿದ ನಾಲ್ಕು ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ.

Assam Assembly Elections 2021: ಕಾಂಗ್ರೆಸ್ ಜೊತೆ ಆರ್​ಜೆಡಿ ಮೈತ್ರಿ; ಮೊದಲ ಹಂತದಲ್ಲಿ 1 ಕ್ಷೇತ್ರದಿಂದ ಸ್ಪರ್ಧೆ
ಕಾಂಗ್ರೆಸ್​ ಧ್ವಜ (ಪ್ರಾತಿನಿಧಿಕ ಚಿತ್ರ)
TV9 Web
| Updated By: ganapathi bhat|

Updated on:Apr 06, 2022 | 7:14 PM

Share

ಗುವಾಹಟಿ: ವಿಧಾನಸಭಾ ಚುನಾವಣಾ ದಿನಾಂಕ ಸಮೀಪಿಸುತ್ತಿರುವಂತೆ ಐದು ರಾಜ್ಯಗಳಲ್ಲಿ ಚುನಾವಣಾ ಕಣ ರಂಗೇರುತ್ತಿದೆ. ಪಕ್ಷಗಳು ಮೈತ್ರಿ ಮಾಡಿಕೊಳ್ಳುವುದು, ಸೀಟು ಹಂಚಿಕೆ ಮಾಡಿಕೊಳ್ಳುವುದು, ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದು ನಡೆಯುತ್ತಿದೆ. ಅಸ್ಸಾಂನಲ್ಲಿ ರಾಷ್ಟ್ರೀಯ ಜನತಾ ದಳ (RJD) ಪಕ್ಷ ಕಾಂಗ್ರೆಸ್ ನೇತೃತ್ವದ ಮಹಾ ಒಕ್ಕೂಟ (Grand Alliance) ಜತೆ ಮೈತ್ರಿ ಮಾಡಿಕೊಂಡಿದೆ. ಮೊದಲ ಹಂತದ ಚುನಾವಣೆಯಲ್ಲಿ ಒಂದು ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಮಾಹಿತಿ ನೀಡಿದೆ.

ಅಸ್ಸಾಂನ ತಿನ್ಸುಕಿಯಾ ಕ್ಷೇತ್ರದಲ್ಲಿ ಹೀರಾ ದೇವಿ ಚೌಧರಿ ಆರ್​ಜೆಡಿ ಪಕ್ಷದಿಂದ ಸ್ಪರ್ಧಿಸಲಿದ್ದಾರೆ. ತಿನ್ಸುಕಿಯಾ ಕ್ಷೇತ್ರದಲ್ಲಿ ಹಿಂದಿ ಮಾತನಾಡುವ ಜನರ ಪ್ರಮಾಣ ಅಧಿಕವಾಗಿದೆ. ಈ ಮೊದಲು ಕಾಂಗ್ರೆಸ್ ನೇತೃತ್ವದ ಮಹಾ ಒಕ್ಕೂಟದಲ್ಲಿ AIUDF, ಬೋಡೊಲ್ಯಾಂಡ್ ಪೀಪಲ್ಸ್ ಫ್ರಂಟ್ (BPF), CPI, CPI(M), CPI(ML) ಹಾಗೂ ಅಂಚಾಲಿಕ್ ಗಣ ಮೋರ್ಚಾ (AGM) ಪಕ್ಷಗಳಿದ್ದವು. ಈಗ RJD ಕೂಡ ಮೈತ್ರಿಕೂಟದ ಜತೆಯಾಗಿದೆ.

ಅಸ್ಸಾಂ ವಿಧಾನಸಭಾ ಚುನಾವಣೆಯ ಮೊದಲ ಹಂತದಲ್ಲಿ 47 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಈ ಪೈಕಿ 43 ಕ್ಷೇತ್ರಗಳಿಂದ ಕಾಂಗ್ರೆಸ್ ಸ್ಪರ್ಧಿಸಲಿದೆ. AIUDF, CPI(ML), AGM ಮತ್ತು RJD ಉಳಿದ ನಾಲ್ಕು ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ.

ಅಸ್ಸಾಂ ಹಾಗೂ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ ರೈತ ಮುಖಂಡರು ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳ ಹಾಗೂ ಅಸ್ಸಾಂಗೆ ಭೇಟಿ ನೀಡುವುದಾಗಿ ಮಂಗಳವಾರ (ಮಾರ್ಚ್ 9) ತಿಳಿಸಿದ್ದಾರೆ. ರೈತ ವಿರೋಧಿ ಬಿಜೆಪಿ ಸರ್ಕಾರಕ್ಕೆ ಮತ ನೀಡಬೇಡಿ ಎಂದು ಅವರು ಜನರನ್ನು ಕೇಳಲಿದ್ದಾರೆ.

ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ಭೇಟಿಯನ್ನು ಮಾರ್ಚ್ 12ರಿಂದ ಮೂರು ದಿನಗಳ ಕಾಲ ನಡೆಸಲಿರುವುದಾಗಿ ರೈತ ಮುಖಂಡ ದರ್ಶನ್ ಪಾಲ್ ಹೇಳಿದ್ದಾರೆ. ಹೆಚ್ಚಿನ ಮಾಹಿತಿಗಳನ್ನು ಮುಂದೆ ಹಂಚಿಕೊಳ್ಳಲಿದ್ದೇವೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ (SKM) ಸದಸ್ಯೆ ಕವಿತಾ ಕುರುಗಂಟಿ ತಿಳಿಸಿದ್ದಾರೆ.

ಸಿ-ವೋಟರ್ ಸಮೀಕ್ಷೆ ಏನು ಹೇಳುತ್ತಿದೆ? ಅಸ್ಸಾಂನಲ್ಲಿ 27 ಮಾರ್ಚ್, ಏಪ್ರಿಲ್ 1 ಮತ್ತು ಏಪ್ರಿಲ್ 6ರಂದು, ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ. ಮೇ 2ರಂದು ಮತ ಎಣಿಕೆ ನಡೆಯಲಿದೆ.ಮಾರ್ಚ್ 27ರಂದು ಅಸ್ಸಾಂ ಹಾಗೂ ಪಶ್ಚಿಮ ಬಂಗಾಳ ಚುನಾವಣೆ ಆರಂಭವಾಗಲಿದೆ. ಅಸ್ಸಾಂನಲ್ಲಿ ಬಿಜೆಪಿ 67 ಸೀಟ್ ಗೆಲ್ಲುವ ನಿರೀಕ್ಷೆ ಇದೆ. ಅಂದರೆ, ಬಹುಮತಕ್ಕೆ ಬೇಕಾಗಿರುವ ಸ್ಥಾನಗಳಿಗಿಂತ 7 ಹೆಚ್ಚು ಸೀಟ್​ಗಳು. ಕಾಂಗ್ರೆಸ್ ನೇತೃತ್ವದ ಪಕ್ಷಗಳು 57 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಪುದುಚೇರಿಯಲ್ಲಿ ಇರುವ 30 ಸೀಟ್​ಗಳ ಪೈಕಿ, ಬಿಜೆಪಿ 18 ಸ್ಥಾನಗಳನ್ನು ಗೆಲ್ಲಬಹುದು ಎಂದು ಸಮೀಕ್ಷೆ ವರದಿ ಮಾಡಿದೆ.

ಇದನ್ನೂ ಓದಿ: Assam Assembly Elections 2021: ಅಸ್ಸಾಂನ 40 ಕ್ಷೇತ್ರಗಳ ಅಭ್ಯರ್ಥಿ ಪಟ್ಟಿ ಘೋಷಿಸಿದ ಕಾಂಗ್ರೆಸ್

Photo Gallery: ಅಸ್ಸಾಂ ಚಹಾ ತೋಟದಲ್ಲಿ ಪ್ರಿಯಾಂಕಾ ಗಾಂಧಿ; ಕಾರ್ಮಿಕರ ಕಷ್ಟ-ಸುಖ ಅರಿತ ಕಾಂಗ್ರೆಸ್ ನಾಯಕಿ

Published On - 8:16 pm, Wed, 10 March 21