Assam Assembly Elections 2021: ಜನರ ನಡುವೆ ಬಿರುಕು ಮೂಡಿಸಲು ದ್ವೇಷ ಮಾರಾಟ: ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಯಾವ ಧರ್ಮವೂ ವೈರತ್ವವನ್ನು ಕಲಿಸುವುದಿಲ್ಲ. ಆದರೆ, ಬಿಜೆಪಿ ಜನರ ನಡುವೆ ಬಿರುಕು ಮೂಡಿಸಲು ದ್ವೇಷ ಮಾರಾಟ ಮಾಡುತ್ತಿದೆ ಎಂದು ದಿಬ್ರುಘರ್​ನ ಕಾಲೇಜು ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದದಲ್ಲಿ ರಾಹುಲ್ ಗಾಂಧಿ ಹೇಳಿದರು.

Assam Assembly Elections 2021: ಜನರ ನಡುವೆ ಬಿರುಕು ಮೂಡಿಸಲು ದ್ವೇಷ ಮಾರಾಟ: ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
ಅಸ್ಸಾಂನಲ್ಲಿ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
Follow us
TV9 Web
| Updated By: ganapathi bhat

Updated on:Apr 06, 2022 | 6:57 PM

ಗುವಾಹಾಟಿ: ಅಸ್ಸಾಂನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿಯಾಗಲು ಬಿಡುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು (ಮಾರ್ಚ್ 19) ಅಸ್ಸಾಂನಲ್ಲಿ ತಿಳಿಸಿದರು. ಮುಂಬರುವ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಪ್ರಚಾರದಲ್ಲಿ ತೊಡಗಿರುವ ಕೈ ನಾಯಕ ಹೀಗೆ ಭರವಸೆ ನೀಡಿದರು.

ಯಾವ ಧರ್ಮವೂ ವೈರತ್ವವನ್ನು ಕಲಿಸುವುದಿಲ್ಲ. ಆದರೆ, ಬಿಜೆಪಿ ಜನರ ನಡುವೆ ಬಿರುಕು ಮೂಡಿಸಲು ದ್ವೇಷ ಮಾರಾಟ ಮಾಡುತ್ತಿದೆ ಎಂದು ದಿಬ್ರುಘರ್​ನ ಕಾಲೇಜು ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದದಲ್ಲಿ ರಾಹುಲ್ ಗಾಂಧಿ ಹೇಳಿದರು. ಬಿಜೆಪಿಯವರು ಎಲ್ಲಿಗೆ ಹೋಗುತ್ತಾರೋ ಅಲ್ಲೆಲ್ಲಾ ದ್ವೇಷ ಹಬ್ಬಿಸುತ್ತಾರೆ. ಸಮಾಜ ಒಡೆಯಲು ದ್ವೇಷವನ್ನೇ ಅಸ್ತ್ರವಾಗಿ ಬಳಸುತ್ತಾರೆ. ಆದರೆ, ಪ್ರೀತಿ ಮತ್ತು ಸಹಬಾಳ್ವೆ ಹರಡುವ ಬಗ್ಗೆ ಕಾಂಗ್ರೆಸ್ ಪಕ್ಷ ಭರವಸೆ ನೀಡುತ್ತದೆ ಎಂದು ತಿಳಿಸಿದರು.

ಆರ್​ಎಸ್​ಎಸ್ ಮೇಲೆ ಸೂಚ್ಯ ದಾಳಿ ನಡೆಸಿದ ರಾಹುಲ್ ಗಾಂಧಿ, ನಾಗ್ಪುರ್​ನ ಒಂದು ಶಕ್ತಿ ಇಡೀ ದೇಶವನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದೆ. ದೇಶದ ಭವಿಷ್ಯವಾಗಿರುವ ಯುವಜನರು ಪ್ರೀತಿ ಹಾಗೂ ಸ್ಥೈರ್ಯದಿಂದ ಇದಕ್ಕೆ ತಡೆಯೊಡ್ಡಬೇಕು ಎಂದು ಕರೆ ನೀಡಿದರು. ಬಳಿಕ, ಚಬ್ರುಘರ್​ನ ಚಬುವಾ ಪ್ರದೇಶದಲ್ಲಿ ಚಹಾ ಕೆಲಸಗಾರರೊಂದಿಗೆ ಸಂವಾದ ನಡೆಸಿದರು.

ಅಸ್ಸಾಂನಲ್ಲಿ ಎರಡು ದಿನ ಭೇಟಿಯಲ್ಲಿರುವ ರಾಹುಲ್ ಗಾಂಧಿ, ಶನಿವಾರ (ಮಾರ್ಚ್ 20) ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಲಿದ್ದಾರೆ.

ಇದನ್ನೂ ಓದಿ: Assam Assembly elections 2021: ಕಾಂಗ್ರೆಸ್ ಜಿನ್ನಾರ ಹೆಜ್ಜೆ ಅನುಸರಿಸುತ್ತಿದ್ದು, ದೇಶವನ್ನು ನಾಶ ಮಾಡಲಿದೆ: ಶಿವರಾಜ್ ಸಿಂಗ್ ಚೌಹಾಣ್

Assam Assembly Elections 2021: ರಾಜಕೀಯದಲ್ಲಿ ಬಿಜೆಪಿ ನನ್ನನ್ನು ಮುಗಿಸಲು ಯತ್ನಿಸುತ್ತಿದೆ: ಎಐಯುಡಿಎಫ್ ಮುಖ್ಯಸ್ಥ ಮೌಲಾನಾ ಬದ್ರುದ್ದೀನ್ ಅಜ್ಮಲ್

Published On - 7:21 pm, Fri, 19 March 21

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್