AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂ ಸಿಎಂ ಪುತ್ರನಿಗಿದೆ ಬೆಂಗಳೂರು ನಂಟು: ಪ್ರತಿಷ್ಠಿತ ಕಾನೂನು ಕಾಲೇಜಿನಲ್ಲಿ ನಂದಿಲ್ ಶರ್ಮಾ ವ್ಯಾಸಂಗ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪುತ್ರ ನಂದಿಲ್ ಬಿಸ್ವಾ ಶರ್ಮಾ, ಬೆಂಗಳೂರಿನ ಪ್ರತಿಷ್ಠಿತ NLSIU ನಲ್ಲಿ ಕಾನೂನು ವ್ಯಾಸಂಗ ಮಾಡುತ್ತಿದ್ದಾರೆ. CLAT ಪರೀಕ್ಷೆಯಲ್ಲಿ 40ನೇ ಶ್ರೇಣಿ ಪಡೆದು ಪ್ರವೇಶ ಪಡೆದಿರುವ ಇವರು, IRONMAN 70.3 ಟ್ರಯಥ್ಲಾನ್ ಪೂರ್ಣಗೊಳಿಸಿ ಗಮನ ಸೆಳೆದಿದ್ದಾರೆ. ರಾಜಕೀಯ ಬದಲು ನ್ಯಾಯಾಲಯದಲ್ಲಿ ವಕೀಲರಾಗುವ ಗುರಿ ಹೊಂದಿರುವ ನಂದಿಲ್, ಯುವಜನತೆಗೆ ಮಾದರಿಯಾಗಿದ್ದಾರೆ.

ಅಸ್ಸಾಂ ಸಿಎಂ ಪುತ್ರನಿಗಿದೆ ಬೆಂಗಳೂರು ನಂಟು: ಪ್ರತಿಷ್ಠಿತ ಕಾನೂನು ಕಾಲೇಜಿನಲ್ಲಿ ನಂದಿಲ್ ಶರ್ಮಾ ವ್ಯಾಸಂಗ
ನಂದಿಲ್ ಶರ್ಮಾImage Credit source: Hindustan Times
ನಯನಾ ರಾಜೀವ್
|

Updated on:May 05, 2026 | 11:34 AM

Share

ಬೆಂಗಳೂರು/ಗುವಾಹಟಿ, ಮೇ 05: ರಾಜಕೀಯ ರಂಗದಲ್ಲಿ ಅಸ್ಸಾಂನ ಶಕ್ತಿಯಾಗಿ ಬೆಳೆದಿರುವ ಹಿಮಂತ ಬಿಸ್ವಾ ಶರ್ಮಾ(Himanta Biswa Sarma) ಅವರ ಪುತ್ರ ನಂದಿಲ್ ಬಿಸ್ವಾ ಶರ್ಮಾ, ಬೆಂಗಳೂರಿನಲ್ಲಿ ತಮ್ಮ ವೃತ್ತಿಜೀವನದ ಅಡಿಪಾಯ ಹಾಕುತ್ತಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ ಕಾನೂನು ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ಇವರು, ಕೇವಲ ಓದಿನಲ್ಲಿ ಮಾತ್ರವಲ್ಲದೆ ಕ್ರೀಡೆಯಲ್ಲೂ ಅಸಾಮಾನ್ಯ ಸಾಧನೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ನಂದಿಲ್ ಅವರು ಬೆಂಗಳೂರಿನಲ್ಲಿರುವ ವಿಶ್ವಪ್ರಸಿದ್ಧ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (NLSIU) ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.  2021ರ ಅಖಿಲ ಭಾರತ ಮಟ್ಟದ CLAT ಪರೀಕ್ಷೆಯಲ್ಲಿ  ಉತ್ತಮ ಅಂಕ ಗಳಿಸುವ ಮೂಲಕ ಅರ್ಹತೆಯ ಆಧಾರದ ಮೇಲೆ ಈ ಸಂಸ್ಥೆಗೆ ಪ್ರವೇಶ ಪಡೆದಿದ್ದರು. ಪ್ರಸ್ತುತ ಅವರು ಐದು ವರ್ಷಗಳ ಸಮಗ್ರ ಬಿ.ಎ., ಎಲ್.ಎಲ್.ಬಿ. ಪದವಿಯ ಅಂತಿಮ ವರ್ಷದಲ್ಲಿದ್ದಾರೆ.

ಡೆಹ್ರಾಡೂನ್‌ನ ಪ್ರಸಿದ್ಧ ದೂನ್ ಶಾಲೆಯಲ್ಲಿ ಶಾಲಾ ಶಿಕ್ಷಣ ಪೂರೈಸಿದ ಅವರು, 2019 ರಲ್ಲಿ ಶಾಲಾ ನಾಯಕನಾಗಿಯೂ ಜವಾಬ್ದಾರಿ ನಿರ್ವಹಿಸಿದ್ದರು. ಇದು ಅವರಲ್ಲಿರುವ ನಾಯಕತ್ವದ ಗುಣಕ್ಕೆ ಸಾಕ್ಷಿಯಾಗಿದೆ. ಕಾನೂನು ಓದಿನ ಕಠಿಣ ಪರಿಶ್ರಮದ ನಡುವೆಯೂ ನಂದಿಲ್ ಕ್ರೀಡೆಯಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ.

ಮತ್ತಷ್ಟು ಓದಿ: ನನ್ನ ಪತ್ನಿ ಮೇಲೆ ಸುಳ್ಳು ಆರೋಪ ಮಾಡ್ಬೇಡಿ ಎನ್ನುತ್ತಾ ಕಾಂಗ್ರೆಸ್ ಬಂಡವಾಳ ಬಿಚ್ಚಿಟ್ಟ ಅಸ್ಸಾಂ ಸಿಎಂ ಹಿಮಂತ ಶರ್ಮಾ

2025ರ ಡಿಸೆಂಬರ್‌ನಲ್ಲಿ ಬಹ್ರೇನ್‌ನಲ್ಲಿ ನಡೆದ ಅತ್ಯಂತ ಕಠಿಣ ಕ್ರೀಡಾಕೂಟಗಳಲ್ಲಿ ಒಂದಾದ IRONMAN 70.3 ಟ್ರಯಾಥ್ಲಾನ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ತಮ್ಮ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಹೆಚ್ಚಿನ ರಾಜಕಾರಣಿಗಳ ಮಕ್ಕಳು ರಾಜಕೀಯಕ್ಕೆ ಪ್ರವೇಶಿಸಲು ಬಯಸುತ್ತಾರೆ. ಆದರೆ ನಂದಿಲ್ ಅವರ ಗುರಿ ವಿಭಿನ್ನವಾಗಿದೆ.

ಪದವಿ ಮುಗಿಸಿದ ನಂತರ ಅವರು ನೇರವಾಗಿ ನ್ಯಾಯಾಲಯದಲ್ಲಿ ವಕೀಲರಾಗಿ ವೃತ್ತಿಜೀವನವನ್ನು ಆರಂಭಿಸುವ ಆಕಾಂಕ್ಷೆ ಹೊಂದಿದ್ದಾರೆ. ನಂದಿಲ್ ಅವರು ರಾಜಕೀಯಕ್ಕಿಂತ ಹೆಚ್ಚಾಗಿ ಕಾನೂನು ಕ್ಷೇತ್ರದಲ್ಲೇ ತಮ್ಮ ಸ್ವಂತ ಗುರುತು ಮೂಡಿಸಬೇಕೆಂದು ತಂದೆ ಹಿಮಂತ ಬಿಸ್ವಾ ಶರ್ಮಾ ಅವರು ಕೂಡ ಆಶಿಸಿದ್ದಾರೆ.

ಒಟ್ಟಾರೆಯಾಗಿ, ನಂದಿಲ್ ಬಿಸ್ವಾ ಶರ್ಮಾ ಅವರು ಬೆಂಗಳೂರಿನಲ್ಲಿ ತಮ್ಮ ಶೈಕ್ಷಣಿಕ ಪಯಣವನ್ನು ಅತ್ಯಂತ ಯಶಸ್ವಿಯಾಗಿ ಮುಂದುವರಿಸುತ್ತಿದ್ದು, ಯುವಜನತೆಗೆ ಮಾದರಿಯಾಗಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:34 am, Tue, 5 May 26

Follow Us
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಮೆಟ್ಟಿಲುಗಳಿಗೆ ಕೈ ಮುಗಿದು ವಿಧಾನಸೌಧಕ್ಕೆ ಸಮರ್ಥ್​ ಎಂಟ್ರಿ
ಮೆಟ್ಟಿಲುಗಳಿಗೆ ಕೈ ಮುಗಿದು ವಿಧಾನಸೌಧಕ್ಕೆ ಸಮರ್ಥ್​ ಎಂಟ್ರಿ
ಉಡುಪಿಯಲ್ಲಿ ಅಬ್ಬರಿಸಿದ ವರುಣ: ರಸ್ತೆಯಲ್ಲೇ ನೀರು ನಿಂತು ಸವಾರರ ಪರದಾಟ
ಉಡುಪಿಯಲ್ಲಿ ಅಬ್ಬರಿಸಿದ ವರುಣ: ರಸ್ತೆಯಲ್ಲೇ ನೀರು ನಿಂತು ಸವಾರರ ಪರದಾಟ
ಸ್ಟ್ರಾಂಗ್‌ ರೂಮ್‌ವೊಂದರ ಬೀಗ ಕಳೆದಿರೋದನ್ನು ನಾವು ಎಂದೂ ಕೇಳಿರಲಿಲ್ಲ
ಸ್ಟ್ರಾಂಗ್‌ ರೂಮ್‌ವೊಂದರ ಬೀಗ ಕಳೆದಿರೋದನ್ನು ನಾವು ಎಂದೂ ಕೇಳಿರಲಿಲ್ಲ
IPL ಫೈನಲ್ ಬೆಂಗಳೂರಿನಿಂದ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಇಲ್ಲಿದೆ
IPL ಫೈನಲ್ ಬೆಂಗಳೂರಿನಿಂದ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಇಲ್ಲಿದೆ
ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಕುಟುಂಬ ವಿದಾಯ
ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಕುಟುಂಬ ವಿದಾಯ
ಪೋಕ್ಸೋ ಪ್ರಕರಣವಿದೆ: ಯಡಿಯೂರಪ್ಪ ಅಭಿಮಾನೋತ್ಸವ ಸರಿಯಲ್ಲ ಎಂದ ಬಿಜೆಪಿ ನಾಯಕ
ಪೋಕ್ಸೋ ಪ್ರಕರಣವಿದೆ: ಯಡಿಯೂರಪ್ಪ ಅಭಿಮಾನೋತ್ಸವ ಸರಿಯಲ್ಲ ಎಂದ ಬಿಜೆಪಿ ನಾಯಕ
ಕಲಬುರಗಿ: ಕಾಣೆಯಾಗಿದ್ದ 1.44 ಕೋಟಿ ರೂ. ಮೌಲ್ಯದ 785 ಮೊಬೈಲ್‌ಗಳ ಹಸ್ತಾಂತರ!
ಕಲಬುರಗಿ: ಕಾಣೆಯಾಗಿದ್ದ 1.44 ಕೋಟಿ ರೂ. ಮೌಲ್ಯದ 785 ಮೊಬೈಲ್‌ಗಳ ಹಸ್ತಾಂತರ!
ಮೈಲಾರಿ ಹೋಟೆಲ್‌ನಲ್ಲಿ ರಾಜಣ್ಣ ಜತೆ ಕುಳಿತು ದೋಸೆ ಸವಿದ ಸಿಎಂ ಸಿದ್ದರಾಮಯ್ಯ
ಮೈಲಾರಿ ಹೋಟೆಲ್‌ನಲ್ಲಿ ರಾಜಣ್ಣ ಜತೆ ಕುಳಿತು ದೋಸೆ ಸವಿದ ಸಿಎಂ ಸಿದ್ದರಾಮಯ್ಯ
ಕೇರಳ ಸಿಎಂ ಸ್ಥಾನಕ್ಕೆ ತೀವ್ರ ಪೈಪೋಟಿ: ಈ ಮೂವರಲ್ಲೇ ಒಬ್ಬರು ಮುಖ್ಯಮಂತ್ರಿ?
ಕೇರಳ ಸಿಎಂ ಸ್ಥಾನಕ್ಕೆ ತೀವ್ರ ಪೈಪೋಟಿ: ಈ ಮೂವರಲ್ಲೇ ಒಬ್ಬರು ಮುಖ್ಯಮಂತ್ರಿ?