ಅಸ್ಸಾಂ ಸ್ವಾಧೀನಪಡಿಸಿಕೊಳ್ಳಲು ‘ಮಿಯಾ’ ಮುಸ್ಲಿಮರಿಗೆ ಬಿಡುವುದಿಲ್ಲ: ಸಿಎಂ ಹಿಮಂತ ಶರ್ಮಾ

ಮಹಿಳೆಯರ ಸುರಕ್ಷತೆಗೆ ಆಗ್ರಹಿಸಿ ಘೋಷಣೆಗಳನ್ನು ಕೂಗುತ್ತಾ, ಮಹಿಳೆಯರ ಮೇಲಿನ ಎಲ್ಲಾ ಅಪರಾಧಗಳಿಗೆ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡಿರುವುದನ್ನು ಖಂಡಿಸಿ  ಪ್ರತಿಪಕ್ಷದ ನಾಯಕ ದೇಬಬ್ರತ ಸೈಕಿಯಾ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ವಿಧಾನಸೌಧದ ಒಳಗಿನಿಂದ ಕಂಪೌಂಡ್‌ನಲ್ಲಿರುವ ಮಹಾತ್ಮ ಗಾಂಧೀಜಿಯವರ ಪ್ರತಿಮೆಯವರೆಗೆ ಪ್ರತಿಭಟನೆ ನಡೆಸಿದ್ದಾರೆ.

ಅಸ್ಸಾಂ ಸ್ವಾಧೀನಪಡಿಸಿಕೊಳ್ಳಲು 'ಮಿಯಾ' ಮುಸ್ಲಿಮರಿಗೆ ಬಿಡುವುದಿಲ್ಲ: ಸಿಎಂ ಹಿಮಂತ ಶರ್ಮಾ
ಹಿಮಂತ ಶರ್ಮಾ
Follow us
ರಶ್ಮಿ ಕಲ್ಲಕಟ್ಟ
|

Updated on: Aug 27, 2024 | 3:12 PM

ಗುವಾಹಟಿ ಆಗಸ್ಟ್ 27: ಅಸ್ಸಾಂ (Assam) ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ‘ಮಿಯಾ’ ಮುಸ್ಲಿಮರು ರಾಜ್ಯವನ್ನು “ಸ್ವಾಧೀನಪಡಿಸಿಕೊಳ್ಳಲು” ಬಿಡುವುದಿಲ್ಲ ಎಂದು ಮಂಗಳವಾರ ಹೇಳಿದ್ದಾರೆ. ನಾಗಾಂವ್‌ನಲ್ಲಿ 14 ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಚರ್ಚಿಸಲು ವಿರೋಧ ಪಕ್ಷಗಳು ತಂದಿರುವ ನಿಲುವಳಿ ಸೂಚನೆ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡುತ್ತಿದ್ದರು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ನಿಲುವಳಿ ಸೂಚನೆಗೆ ಉತ್ತರಿಸಿದ ಅಸ್ಸಾಂ ಮುಖ್ಯಮಂತ್ರಿ, ಜನಸಂಖ್ಯೆಯ ಬೆಳವಣಿಗೆಯನ್ನು ಗಣನೆಗೆ ತೆಗೆದುಕೊಂಡರೆ ಅಪರಾಧ ಪ್ರಮಾಣ ಹೆಚ್ಚಿಲ್ಲ ಎಂದು ಹೇಳಿದ್ದಾರೆ. ಪ್ರತಿಪಕ್ಷಗಳು ಪಕ್ಷಪಾತಿ ಎಂದು ಆರೋಪಿಸಿದಾಗ, ಹಿಮಂತ ಶರ್ಮಾ, “ನಾನು ಒಬ್ಬರ ಪರವಾಗಿದ್ದೇನೆ. ನೀವೇನು ಮಾಡುತ್ತೀರಿ ? ”ಎಂದು ಕೇಳಿದ್ದಾರೆ.

“ಕೆಳ ಅಸ್ಸಾಂನ ಜನರು ಮೇಲಿನ ಅಸ್ಸಾಂಗೆ ಏಕೆ ಹೋಗುತ್ತಾರೆ? ಹಾಗಾದರೆ ಮಿಯಾ ಮುಸ್ಲಿಮರು ಅಸ್ಸಾಂ ಅನ್ನು ವಶಪಡಿಸಿಕೊಳ್ಳಬಹುದೇ? ನಾವು ಅದನ್ನು ಸಂಭವಿಸಲು ಬಿಡುವುದಿಲ್ಲ, ”ಎಂದು ಶರ್ಮಾ ಹೇಳಿರುವುಗಾಗಿ ಪಿಟಿಐ ಉಲ್ಲೇಖಿಸಿದೆ.

ಈ ನಡುವೆಯೇ ಆಡಳಿತರೂಢ ಪಕ್ಷ ಮತ್ತು ವಿರೋಧ ಪೀಠಗಳ ಸದಸ್ಯರು ಸದನದ ಬಾವಿಗೆ ನುಗ್ಗಿದಾಗ, ಸ್ಪೀಕರ್ ಬಿಸ್ವಜಿತ್ ಡೈಮರಿ ಅವರು ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಿದರು.  ಕಾಂಗ್ರೆಸ್, ಎಐಯುಡಿಎಫ್ ಮತ್ತು ಸಿಪಿಐ(ಎಂ), ಮತ್ತು ಏಕೈಕ ಪಕ್ಷೇತರ ಶಾಸಕ ಅಖಿಲ್ ಗೊಗೊಯ್ ಅವರು ಮಹಿಳೆಯರ ವಿರುದ್ಧದ ಅಪರಾಧಗಳು ಸೇರಿದಂತೆ ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧಗಳಿಂದ ಉಂಟಾಗುವ ಪರಿಸ್ಥಿತಿಯ ಕುರಿತು ಚರ್ಚೆಗಾಗಿ ನಾಲ್ಕು ನಿಲುವಳಿ ಸೂಚನೆ ಮಂಡಿಸಿದ್ದರು.

ಗುವಾಹಟಿಯಲ್ಲಿ ವಿರೋಧ ಪಕ್ಷಗಳಿಂದ ಪ್ರತಿಭಟನೆ

ಮಹಿಳೆಯರನ್ನು ರಕ್ಷಿಸಲು ಮತ್ತು ಅವರ ವಿರುದ್ಧದ ಅಪರಾಧಗಳನ್ನು ತಡೆಯಲು ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಅಸ್ಸಾಂನ ವಿರೋಧ ಪಕ್ಷಗಳು ಗುವಾಹಟಿಯ ವಿವಿಧ ಭಾಗಗಳಲ್ಲಿ ಪ್ರತಿಭಟನೆಗಳನ್ನು ನಡೆಸಿವೆ. ಮಹಿಳೆಯರ ಸುರಕ್ಷತೆಗೆ ಆಗ್ರಹಿಸಿ ಘೋಷಣೆಗಳನ್ನು ಕೂಗುತ್ತಾ, ಮಹಿಳೆಯರ ಮೇಲಿನ ಎಲ್ಲಾ ಅಪರಾಧಗಳಿಗೆ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡಿರುವುದನ್ನು ಖಂಡಿಸಿ  ಪ್ರತಿಪಕ್ಷದ ನಾಯಕ ದೇಬಬ್ರತ ಸೈಕಿಯಾ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ವಿಧಾನಸೌಧದ ಒಳಗಿನಿಂದ ಕಂಪೌಂಡ್‌ನಲ್ಲಿರುವ ಮಹಾತ್ಮ ಗಾಂಧೀಜಿಯವರ ಪ್ರತಿಮೆಯವರೆಗೆ ಪ್ರತಿಭಟನೆ ನಡೆಸಿದ್ದಾರೆ.

ಧಿಂಗ್ ಘಟನೆ ಒಂದೇ ಅಲ್ಲ. ಅದರ ನಂತರವೂ ರಾಜ್ಯದ ವಿವಿಧ ಭಾಗಗಳಲ್ಲಿ ಇಂತಹ ಹಲವು ಪ್ರಕರಣಗಳು ನಡೆದಿವೆ. ಗೃಹ ಖಾತೆಯನ್ನು ಹೊಂದಿರುವ ಸಿಎಂ ಅವರು ಪರಿಸ್ಥಿತಿಯ ಬಗ್ಗೆ ಗಂಭೀರವಾಗಿಲ್ಲ ಮತ್ತು ಈ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ನಾವು ಎನ್‌ಸಿಆರ್‌ಬಿ ಡೇಟಾದೊಂದಿಗೆ ಮಹಿಳೆಯರ ಮೇಲಿನ ಅಪರಾಧಗಳ ಬಗ್ಗೆ ವಿಧಾನಸಭೆಯಲ್ಲಿ ಚರ್ಚಿಸಿದ್ದೇವೆ ಮತ್ತು ಕ್ರಮ ಕೈಗೊಳ್ಳಲು ಸರ್ಕಾರವನ್ನು ಕೇಳಿದ್ದೇವೆ. ಅಂತಹ ಅಪರಾಧಗಳ “ಕೆಲವು ಪ್ರಕರಣಗಳನ್ನು” ದಾಖಲಿಸದಂತೆ ಗೃಹ ಇಲಾಖೆಯು ಅಸ್ಸಾಂ ಪೊಲೀಸರನ್ನು ಕೇಳಿದೆ ಎಂದು ಸೈಕಿಯಾ ಹೇಳಿದ್ದಾರೆ.

ಇದನ್ನೂ ಓದಿ: ಕೋಲ್ಕತ್ತಾ: ಅತ್ಯಾಚಾರ ಆರೋಪಿ ಅಂದು ರಾತ್ರಿ ಬಳಸಿದ್ದ ಬೈಕ್​ ಉನ್ನತ ಪೊಲೀಸ್​ ಅಧಿಕಾರಿಯದ್ದು

ಆಗಸ್ಟ್ 22 ರಂದು ನಾಗಾಂವ್ ಜಿಲ್ಲೆಯ ಧಿಂಗ್‌ನಲ್ಲಿ ಟ್ಯೂಷನ್ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ 14 ವರ್ಷದ ಬಾಲಕಿಯ ಮೇಲೆ ಮೂವರು ವ್ಯಕ್ತಿಗಳು ಅತ್ಯಾಚಾರ ಎಸಗಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್