AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂ ಪೊಲೀಸ್ ಕಸ್ಟಡಿಯಲ್ಲಿ ಆರೋಪಿಯ ಸಾವು; ಲಖಿಂಪುರದಲ್ಲಿ ಹೆಚ್ಚಿದ ಉದ್ವಿಗ್ನತೆ

ಮೊಬೈಲ್ ಕಳ್ಳತನದ ಆರೋಪಿಯೊಬ್ಬ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ ನಂತರ ಅಸ್ಸಾಂನ ಲಖಿಂಪುರದಲ್ಲಿ ಉದ್ವಿಗ್ನತೆ ಉಲ್ಬಣಗೊಂಡಿದೆ. ಪೊಲೀಸರ ಕ್ರಮವನ್ನು ಖಂಡಿಸಿ ಖೇಲ್ಮತಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಈ ಘಟನೆಯಲ್ಲಿ ಮೊಬೈಲ್ ಫೋನ್‌ಗಳು ಮತ್ತು ಗ್ಯಾಜೆಟ್‌ಗಳನ್ನು ಕಳ್ಳತನ ಮಾಡಿದ ಐವರು ವ್ಯಕ್ತಿಗಳನ್ನು ಬಂಧಿಸಲಾಗಿತ್ತು.

ಅಸ್ಸಾಂ ಪೊಲೀಸ್ ಕಸ್ಟಡಿಯಲ್ಲಿ ಆರೋಪಿಯ ಸಾವು; ಲಖಿಂಪುರದಲ್ಲಿ ಹೆಚ್ಚಿದ ಉದ್ವಿಗ್ನತೆ
ಸಾವು
ಸುಷ್ಮಾ ಚಕ್ರೆ
|

Updated on: May 23, 2024 | 6:39 PM

Share

ಲಖಿಂಪುರ: ಮೊಬೈಲ್ ಫೋನ್ ಕಳ್ಳತನದ ಆರೋಪಿಯೊಬ್ಬ ಪೊಲೀಸ್ ಕಸ್ಟಡಿಯಲ್ಲಿ (Police Custody) ಸಾವನ್ನಪ್ಪಿದ ನಂತರ ಅಸ್ಸಾಂನ ಲಖೀಂಪುರದಲ್ಲಿ (Lakhimpur) ಉದ್ವಿಗ್ನತೆ ಉಂಟಾಗಿದ್ದು, ಖೇಲ್ಮತಿ ಪ್ರದೇಶದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಆರೋಪಿ ಸೇರಿದಂತೆ ಇತರ ನಾಲ್ವರನ್ನು ಬುಧವಾರ ರಾತ್ರಿ ಖೇಲ್ಮತಿ ಅಧಿಕಾರಿಗಳು ಬಂಧಿಸಿದ್ದರು.

ಈ ಆಘಾತಕಾರಿ ಘಟನೆಯಲ್ಲಿ, ಮೊಬೈಲ್ ಫೋನ್ ಕದ್ದ ಆರೋಪದ ಮೇಲೆ ಬಂಧಿತನಾದ ವ್ಯಕ್ತಿ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾನೆ. ಈ ಸಾವು ಅಸ್ಸಾಂನ ಖೇಲ್ಮತಿ ಪ್ರದೇಶದಲ್ಲಿ ಆಕ್ರೋಶವನ್ನು ಸೃಷ್ಟಿಸಿದ್ದು, ಈ ಬಗ್ಗೆ ಪೊಲೀಸ್ ಇಲಾಖೆ ತನಿಖೆಯನ್ನು ಮಾಡುತ್ತಿದೆ. ಆರೋಪಿಯ ಸಾವಿನ ನಂತರ ಸ್ಥಳೀಯರು ಪ್ರತಿಭಟನೆ ನಡೆಸಿದ್ದರಿಂದ, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

ಇದನ್ನೂ ಓದಿ: Kerala Rains: ಕೇರಳದಲ್ಲಿ ಧಾರಾಕಾರ ಮಳೆ; ನಾಲ್ವರು ಸಾವು, 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಲಖಿಂಪುರದ ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಹೆಡ್‌ಕ್ವಾರ್ಟರ್ಸ್) ಎಲ್‌ಕೆ ದೇಕಾ ಪ್ರಕಾರ, ಪೊಲೀಸ್ ಠಾಣೆಯ ಒಳಗೆ ಬೆಂಚಿನ ಮೇಲೆ ಕುಳಿತಿದ್ದ ಆರೋಪಿಯು ಹಠಾತ್ತನೆ ಕೆಳಗೆ ಬಿದ್ದನು. ತಕ್ಷಣವೇ ಆತನನ್ನು ಸಿವಿಲ್ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ವೈದ್ಯರು ಆತನು ಈಗಾಗಲೇ ಸಾವನ್ನಪ್ಪಿದ್ದಾನೆ ಎಂದು ಘೋಷಿಸಿದರು.

ಖೇಲ್ಮತಿ ಔಟ್‌ಪೋಸ್ಟ್‌ನ ಪ್ರಭಾರಿ ದೀಪಂಕರ್ ಚಂಗ್ಮಾಯಿ ಮತ್ತು ಕರ್ತವ್ಯದಲ್ಲಿದ್ದ ಮತ್ತೊಬ್ಬ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಎಂದು ಎಎಸ್‌ಪಿ ತಿಳಿಸಿದ್ದಾರೆ. ”ಪೊಲೀಸ್ ಠಾಣೆಯೊಳಗೆ ಸಾವು ಸಂಭವಿಸಿರುವುದರಿಂದ, ಎಎಸ್ಪಿ ಶ್ರೇಣಿಯ ಅಧಿಕಾರಿಯಿಂದ ಇಲಾಖಾ ವಿಚಾರಣೆ ನಡೆಸಲಾಗುವುದು” ಎಂದು ಅವರು ಹೇಳಿದರು.

ಇದನ್ನೂ ಓದಿ: Fire Accident: ಥಾಣೆಯ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ ಸ್ಫೋಟ; ದುರಂತದಲ್ಲಿ 4 ಮಂದಿ ಸಾವು, 25 ಜನರಿಗೆ ಗಾಯ

ಈ ಘಟನೆಯನ್ನು ವಿರೋಧಿಸಿ ಬೆಳಗ್ಗೆಯಿಂದಲೇ ಪೊಲೀಸ್ ಠಾಣೆ ಎದುರು ಭಾರೀ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಈ ಘಟನೆಯ ಬಗ್ಗೆ ಮ್ಯಾಜಿಸ್ಟ್ರಿಯಲ್ ವಿಚಾರಣೆಗೆ ಆದೇಶಿಸಲಾಗುವುದು. ಸಾವಿನ ನಿಖರವಾದ ಕಾರಣವನ್ನು ಕಂಡುಹಿಡಿಯಲು ವೈದ್ಯರ ಸಮಿತಿಯು ಮರಣೋತ್ತರ ಪರೀಕ್ಷೆಯನ್ನು ವೀಡಿಯೊಗ್ರಾಫ್ ಮಾಡಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ