ಅಸ್ಸಾಂ: ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಮುಖ ಆರೋಪಿಯ ಮೃತದೇಹ ಕೊಳದಲ್ಲಿ ಪತ್ತೆ

ಆಗಸ್ಟ್ 22 ರಂದು ಸಂಜೆ ಟ್ಯೂಷನ್ ತರಗತಿಯಿಂದ ಮನೆಗೆ ಹಿಂದಿರುಗುತ್ತಿದ್ದಾಗ 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಮೂವರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸಲಾಗಿತ್ತು. ನೆನೆ ರಾತ್ರಿ ಆರೋಪಿಯನ್ನು ತನಿಖೆ ನಡೆಸಲು ಸ್ಥಳಕ್ಕೆ ಕರೆದುಕೊಂಡ ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಹೋಗಿ ಕೊಳಕ್ಕೆ ಹಾರಿದ್ದಾನೆ. ಇದೀಗ ಆತನ ಶವವನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ.

ಅಸ್ಸಾಂ: ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಮುಖ ಆರೋಪಿಯ ಮೃತದೇಹ ಕೊಳದಲ್ಲಿ ಪತ್ತೆ
ಆರೋಪಿಯ ಮೃತದೇಹವನ್ನು ಕೊಳದಿಂದ ಹೊರ ತಂದ ಪೊಲೀಸರು

Updated on: Aug 24, 2024 | 10:43 AM

ನಾಗಾಂವ್: ಅಸ್ಸಾಂನ ಧಿಂಗ್ ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿಯ ಮೃತದೇಹವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ತಫಾಜುಲ್ ಇಸ್ಲಾಂ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡು ಹೊಂಡಕ್ಕೆ ಹಾರಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಪೊಲೀಸರು ತಫಾಜುಲ್ ಇಸ್ಲಾಂನನ್ನು ಬಂಧಿಸಿದ್ದಾರೆ. ಇನ್ನು ಘಟನೆ ಬಗ್ಗೆ ಹಾಗೂ ಬಾಲಕಿಯನ್ನು ಅತ್ಯಾಚಾರ ಮಾಡಿದ ಪ್ರದೇಶದಲ್ಲಿ ತನಿಖೆ ನಡೆಸಲು ಆರೋಪಿಯನ್ನು ಕರೆದುಕೊಂಡು ಹೋಗಲಿದೆ. ಪ್ರಮುಖ ಆರೋಪಿ ತಫಾಜುಲ್ ಇಸ್ಲಾಂ ಪರಾರಿಯಾಗಲು ಪ್ರಯತ್ನಿಸಿದ್ದಾನೆ, ಪೊಲೀಸರು ಆತನನ್ನು ಬೆನ್ನಟ್ಟಿದ್ದಾರೆ, ಆದರೆ ಆರೋಪಿ ಳದ ಸಮೀಪವಿರುವ ಕೊಳಕ್ಕೆ ಹಾರಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ನೆನ್ನೆ ರಾತ್ರಿಯಿಂದ ನಮ್ಮ ಪೊಲೀಸ್ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದರೆ. ಜತೆಗೆ ಎಸ್‌ಡಿಆರ್‌ಎಫ್ ತಂಡದ ಸಹಾಯವನ್ನು ಪಡೆದು ಇಂದು ಬೆಳಗ್ಗೆ ಆತನ ಮೃತದೇಹವನ್ನು ಕೊಳದಿಂದ ಹೊರತೆಗೆದಿದ್ದೇವೆ ಎಂದು ಪೊಲೀಸ್​​ ಅಧಿಕಾರಿಗಳು ಹೇಳಿದ್ದಾರೆ. ಇನ್ನಿಬ್ಬರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.


ಆಗಸ್ಟ್ 22 ರಂದು ಸಂಜೆ ಟ್ಯೂಷನ್ ತರಗತಿಯಿಂದ ಮನೆಗೆ ಹಿಂದಿರುಗುತ್ತಿದ್ದಾಗ 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಮೂವರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಘಟನೆಯು ಧಿಂಗ್ ಪ್ರದೇಶದಲ್ಲಿ ಭಾರೀ ಪ್ರತಿಭಟನೆಗೆ ಕಾರಣವಾಯಿತು, ಅಲ್ಲಿ ಸ್ಥಳೀಯರು ಮತ್ತು ವಿವಿಧ ಸಂಘಟನೆಗಳು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದರು.ಅಸ್ಸಾಂ ಪೊಲೀಸ್ ಮಹಾನಿರ್ದೇಶಕ ಜಿಪಿ ಸಿಂಗ್ ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತೆಯ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ತನಿಖೆಯ ಬಗ್ಗೆ ಚರ್ಚೆ ನಡೆಸಿದ್ದಾರೆ.

ಇದನ್ನೂ ಓದಿ: ಪಿಯುಸಿ ವಿದ್ಯಾರ್ಥಿನಿ ಮೇಲೆ ಶಾಲಾ ಬಸ್ ಚಾಲಕನಿಂದ ನಿರಂತರ ಅತ್ಯಾಚಾರ

ಘಟನೆಯ ಕುರಿತು ಮಾತನಾಡಿದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, “ಮಹಿಳೆಯರ ಮೇಲೆ ಯಾವುದೇ ದೌರ್ಜನ್ಯ ನಡೆದಾಗ, ನಾವು ತ್ವರಿತ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದ್ದಾರೆ. ನಾನು ಒಂದೇ ಒಂದು ವಿಷಯ ಹೇಳಲು ಬಯಸುತ್ತೇನೆ, ಮಹಿಳೆಯರ ಮೇಲೆ ಯಾವುದೇ ದೌರ್ಜನ್ಯ ನಡೆದಾಗ ನಾವು ತಕ್ಷಣ ಕ್ರಮ ತೆಗೆದುಕೊಳ್ಳಬೇಕು. ಆದರೆ ಸರ್ಕಾರವು ಕಠಿಣ ಕ್ರಮ ತೆಗೆದುಕೊಳ್ಳುತ್ತಿದೆ ಎಂಬುದನ್ನು ಸಾರ್ವಜನಿಕರು ನೋಡಬೇಕು. ಒಂದು ವೇಳೆ ಈ ಕ್ರಮ ತೆಗೆದುಕೊಳ್ಳವ ಬಗ್ಗೆ ಜನರಿಗೆ ಗೊತ್ತಾಗಿಲ್ಲ ಎಂದರೆ ಸರ್ಕಾರದ ಮೇಲೆ ಜನರಿಗೆ ಅನುಮಾನ ಬರುತ್ತದೆ. ಇಂತಹ ಘಟನೆಗಳು ನಡೆದಾಗ ಸರ್ಕಾರವು ಅತ್ಯಂತ ಆಕ್ರಮಣಕಾರಿ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಜನರು ಒತ್ತಾಯಿಸಿದ್ದಾರೆ. ಇನ್ನು ಮುಂದೆ ಇಂತಹ ಘಟನೆ ರಾಜ್ಯದಲ್ಲಿ ನಡೆಯಬಾರದು, ಹಾಗೂ ಈ ಹಿಂದೆ ನಡೆದ ಎಲ್ಲ ಕೃತ್ಯಗಳ ಬಗ್ಗೆ ಮರುಪರೀಶಿಲನೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ