ಗುವಾಹಟಿ: ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ತನ್ನ ವಿರುದ್ಧ ರಚನೆಗೊಂಡಿರುವ ಮಹಾಮೈತ್ರಿಕೂಟವನ್ನು ಮಣಿಸಲು ಭರದ ಸಿದ್ಧತೆ ನಡೆಸಿರುವ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದೆ. ನಿನ್ನೆ ರಾತ್ರಿ ಪ್ರಧಾನಿ ನರೇಂದ್ರ ಮೊದಿ ನೇತೃತ್ವದ ಸಭೆಯಲ್ಲಿ ಪಟ್ಟಿಯನ್ನು ಅಂತಿಮಗೊಳಿಸಲಾಗಿದ್ದು, 126 ಕ್ಷೇತ್ರಗಳಲ್ಲಿ 92 ಕ್ಷೇತ್ರಗಳಲ್ಲಿ ಮಾತ್ರ ಬಿಜೆಪಿ ಸ್ಪರ್ಧಿಸಲಿದೆ. ಎನ್ಡಿಎ ಮೈತ್ರಿಪಕ್ಷ ಅಸ್ಸಾಂ ಗಣ ಪರಿಷತ್ ಸ್ಪರ್ಧಿಸಲಿದ್ದು,ಬಿಜೆಪಿಯ ಇನ್ನೋರ್ವ ದೋಸ್ತ ಯುಪಿಪಿಎಲ್ 8 ಕ್ಷೇತ್ರಗಳನ್ನು ತನ್ನ ಹುರಿಯಾಳುಗಳು ಸ್ಪರ್ಧೆಗೆ ಒಡ್ಡಲಿದೆ.
ತಾನೇನೂ ಕಡಿಮೆಯಿಲ್ಲ ಎಂಬಂತೆ ಚುನಾವಣೆಗೆ ತಯಾರಿ ನಡೆಸಿರುವ ಕಾಂಗ್ರೆಸ್, ತನ್ನ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಸರ್ಕಾರಿ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ನೀಡುವುದಾಗಿ ಘೋಷಿಸಿದೆ.
ಬಿಜೆಪಿಗಿಲ್ಲ ಬಿಪಿಎಫ್ ಬಲ
ಅಸ್ಸಾಂನ ಪ್ರಮುಖ ಪಕ್ಷ ಬೋಡೋ ಲ್ಯಾಂಡ್ ಪೀಪಲ್ಸ್ ಫ್ರಂಟ್ ಅಥವಾ ಬಿಪಿಎಫ್ ಬಿಜೆಪಿ ಮೈತ್ರಿ ತೊರೆದು ಕಾಂಗ್ರೆಸ್ ಜತೆ ಕೈ ಜೋಡಿಸುವ ಘೋಷಣೆ ಮಾಡಿದೆ.ಈ ಬಗ್ಗೆ ಬಿಪಿಎಫ್ ನಾಯಕ ಹಗ್ರಾಮ ಮೊಹಿಲಾರಿ ಫೇಸ್ಬುಕ್ನಲ್ಲಿ ಪೋಸ್ಟ್ ಒಂದನ್ನು ಹಾಕಿದ್ದಾರೆ. ಶಾಂತಿ, ಐಕ್ಯತೆ ಮತ್ತು ಅಭಿವೃದ್ಧಿ ಕೆಲಸ ಮಾಡಲು ಮತ್ತು ಅಸ್ಸಾಂಅನ್ನು ಭ್ರಷ್ಟಾಚಾರದಿಂದ ಮುಕ್ತ ಮಾಡಿ ಸ್ಥಿರವಾದ ಸರ್ಕಾರವನ್ನು ತರಲು, ಬೊಡೋ ಲ್ಯಾಂಡ್ ಪೀಪಲ್ಸ್ ಫ್ರಂಟ್ ಕಾಂಗ್ರೆಸ್ ನೇತೃತ್ವದ ಮಹಾಜತ್ ಮೈತ್ರಿಕೂಟದೊಂದಿಗೆ ಕೈಜೋಡಿಸಲು ನಿರ್ಧರಿಸಿದೆ. ಬಿಪಿಎಫ್ ಇನ್ನು ಮುಂದೆ ಬಿಜೆಪಿಯೊಂದಿಗೆ ಸ್ನೇಹ ಅಥವಾ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಬರೆದುಕೊಂಡಿದ್ದಾರೆ.
2005ರಲ್ಲಿ ಬೋಡೋ ಲ್ಯಾಂಡ್ ಪೀಪಲ್ಸ್ ಫ್ರಂಟ್ ಸ್ಥಾಪನೆಗೊಂಡಿತ್ತು. ಇದೊಂದು ಸ್ಥಳೀಯ ಪಕ್ಷವಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಪಿಎಫ್ 126 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ಬಿಪಿಎಫ್ ಗೆದ್ದಿತ್ತು. ನಂತರ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿತ್ತು.
ಅಸ್ಸಾಂನಲ್ಲಿ ಒಟ್ಟು 3 ಹಂತಗಳಲ್ಲಿ ಮತದಾನ ನಡೆಯಲಿದೆ. ಕೇರಳದಲ್ಲಿ 14 ಜಿಲ್ಲೆ, 148 ಕ್ಷೇತ್ರಗಳಲ್ಲಿ ಒಂದೇ ಬಾರಿ ಚುನಾವಣೆ ನಡೆಯಲಿದೆ. ಚುನಾವಣಾ ಆಯೋಗದ ಹಿರಿಯ ಅಧಿಕಾರಿಗಳು ಚುನಾವಣೆ ನಡೆಯಲಿರುವ ಎಲ್ಲ ರಾಜ್ಯಗಳಿಗೆ ಕಳೆದ ಜನವರಿ-ಫೆಬ್ರುವರಿಯಲ್ಲಿಯೇ ಭೇಟಿ ನೀಡಿದ್ದರು. ಅಗತ್ಯ ಸಿದ್ಧತೆ, ಸಮಾಲೋಚನೆಗಳನ್ನು ಆರಂಭಿಸಿದ್ದೇವೆ.ರಾಜಕೀಯ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ನಾವು ಮುಂದುವರಿಯುತ್ತೇವೆ. ರಾಜಕೀಯ ಪಕ್ಷಗಳ ಸಹಕಾರದೊಂದಿಗೆ ನ್ಯಾಯಸಮ್ಮತ ಚುನಾವಣೆ ನಡೆಸುವುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು.
ಪ್ರಚಾರಕ್ಕೆ ಹೊಸ ನಿಯಮಗಳು
1) ಮನೆಮನೆ ಪ್ರಚಾರಕ್ಕೆ ಅಭ್ಯರ್ಥಿ ಸೇರಿ ಕೇವಲ ಐವರು ತೆರಳಬಹುದು.
2) ಬಹಿರಂಗ ಸಭೆಗಳಿಗೆ ಅವಕಾಶವಿದೆ. ಸ್ಥಳೀಯ ಮಟ್ಟದಲ್ಲಿ ಅಧಿಕಾರಿಗಳು ನಿಯಂತ್ರಣ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ.
3) ಬಹಿರಂಗ ಸಭೆಗಳಿಗೆ ಮೈದಾನಗಳನ್ನು ಮೊದಲೇ ಗುರುತಿಸಿ ಅಧಿಕಾರಿಗಳು ಪ್ರಕಟಿಸುತ್ತಾರೆ.
ಇದನ್ನೂ ಓದಿ: Photo Gallery: ಅಸ್ಸಾಂ ಚಹಾ ತೋಟದಲ್ಲಿ ಪ್ರಿಯಾಂಕಾ ಗಾಂಧಿ; ಕಾರ್ಮಿಕರ ಕಷ್ಟ-ಸುಖ ಅರಿತ ಕಾಂಗ್ರೆಸ್ ನಾಯಕಿ
ಅಸ್ಸಾಂ ಟೀ ತೋಟದಲ್ಲಿ ಕಾರ್ಮಿಕರ ಜತೆ ಪ್ರಿಯಾಂಕಾ ಗಾಂಧಿ ಝುಮುರ್ ನೃತ್ಯ
Published On - 5:53 pm, Fri, 5 March 21