Assam Flood: ಅಸ್ಸಾಂನಲ್ಲಿ ಭಾರೀ ಪ್ರವಾಹ; 7 ಮಂದಿ ಸಾವು, 2 ಲಕ್ಷಕ್ಕೂ ಹೆಚ್ಚು ಜನರಿಗೆ ಸಂಕಷ್ಟ

| Updated By: ಸುಷ್ಮಾ ಚಕ್ರೆ

Updated on: May 17, 2022 | 7:42 PM

Assam Rains: ಅಸ್ಸಾಂ ರಾಜ್ಯದಲ್ಲಿ ಪ್ರವಾಹದಿಂದಾಗಿ ಕಳೆದ 24 ಗಂಟೆಗಳಲ್ಲಿ 20 ಜಿಲ್ಲೆಗಳಲ್ಲಿ ಸುಮಾರು 1.97 ಲಕ್ಷ ಜನರು ತೊಂದರೆಗೀಡಾಗಿದ್ದಾರೆ. ಪ್ರವಾಹ ಮತ್ತು ಭೂಕುಸಿತದಲ್ಲಿ ಸತ್ತವರ ಸಂಖ್ಯೆ 7ಕ್ಕೆ ಏರಿದೆ.

Assam Flood: ಅಸ್ಸಾಂನಲ್ಲಿ ಭಾರೀ ಪ್ರವಾಹ; 7 ಮಂದಿ ಸಾವು, 2 ಲಕ್ಷಕ್ಕೂ ಹೆಚ್ಚು ಜನರಿಗೆ ಸಂಕಷ್ಟ
ಅಸ್ಸಾಂ ಪ್ರವಾಹ
Image Credit source: ANI
Follow us on

ಅಸ್ಸಾಂ: ಇಂದು ಸುರಿದ ಭಾರೀ ಮಳೆಯಿಂದ ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ತೀವ್ರವಾಗಿ ಮುಂದುವರಿದಿದ್ದು, ಅಸ್ಸಾಂನ 24 ಜಿಲ್ಲೆಗಳಲ್ಲಿ 2,02,385 ಜನರು ತೊಂದರೆಗೊಳಗಾಗಿದ್ದಾರೆ. ಅಸ್ಸಾಂ (Assam Floods) ರಾಜ್ಯದಲ್ಲಿ ಪ್ರವಾಹದಿಂದಾಗಿ ಒಟ್ಟು 811 ಗ್ರಾಮಗಳು ಹಾನಿಗೊಳಗಾಗಿದ್ದರೆ, 1,277 ಮನೆಗಳು ಸಂಪೂರ್ಣವಾಗಿ ಹಾನಿಗೊಳಗಾಗಿವೆ ಮತ್ತು 5,262 ಭಾಗಶಃ ಹಾನಿಗೊಳಗಾಗಿವೆ. ಪ್ರವಾಹದಿಂದಾಗಿ ಕಳೆದ 24 ಗಂಟೆಗಳಲ್ಲಿ ರಾಜ್ಯದ 20 ಜಿಲ್ಲೆಗಳಲ್ಲಿ ಸುಮಾರು 2 ಲಕ್ಷ ಜನರು ತೊಂದರೆಗೀಡಾಗಿದ್ದಾರೆ. ಅಸ್ಸಾಂನ (Assam Rain) ನಾಗಾಂವ್ ಜಿಲ್ಲೆಯ ಕಂಪುರ್ ಪ್ರದೇಶದಲ್ಲಿ ಪ್ರವಾಹದ ನೀರು ಹೊಸ ಪ್ರದೇಶಗಳನ್ನು ಮುಳುಗಿಸಿತು. ಈ ಪ್ರದೇಶದಲ್ಲಿ ಸುಮಾರು 16,000 ಜನರು ತೊಂದರೆಗೊಳಗಾಗಿದ್ದಾರೆ. ಪ್ರವಾಹದ ನೀರು ಮನೆಗಳಿಗೆ ನುಗ್ಗಿದ ನಂತರ ಅನೇಕ ಜನರು ತಮ್ಮ ಮನೆಗಳನ್ನು ತೊರೆದು ಶಾಲೆಗಳು ಮತ್ತು ಎತ್ತರದ ಪ್ರದೇಶಗಳಲ್ಲಿ ಆಶ್ರಯ ಪಡೆದಿದ್ದಾರೆ.

ಬ್ರಹ್ಮಪುತ್ರ ನದಿಯ ನೀರಿನ ಮಟ್ಟವು ಜೋರ್ಹತ್ ಜಿಲ್ಲೆಯ ನೇಮತಿಘಾಟ್ ಮತ್ತು ನಾಗಾಂವ್ ಜಿಲ್ಲೆಯ ಕಂಪುರ್ ಪ್ರದೇಶದ ಕೊಪಿಲಿ ನದಿಯಲ್ಲಿ ಅಪಾಯದ ಮಟ್ಟಕ್ಕಿಂತ ಹೆಚ್ಚು ಹರಿಯುತ್ತಿದೆ. ನಾಗಾಂವ್ ಜಿಲ್ಲೆಯ ಕಂಪುರ್ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ಚಾಲ್ತಿಯಲ್ಲಿರುವ ಕಾರಣ ಸಾಮಾನ್ಯ ಜೀವನವು ಅಸ್ತವ್ಯಸ್ತವಾಗಿದೆ. ಪ್ರವಾಹದಿಂದ ಕ್ಯಾಚಾರ್ ಜಿಲ್ಲೆಯಲ್ಲಿ ಇನ್ನೂ ಇಬ್ಬರು ಸಾವನ್ನಪ್ಪಿದ್ದು, ಅಸ್ಸಾಂನಲ್ಲಿ ನಡೆಯುತ್ತಿರುವ ಪೂರ್ವ ಮಾನ್ಸೂನ್ ಪ್ರವಾಹ ಮತ್ತು ಭೂಕುಸಿತದಲ್ಲಿ ಸತ್ತವರ ಸಂಖ್ಯೆ 7ಕ್ಕೆ ಏರಿದೆ. ಏಪ್ರಿಲ್ 6ರಿಂದ 33 ಜಿಲ್ಲೆಗಳ ಪೈಕಿ 24 ಜಿಲ್ಲೆಗಳಲ್ಲಿ ಇದುವರೆಗೆ 2 ಲಕ್ಷಕ್ಕೂ ಹೆಚ್ಚು ಜನರು ತೊಂದರೆಗೊಳಗಾಗಿದ್ದಾರೆ. ಪ್ರಸ್ತುತ 20 ಜಿಲ್ಲೆಗಳು ಜಲಾವೃತವಾಗಿವೆ.

ಇದನ್ನೂ ಓದಿ
ಕಣಿವೆ ರಾಜ್ಯದಲ್ಲಿ ಮತ್ತೆ ಹತ್ಯೆಗೆ ಕಾರಣವಾಯ್ತಾ ಕಾಶ್ಮೀರ್ ಫೈಲ್ಸ್​ ಸಿನಿಮಾ?; ಕಾಶ್ಮೀರಿ ಪಂಡಿತರು ಹೇಳೋದೇನು?
Viral News: ಕೆಟ್ಟ ಕನಸಿಗೆ ಹೆದರಿ ಕದ್ದ ದೇವರ ವಿಗ್ರಹಗಳನ್ನು ವಾಪಾಸ್ ತಂದಿಟ್ಟ ಕಳ್ಳರು; ಅಂಥದ್ದೇನಾಯ್ತು?
Karnataka Rain: ಇನ್ನೂ 4 ದಿನ ಕರ್ನಾಟಕದಲ್ಲಿ ಭಾರೀ ಮಳೆ; ಮೇ 18ಕ್ಕೆ ಕರಾವಳಿ, ಮಲೆನಾಡಿನಲ್ಲಿ ರೆಡ್ ಅಲರ್ಟ್​ ಘೋಷಣೆ
Karnataka Rain: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇನ್ನೂ 3 ದಿನ ಗುಡುಗು ಸಹಿತ ಮಳೆ

ಇದನ್ನೂ ಓದಿ: ದಕ್ಷಿಣ ಆಫ್ರಿಕಾದಲ್ಲಿ ಪ್ರವಾಹ: 300ಕ್ಕೂ ಹೆಚ್ಚು ಮಂದಿ ಸಾವು, ಆಸ್ತಿಪಾಸ್ತಿ ನಷ್ಟ

ಅಧಿಕಾರಿಗಳ ಪ್ರಕಾರ, ಪ್ರವಾಹ ಮತ್ತು ಭೂಕುಸಿತದಿಂದಾಗಿ ಕ್ಯಾಚಾರ್ ಜಿಲ್ಲೆಯಲ್ಲಿ 6 ಜನರು ನಾಪತ್ತೆಯಾಗಿದ್ದಾರೆ. 24 ಜಿಲ್ಲೆಗಳ ಅಡಿಯಲ್ಲಿ 811 ಹಳ್ಳಿಗಳಲ್ಲಿ ಕನಿಷ್ಠ 2,02,385 ಜನರು ತೊಂದರೆಗೊಳಗಾಗಿದ್ದಾರೆ. ಸುಮಾರು 6,540 ಮನೆಗಳು ಭಾಗಶಃ ಮತ್ತು ಸಂಪೂರ್ಣವಾಗಿ ಹಾನಿಗೊಳಗಾಗಿವೆ. ಜಿಲ್ಲಾಡಳಿತಗಳು 27 ಪರಿಹಾರ ವಿತರಣಾ ಕೇಂದ್ರಗಳನ್ನು ತೆರೆದಿದ್ದರೂ ಸಹ 33,300ಕ್ಕೂ ಹೆಚ್ಚು ಜನರು 72 ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ.

ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ವರದಿಯ ಪ್ರಕಾರ, ಇಲ್ಲಿಯವರೆಗೆ 24 ಜಿಲ್ಲೆಗಳಾದ ಬಜಾಲಿ, ಬಕ್ಸಾ, ಬಿಸ್ವನಾಥ್, ಬೊಂಗೈಗಾಂವ್, ಕ್ಯಾಚಾರ್, ಚರೈಡಿಯೊ, ದರ್ರಾಂಗ್, ಧೇಮಾಜಿ, ಧುಬ್ರಿ, ದಿಬ್ರುಗಢ್, ದಿಮಾ-ಹಸಾವೊ, ಹೊಜೈ, ಕಾಮ್ರೂಪ್, ಕರ್ಬಿ ಅಂಗ್ಲಾಂಗ್ ವೆಸ್ಟ್, ಕೊಕ್ರರಾಜ್ , ಲಖಿಂಪುರ, ಮಜುಲಿ, ನಾಗಾಂವ್, ನಲ್ಬರಿ, ಸೋನಿತ್‌ಪುರ್, ತಮುಲ್‌ಪುರ್, ಉದಲ್‌ಗುರಿ, ಜೋರ್ಹತ್, ಕಮ್ರೂಪ್ ಮೆಟ್ರೋ ರಾಜ್ಯದಲ್ಲಿ ಪ್ರವಾಹದಿಂದ ತೊಂದರೆಯಾಗಿದೆ.

ಇದನ್ನೂ ಓದಿ: Karnataka Rain: ಇನ್ನೂ 4 ದಿನ ಕರ್ನಾಟಕದಲ್ಲಿ ಭಾರೀ ಮಳೆ; ಮೇ 18ಕ್ಕೆ ಕರಾವಳಿ, ಮಲೆನಾಡಿನಲ್ಲಿ ರೆಡ್ ಅಲರ್ಟ್​ ಘೋಷಣೆ

ಅಸ್ಸಾಂನಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇದರಿಂದ ಭಾರತೀಯ ರೈಲ್ವೆ 29 ರೈಲುಗಳನ್ನು ರದ್ದುಗೊಳಿಸಿದೆ. ಅಸ್ಸಾಂನ 20 ಜಿಲ್ಲೆಗಳಲ್ಲಿ ಸುಮಾರು 2 ಲಕ್ಷ ಜನರು ಪ್ರವಾಹದಿಂದ ಸಂತ್ರಸ್ತರಾಗಿದ್ದಾರೆ. ನಿರಂತರ ಮಳೆಯಿಂದ ಉಂಟಾದ ಭೂಕುಸಿತದ ನಂತರ ದಿಮಾ ಹಸಾವೊ ಗುಡ್ಡಗಾಡು ಜಿಲ್ಲೆಯು ರಾಜ್ಯದ ಉಳಿದ ಭಾಗಗಳಿಂದ ಸಂಪರ್ಕ ಕಡಿತಗೊಂಡಿದೆ. ಕಳೆದ ಎರಡು ದಿನಗಳಿಂದ ಭೂಕುಸಿತ ಮತ್ತು ಹಳಿಗಳ ಮೇಲೆ ನೀರು ನಿಂತಿದ್ದರಿಂದ ದಿಮಾ ಹಸಾವೊದಲ್ಲಿ ಲುಮ್‌ಡಿಂಗ್-ಬದರ್‌ಪುರ ವಿಭಾಗದಲ್ಲಿ ಸಿಲುಕಿಕೊಂಡಿದ್ದ ಎರಡು ರೈಲುಗಳ ಸುಮಾರು 2,800 ಪ್ರಯಾಣಿಕರನ್ನು ಸ್ಥಳಾಂತರಿಸುವ ಕಾರ್ಯ ಸೋಮವಾರ ಪೂರ್ಣಗೊಂಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ