AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assam Flood: ಅಸ್ಸಾಂ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 190ಕ್ಕೆ ಏರಿಕೆ; 40,000 ಮನೆಗಳಿಗೆ ಹಾನಿಯಾಗಿದೆ ಎಂದ ಸಿಎಂ

ಭಾರೀ ಪ್ರವಾಹದಿಂದಾಗಿ ಅಸ್ಸಾಂನಲ್ಲಿ 30,000ರಿಂದ 40,000 ಮನೆಗಳಿಗೆ ಹಾನಿಯಾಗಿದೆ ಎಂದು ಮುಖ್ಯಮಂತ್ರಿ ಹಿಮಾಂತ್ ಬಿಸ್ವ ಶರ್ಮಾ ಮಾಹಿತಿ ನೀಡಿದ್ದಾರೆ.

Assam Flood: ಅಸ್ಸಾಂ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 190ಕ್ಕೆ ಏರಿಕೆ; 40,000 ಮನೆಗಳಿಗೆ ಹಾನಿಯಾಗಿದೆ ಎಂದ ಸಿಎಂ
ಅಸ್ಸಾಂನಲ್ಲಿ ಪ್ರವಾಹImage Credit source: News18
TV9 Web
| Updated By: ಸುಷ್ಮಾ ಚಕ್ರೆ|

Updated on: Jul 09, 2022 | 3:38 PM

Share

ಅಸ್ಸಾಂ: ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಿದೆ. ಮಳೆ, ಪ್ರವಾಹ, ಭೂಕುಸಿತದಿಂದ ಅಸ್ಸಾಂ (Assam Floods) ರಾಜ್ಯದಲ್ಲಿ ಈ ವರ್ಷ ಮೃತಪಟ್ಟವರ ಸಂಖ್ಯೆ 190ಕ್ಕೆ ಏರಿಕೆಯಾಗಿದೆ. ಅಸ್ಸಾಂನ 14 ಜಿಲ್ಲೆಗಳ 28 ಕಂದಾಯ ವೃತ್ತಗಳು ಮತ್ತು 620 ಗ್ರಾಮಗಳು ಪ್ರವಾಹದ ಪ್ರಭಾವದಿಂದ ತತ್ತರಿಸುತ್ತಲೇ ಇವೆ. ಅಸ್ಸಾಂನಲ್ಲಿ 8,88,177 ಜನರು ಪ್ರವಾಹದಿಂದ ಸಂಕಷ್ಟಕ್ಕೀಡಾಗಿದ್ದಾರೆ. 5.63 ಲಕ್ಷಕ್ಕೂ ಹೆಚ್ಚು ಜನರು ನಿರಾಶ್ರಿತ ಕೇಂದ್ರದಲ್ಲಿ ಆಶ್ರಯ ಪಡೆದಿದ್ದಾರೆ.

ಇತ್ತೀಚಿನ ಭಾರೀ ಪ್ರವಾಹದಿಂದಾಗಿ ಅಸ್ಸಾಂನಲ್ಲಿ 30,000ರಿಂದ 40,000 ಮನೆಗಳಿಗೆ ಹಾನಿಯಾಗಿದೆ ಎಂದು ಮುಖ್ಯಮಂತ್ರಿ ಹಿಮಾಂತ್ ಬಿಸ್ವ ಶರ್ಮಾ ಮಾಹಿತಿ ನೀಡಿದ್ದಾರೆ. ಅವರು ಸಂತ್ರಸ್ತ ಜನರಿಗೆ ಸಹಾಯ ಮಾಡಲು ಎನ್‌ಡಿಆರ್‌ಎಫ್‌ನಿಂದ ಮುಂಗಡ ನಿಧಿಯನ್ನು ಕೋರಿದ್ದಾರೆ. ಶುಕ್ರವಾರ ಸಂಜೆ ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಹಿಮಾಂತ್ ಬಿಸ್ವ ಶರ್ಮಾ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಈ ವಿಷಯ ತಿಳಿಸಿದ್ದು, ಕೇಂದ್ರದ ನೆರವು ಕೋರಿದ್ದಾರೆ.

ಇದನ್ನೂ ಓದಿ
Image
Viral News: ಕೆಟ್ಟ ಕನಸಿಗೆ ಹೆದರಿ ಕದ್ದ ದೇವರ ವಿಗ್ರಹಗಳನ್ನು ವಾಪಾಸ್ ತಂದಿಟ್ಟ ಕಳ್ಳರು; ಅಂಥದ್ದೇನಾಯ್ತು?
Image
Vivek Agnihotri: ‘ದಿ ಕಾಶ್ಮೀರ್ ಫೈಲ್ಸ್’ ಕಾಲ್ಪನಿಕ ಕತೆ ಎಂದ ವಿಕಿಪೀಡಿಯಾ ಬರಹ; ವಿವೇಕ್ ಅಗ್ನಿಹೋತ್ರಿ ತೀವ್ರ ಆಕ್ಷೇಪ
Image
ಹೊರಬಿತ್ತು ‘ದಿ ಕಾಶ್ಮೀರ್ ಫೈಲ್ಸ್’ ಒಟಿಟಿ ರಿಲೀಸ್ ದಿನಾಂಕ; ಇಲ್ಲಿದೆ ವಿವರ

ಇದನ್ನೂ ಓದಿ: Assam Flood: ಅಸ್ಸಾಂನಲ್ಲಿ ಪ್ರವಾಹದ ಮಟ್ಟ ಕೊಂಚ ಇಳಿಕೆ; 127 ಜನ ಸಾವು, ಸಂಕಷ್ಟದಲ್ಲಿ 22 ಲಕ್ಷ ಜನ

ಪ್ರವಾಹದಿಂದ ಸುಮಾರು 30,000ರಿಂದ 40,000 ಮನೆಗಳಿಗೆ ಹಾನಿಯಾಗಿದೆ ಎಂದು ಮುಖ್ಯಮಂತ್ರಿ ಹಿಮಾಥ್ ಬಿಸ್ವ ಶರ್ಮ ಗೃಹ ಸಚಿವರಿಗೆ ವಿವರಿಸಿದ್ದಾರೆ. ಮನೆಗಳು ತೀವ್ರವಾಗಿ ಅಥವಾ ಸಂಪೂರ್ಣವಾಗಿ ಹಾನಿಗೊಳಗಾದ ಪ್ರವಾಹ ಪೀಡಿತ ಜನರ ಪುನರ್ವಸತಿಗಾಗಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿಯಿಂದ (ಎನ್‌ಡಿಆರ್‌ಎಫ್) ಮುಂಗಡ ಮೊತ್ತವನ್ನು ಬಿಡುಗಡೆ ಮಾಡುವಂತೆ ಅವರು ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ.

ಎನ್‌ಡಿಆರ್‌ಎಫ್‌ನಿಂದ ಮುಂಗಡ ನಿಧಿಯನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಅವರ ಮನವಿಯನ್ನು ಕೇಂದ್ರ ಗೃಹ ಸಚಿವಾಲಯವು ಪರಿಗಣಿಸಿದೆ ಎಂದು ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಹಿಮಾಂತ್ ಬಿಸ್ವ ಶರ್ಮ ಹೇಳಿದ್ದಾರೆ.

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!