ಅಸ್ಸಾಂ: ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಿದೆ. ಮಳೆ, ಪ್ರವಾಹ, ಭೂಕುಸಿತದಿಂದ ಅಸ್ಸಾಂ (Assam Floods) ರಾಜ್ಯದಲ್ಲಿ ಈ ವರ್ಷ ಮೃತಪಟ್ಟವರ ಸಂಖ್ಯೆ 190ಕ್ಕೆ ಏರಿಕೆಯಾಗಿದೆ. ಅಸ್ಸಾಂನ 14 ಜಿಲ್ಲೆಗಳ 28 ಕಂದಾಯ ವೃತ್ತಗಳು ಮತ್ತು 620 ಗ್ರಾಮಗಳು ಪ್ರವಾಹದ ಪ್ರಭಾವದಿಂದ ತತ್ತರಿಸುತ್ತಲೇ ಇವೆ. ಅಸ್ಸಾಂನಲ್ಲಿ 8,88,177 ಜನರು ಪ್ರವಾಹದಿಂದ ಸಂಕಷ್ಟಕ್ಕೀಡಾಗಿದ್ದಾರೆ. 5.63 ಲಕ್ಷಕ್ಕೂ ಹೆಚ್ಚು ಜನರು ನಿರಾಶ್ರಿತ ಕೇಂದ್ರದಲ್ಲಿ ಆಶ್ರಯ ಪಡೆದಿದ್ದಾರೆ.
ಇತ್ತೀಚಿನ ಭಾರೀ ಪ್ರವಾಹದಿಂದಾಗಿ ಅಸ್ಸಾಂನಲ್ಲಿ 30,000ರಿಂದ 40,000 ಮನೆಗಳಿಗೆ ಹಾನಿಯಾಗಿದೆ ಎಂದು ಮುಖ್ಯಮಂತ್ರಿ ಹಿಮಾಂತ್ ಬಿಸ್ವ ಶರ್ಮಾ ಮಾಹಿತಿ ನೀಡಿದ್ದಾರೆ. ಅವರು ಸಂತ್ರಸ್ತ ಜನರಿಗೆ ಸಹಾಯ ಮಾಡಲು ಎನ್‌ಡಿಆರ್‌ಎಫ್‌ನಿಂದ ಮುಂಗಡ ನಿಧಿಯನ್ನು ಕೋರಿದ್ದಾರೆ. ಶುಕ್ರವಾರ ಸಂಜೆ ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಹಿಮಾಂತ್ ಬಿಸ್ವ ಶರ್ಮಾ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಈ ವಿಷಯ ತಿಳಿಸಿದ್ದು, ಕೇಂದ್ರದ ನೆರವು ಕೋರಿದ್ದಾರೆ.
ಇದನ್ನೂ ಓದಿ: Assam Flood: ಅಸ್ಸಾಂನಲ್ಲಿ ಪ್ರವಾಹದ ಮಟ್ಟ ಕೊಂಚ ಇಳಿಕೆ; 127 ಜನ ಸಾವು, ಸಂಕಷ್ಟದಲ್ಲಿ 22 ಲಕ್ಷ ಜನ
ಪ್ರವಾಹದಿಂದ ಸುಮಾರು 30,000ರಿಂದ 40,000 ಮನೆಗಳಿಗೆ ಹಾನಿಯಾಗಿದೆ ಎಂದು ಮುಖ್ಯಮಂತ್ರಿ ಹಿಮಾಥ್ ಬಿಸ್ವ ಶರ್ಮ ಗೃಹ ಸಚಿವರಿಗೆ ವಿವರಿಸಿದ್ದಾರೆ. ಮನೆಗಳು ತೀವ್ರವಾಗಿ ಅಥವಾ ಸಂಪೂರ್ಣವಾಗಿ ಹಾನಿಗೊಳಗಾದ ಪ್ರವಾಹ ಪೀಡಿತ ಜನರ ಪುನರ್ವಸತಿಗಾಗಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿಯಿಂದ (ಎನ್‌ಡಿಆರ್‌ಎಫ್) ಮುಂಗಡ ಮೊತ್ತವನ್ನು ಬಿಡುಗಡೆ ಮಾಡುವಂತೆ ಅವರು ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ.
A moment captured from Rath Jatra celebration, yesterday. ?
Many localities like this, in Silchar are still under flood water since last 2 weeks.
Video via Gokul Sinha
#silcharunderwater #AssamFloods pic.twitter.com/wYv53P2UmP
— SilcharNow (@silcharNOW) July 2, 2022
ಎನ್‌ಡಿಆರ್‌ಎಫ್‌ನಿಂದ ಮುಂಗಡ ನಿಧಿಯನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಅವರ ಮನವಿಯನ್ನು ಕೇಂದ್ರ ಗೃಹ ಸಚಿವಾಲಯವು ಪರಿಗಣಿಸಿದೆ ಎಂದು ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಹಿಮಾಂತ್ ಬಿಸ್ವ ಶರ್ಮ ಹೇಳಿದ್ದಾರೆ.