Assam Flood: ಭೀಕರ ಪ್ರವಾಹದಿಂದ ದ್ವೀಪವಾಗಿದೆ ಅಸ್ಸಾಂ; ಮಳೆಯ ಹೊಡೆತಕ್ಕೆ 81 ಜನ ಸಾವು

ಪ್ರವಾಹ ಪೀಡಿತ ಅಸ್ಸಾಂನಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಇದುವರೆಗೆ 47 ಲಕ್ಷಕ್ಕೂ ಹೆಚ್ಚು ಜನರು ಸಂತ್ರಸ್ತರಾಗಿದ್ದಾರೆ. ಅಸ್ಸಾಂನಲ್ಲಿ ಸಾವಿನ ಸಂಖ್ಯೆ 81ಕ್ಕೆ ಏರಿಕೆಯಾಗಿದೆ.

Assam Flood: ಭೀಕರ ಪ್ರವಾಹದಿಂದ ದ್ವೀಪವಾಗಿದೆ ಅಸ್ಸಾಂ; ಮಳೆಯ ಹೊಡೆತಕ್ಕೆ 81 ಜನ ಸಾವು
ಅಸ್ಸಾಂನಲ್ಲಿ ಭಾರೀ ಪ್ರವಾಹದಿಂದ ಮುಳುಗಡೆಯಾದ ಊರುಗಳುImage Credit source: Twitter
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jun 21, 2022 | 2:34 PM

ಅಸ್ಸಾಂ: ಅಸ್ಸಾಂನಲ್ಲಿ (Assam Rains) ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಗೃಹ ಸಚಿವ ಅಮಿತ್ ಶಾ (Amit Shah) ಅಸ್ಸಾಂನ ಮುಖ್ಯಮಂತ್ರಿ ಹಿಮಾಂತ್ ಬಿಸ್ವ ಶರ್ಮ (Himanta Biswa Sarma) ಅವರಿಗೆ ಫೋನ್ ಮಾಡಿ ಪ್ರವಾಹದ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ನಿರಂತರ ಮಳೆಯ ನಡುವೆ ಕಳೆದ 24 ಗಂಟೆಗಳಲ್ಲಿ ಅಸ್ಸಾಂನಲ್ಲಿ ಪ್ರವಾಹದಿಂದಾಗಿ ಇಬ್ಬರು ಪೊಲೀಸರು ಸೇರಿದಂತೆ 10 ಮಂದಿ ಸಾವನ್ನಪ್ಪಿದ್ದಾರೆ. ಇದರಿಂದ ಅಸ್ಸಾಂನಲ್ಲಿ ಸಾವಿನ ಸಂಖ್ಯೆ 81ಕ್ಕೆ ಏರಿಕೆಯಾಗಿದೆ.

ಅಸ್ಸಾಂ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ರಾಜ್ಯದ ಎಲ್ಲಾ 34 ಜಿಲ್ಲೆಗಳು ಪ್ರವಾಹದ ಬಿಕ್ಕಟ್ಟಿಗೆ ಸಿಲುಕಿವೆ. ಕೊಪಿಲಿ ನದಿಯ ಪ್ರವಾಹದಲ್ಲಿ ಸಿಲುಕಿ ನಲುಗಿದ ಜನರನ್ನು ರಕ್ಷಿಸಲು ಯತ್ನಿಸುತ್ತಿದ್ದಾಗ ಒಬ್ಬ ಪೊಲೀಸ್ ಅಧಿಕಾರಿ ಮತ್ತು ಒಬ್ಬ ಕಾನ್‌ಸ್ಟೆಬಲ್ ಪ್ರವಾಹಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆ. ಅಸ್ಸಾಂನಲ್ಲಿ ನಡೆಯುತ್ತಿರುವ ಪ್ರವಾಹ ಮತ್ತು ಭೂಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 80 ದಾಟಿದೆ.

ಇದನ್ನೂ ಓದಿ
Image
Assam Flood: ಅಸ್ಸಾಂ, ಮೇಘಾಲಯದಲ್ಲಿ ಪ್ರವಾಹದಿಂದ 31 ಜನ ಸಾವು; ಚಿರಾಪುಂಜಿಯಲ್ಲಿ 82 ವರ್ಷದಲ್ಲೇ ದಾಖಲೆಯ ಮಳೆ
Image
Bengaluru Rain: ಸುರಿವ ಮಳೆಯನ್ನೂ ಲೆಕ್ಕಿಸದೆ ಬೆಂಗಳೂರಿನ ಟ್ರಾಫಿಕ್ ಪೊಲೀಸ್ ಮಾಡಿದ ಕೆಲಸಕ್ಕೆ ಭಾರೀ ಮೆಚ್ಚುಗೆ; ವಿಡಿಯೋ ವೈರಲ್
Image
Assam Flood: ಭಾರಿ ಪ್ರವಾಹಕ್ಕೆ ಸಿಲುಕಿ 6.80 ಲಕ್ಷ ಜನರ ಬದುಕು ಅಸ್ತವ್ಯಸ್ತ
Image
Assam Flood: ಪ್ರವಾಹಕ್ಕೆ ತುತ್ತಾದ ಆಸ್ಸಾಂನ 27 ಜಿಲ್ಲೆಗಳು, ಪ್ರವಾಹಕ್ಕೆ ಸಿಲುಕಿ 11 ಸಾವು, 80,298 ಜನರನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರ

ಪ್ರವಾಹ ಪೀಡಿತ ಅಸ್ಸಾಂನಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಇದುವರೆಗೆ 47 ಲಕ್ಷಕ್ಕೂ ಹೆಚ್ಚು ಜನರು ಸಂತ್ರಸ್ತರಾಗಿದ್ದಾರೆ. ಸೋಮವಾರ ಏಳು ಮಂದಿ ನಾಪತ್ತೆಯಾಗಿದ್ದು, 2.3 ಲಕ್ಷ ಮಂದಿ ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ. ಒಟ್ಟಾರೆಯಾಗಿ, ಎಲ್ಲಾ ಪೀಡಿತ ಪ್ರದೇಶಗಳಲ್ಲಿ 810 ಪರಿಹಾರ ಶಿಬಿರಗಳು ಮತ್ತು 615 ಪರಿಹಾರ ವಿತರಣಾ ಕೇಂದ್ರಗಳನ್ನು ತೆರೆಯಲಾಗಿದೆ.

ಇದನ್ನೂ ಓದಿ: Assam Flood: ಅಸ್ಸಾಂನ ಪ್ರವಾಹದಲ್ಲಿ ಸಿಲುಕಿದವರ ರಕ್ಷಣೆಗೆ ಹೋದ ಇಬ್ಬರು ಪೊಲೀಸರು ನೀರುಪಾಲು; ಮೃತದೇಹಗಳು ಪತ್ತೆ

ಅಸ್ಸಾಂ ಪ್ರವಾಹದಿಂದ ತೊಂದರೆಗೀಡಾಗಿರುವ 47 ಲಕ್ಷ ಜನರಲ್ಲಿ ಅರ್ಧದಷ್ಟು ಜನರು ನಾಲ್ಕು ಪಶ್ಚಿಮ ಜಿಲ್ಲೆಗಳಾದ ಬಾರ್ಪೇಟಾ, ಬಕ್ಸಾ, ಗೋಲ್ಪಾರಾ ಮತ್ತು ಕಾಮ್ರೂಪ್‌ಗೆ ಸೇರಿದವರು. ಬಾರ್ಪೇಟಾದ ಒಟ್ಟು ಪ್ರದೇಶದ ಸುಮಾರು ಶೇ. 21ರಷ್ಟು ಪ್ರದೇಶವು ಪ್ರವಾಹದಲ್ಲಿ ಮುಳುಗಡೆಯಾಗಿದೆ. ಬ್ರಹ್ಮಪುತ್ರ, ಕೊಪಿಲಿ, ಬೇಕಿ, ಪಗ್ಲಾಡಿಯಾ, ಪುತಿಮರಿ ಎಂಬ ಐದು ನದಿಗಳಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಒಟ್ಟು 1,13,485.37 ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದ್ದು, 5,000ಕ್ಕೂ ಹೆಚ್ಚು ಹೆಕ್ಟೇರ್ ಜಮೀನು ಕೊಚ್ಚಿಹೋಗಿದೆ. ಅಸ್ಸಾಂ ರಾಜ್ಯದಲ್ಲಿನ ಕಠೋರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರೊಂದಿಗೆ ಮಾತನಾಡಿದ್ದಾರೆ. ಭಾರೀ ಮಳೆಯಿಂದಾಗಿ ಪ್ರವಾಹಕ್ಕೆ ಸಾಕ್ಷಿಯಾಗಿರುವ ಅಸ್ಸಾಂ ಮತ್ತು ಮೇಘಾಲಯದ ಜನರೊಂದಿಗೆ ಸರ್ಕಾರ ದೃಢವಾಗಿ ನಿಂತಿದೆ ಎಂದು ಗೃಹ ಸಚಿವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:33 pm, Tue, 21 June 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್