AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assam: ಪಶ್ಚಿಮ ಕರ್ಬಿ ಆಂಗ್ಲಾಂಗ್‌ನಿಂದ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಹಿಂಪಡೆದ ಅಸ್ಸಾಂ ಸರ್ಕಾರ

ಪಶ್ಚಿಮ ಕರ್ಬಿ ಅಂಗ್ಲಾಂಗ್ ಜಿಲ್ಲೆಯಿಂದ ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆ (ಎಎಫ್‌ಎಸ್‌ಪಿಎ) ಅಡಿಯಲ್ಲಿ 'ಡಿಸ್ಟರ್ಬ್ಡ್ ಏರಿಯಾ' ಘೋಷಣೆಯನ್ನು ಹಿಂತೆಗೆದುಕೊಂಡಿದೆ, ಏಕೆಂದರೆ ಅಲ್ಲಿನ ಪರಿಸ್ಥಿತಿ ಗಣನೀಯವಾಗಿ ಸುಧಾರಿಸಿದೆ ಎಂದು ಪಿಟಿಐ ವರದಿ ಮಾಡಿದೆ.

Assam: ಪಶ್ಚಿಮ ಕರ್ಬಿ ಆಂಗ್ಲಾಂಗ್‌ನಿಂದ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಹಿಂಪಡೆದ ಅಸ್ಸಾಂ ಸರ್ಕಾರ
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on: Oct 20, 2022 | 6:28 PM

Share

ಅಸ್ಸಾಂ: ಅಸ್ಸಾಂ (Assam) ಸರ್ಕಾರವು ಇಂದು (ಗುರುವಾರ) ಪಶ್ಚಿಮ ಕರ್ಬಿ ಅಂಗ್ಲಾಂಗ್ ಜಿಲ್ಲೆಯಿಂದ ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆ (AFSPA) ಅಡಿಯಲ್ಲಿ ‘ಡಿಸ್ಟರ್ಬ್ಡ್ ಏರಿಯಾ’ ಘೋಷಣೆಯನ್ನು ಹಿಂತೆಗೆದುಕೊಂಡಿದೆ, ಏಕೆಂದರೆ ಅಲ್ಲಿನ ಪರಿಸ್ಥಿತಿ ಗಣನೀಯವಾಗಿ ಸುಧಾರಿಸಿದೆ ಎಂದು ಪಿಟಿಐ ವರದಿ ಮಾಡಿದೆ. ಎಎಫ್‌ಎಸ್‌ಪಿಎ ಎಂಟು ಜಿಲ್ಲೆಗಳಲ್ಲಿ ಮತ್ತು ಒಂದು ಉಪವಿಭಾಗಕ್ಕೆ ಇನ್ನೂ ಆರು ತಿಂಗಳವರೆಗೆ ವಿಸ್ತರಿಸಲಾಯಿತು ಎಂದು ಗೃಹ ಮತ್ತು ರಾಜಕೀಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ನೀರಜ್ ವರ್ಮಾ ಆದೇಶದಲ್ಲಿ ತಿಳಿಸಿದ್ದಾರೆ. ಈ ಆದೇಶವು ಈಗಾಗಲೇ ಅಕ್ಟೋಬರ್ 1, 2022 ರಿಂದ ಜಾರಿಗೆ ಬಂದಿದೆ ಎಂದು ಸರ್ಕಾರದ ಅಧಿಸೂಚನೆ ತಿಳಿಸಿದೆ.

ಇತ್ತೀಚೆಗೆ ಅಸ್ಸಾಂನಲ್ಲಿನ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಭದ್ರತಾ ಸನ್ನಿವೇಶದ ಪರಿಶೀಲನೆಯು ರಾಜ್ಯದ ಪಶ್ಚಿಮ ಕರ್ಬಿ ಆಂಗ್ಲಾಂಗ್ ಜಿಲ್ಲೆಯಲ್ಲಿ ಪರಿಸ್ಥಿತಿ ಗಣನೀಯವಾಗಿ ಸುಧಾರಿಸಿದೆ ಎಂದು ಹೇಳಲಾಗಿದೆ. ಅಸ್ಸಾಂನ ರಾಜ್ಯಪಾಲರು ‘ಡಿಸ್ಟರ್ಬ್ಡ್ ಏರಿಯಾ’ ಘೋಷಣೆಯನ್ನು ಹಿಂಪಡೆಯಲು ಸಂತೋಷವಾಗುತ್ತಿದೆ ಎಂದು ಹೇಳಿದ್ದಾರೆ. ಪಶ್ಚಿಮ ಕರ್ಬಿ ಆಂಗ್ಲಾಂಗ್‌ನಿಂದ 01.10.2022 ರಿಂದ ಜಾರಿಗೆ ಬರುವಂತೆ ಆದೇಶದಲ್ಲಿ ಹೇಳಿದೆ. ತಿನ್ಸುಕಿಯಾ, ದಿಬ್ರುಗಢ್, ಚರೈಡಿಯೊ, ಶಿವಸಾಗರ್, ಜೋರ್ಹತ್, ಗೋಲಾಘಾಟ್, ಕರ್ಬಿ ಆಂಗ್ಲಾಂಗ್ ಮತ್ತು ದಿಮಾ ಹಸಾವೊ ಜಿಲ್ಲೆಗಳು ಸಂಘರ್ಷಗಳು ನಡೆಯುತ್ತಿತ್ತು. ಹಾಗೆಯೇ ಬರಾಕ್ ಕಣಿವೆಯ ಲಖಿಪುರದ ಕ್ಯಾಚಾರ್ ಉಪವಿಭಾಗವೂ ಸಂಘರ್ಷಗಳಿಗೆ ಕಾರಣವಾಗಿತ್ತು ಮತ್ತು ಈ ಪ್ರದೇಶ ನಕ್ಸಲ್ ಕಾರ್ಯಚರಣೆಗಳು ಹೆಚ್ಚಾಗಿತ್ತು ಎಂದು ಹೇಳಿತ್ತು ಈ ಕಾರಣಕ್ಕಾಗಿ ಈ ಪ್ರದೇಶದಲ್ಲಿ ಡಿಸ್ಟರ್ಬ್ಡ್ ಏರಿಯಾ ಎಂದು ಕರೆಯಲಾಗಿತ್ತು.

ಇದನ್ನು ಓದಿ: Supreme Court: ಪಟಾಕಿ ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳಲು ನಿರಾಕರಿಸಿದ ಸುಪ್ರೀಂ

ನವೆಂಬರ್ 1990ರಲ್ಲಿ ಅಸ್ಸಾಂನಲ್ಲಿ ಈ ಕಾಯ್ದೆಯನ್ನು ಜಾರಿಗೆ ತರಲಾಯಿತು ಮತ್ತು ಈ ಬಗ್ಗೆ ರಾಜ್ಯ ಸರ್ಕಾರ ಪರಿಶೀಲಿಸುತ್ತಿತ್ತು. ನಂತರ ಪ್ರತಿ ಈ ಕಾಯ್ದೆಯನ್ನು ಆರು ತಿಂಗಳಿಗೊಮ್ಮೆ ವಿಸ್ತರಿಸಲಾಗಿದೆ. AFSPA ಅಡಿಯಲ್ಲಿ, ಭದ್ರತಾ ಪಡೆಗಳು ಎಲ್ಲಿ ಬೇಕಾದರೂ ಕಾರ್ಯಾಚರಣೆ ನಡೆಸಬಹುದು ಮತ್ತು ವಾರಂಟ್ ಇಲ್ಲದೆ ಯಾರನ್ನಾದರೂ ಬಂಧಿಸಬಹುದು. ನಾಗರಿಕ ಸಮಾಜ ಸಂಘಟನೆಗಳು ಮತ್ತು ಮಾನವ ಹಕ್ಕುಗಳ ಕಾರ್ಯಕರ್ತರು ಸಶಸ್ತ್ರ ಪಡೆಗಳಿಂದ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಪ್ರತಿಪಾದಿಸಿ ಇಡೀ ಈಶಾನ್ಯದಿಂದ ಕಠಿಣ ಕಾನೂನನ್ನು ತೆಗೆದುಹಾಕಬೇಕೆಂದು ಒತ್ತಾಯಿಸಿದ್ದಾರೆ. ಡಿಸೆಂಬರ್ 4, 2021 ರಂದು ನಾಗಾಲ್ಯಾಂಡ್‌ನ ಸೋಮ ಜಿಲ್ಲೆಯಲ್ಲಿ ನಡೆದ ದಂಗೆ-ವಿರೋಧಿ ಕಾರ್ಯಾಚರಣೆ ಮತ್ತು ಪ್ರತೀಕಾರದ ಹಿಂಸಾಚಾರದಲ್ಲಿ ಭದ್ರತಾ ಪಡೆಗಳು 14 ನಾಗರಿಕರನ್ನು ಕೊಂದ ನಂತರ ಕಾಯ್ದೆಯನ್ನು ರದ್ದುಗೊಳಿಸುವ ಕರೆ ನೀಡಲಾಯಿತು.

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ