ಅಸ್ಸಾಂ: ಕ್ಯಾನ್ಸರ್‌ನಿಂದ ಪತ್ನಿ ಸಾವಿಗೀಡಾದ ಕೆಲವೇ ನಿಮಿಷಗಳಲ್ಲಿ ಐಪಿಎಸ್ ಅಧಿಕಾರಿ ಆತ್ಮಹತ್ಯೆ

|

Updated on: Jun 18, 2024 | 7:47 PM

ಅಸ್ಸಾಂನ ಪೊಲೀಸ್ ಮಹಾನಿರ್ದೇಶಕ ಜಿಪಿ ಸಿಂಗ್ ಅವರು ಅಧಿಕಾರಿಯ ಸಾವಿನ ಬಗ್ಗೆ ಮಾಹಿತಿ ನೀಡಿದ್ದು, ಚೇಟಿಯಾ ಅವರು ಕ್ಯಾನ್ಸರ್‌ನಿಂದಾಗಿ ಪತ್ನಿ ಸಾವನ್ನಪ್ಪಿದ ಕೆಲವೇ ನಿಮಿಷಗಳಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅವರು ಹೇಳಿದ್ದಾರೆ. ಅಧಿಕಾರಿಯ ದುರಂತ ಸಾವಿನಿಂದ ಇಡೀ ಅಸ್ಸಾಂ ಪೊಲೀಸ್ ಕುಟುಂಬ ತೀವ್ರ ದುಃಖದಲ್ಲಿದೆ ಎಂದು ಡಿಜಿಪಿ ಜಿಪಿ ಸಿಂಗ್ ಹೇಳಿದ್ದಾರೆ.

ಅಸ್ಸಾಂ: ಕ್ಯಾನ್ಸರ್‌ನಿಂದ ಪತ್ನಿ ಸಾವಿಗೀಡಾದ ಕೆಲವೇ ನಿಮಿಷಗಳಲ್ಲಿ ಐಪಿಎಸ್ ಅಧಿಕಾರಿ ಆತ್ಮಹತ್ಯೆ
ಶಿಲಾದಿತ್ಯ ಚೇಟಿಯಾ
Follow us on

ದೆಹಲಿ ಜೂನ್ 18: ಅಸ್ಸಾಂ (Assam) ಸರ್ಕಾರದಲ್ಲಿ ಗೃಹ ಮತ್ತು ರಾಜಕೀಯ ಇಲಾಖೆಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಭಾರತೀಯ ಪೊಲೀಸ್ ಸೇವೆಯ (IPS) ಹಿರಿಯ ಅಧಿಕಾರಿ ಶಿಲಾದಿತ್ಯ ಚೇಟಿಯಾ ಅವರು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯದ ಪೊಲೀಸರ ಪ್ರಕಾರ, ಆಸ್ಪತ್ರೆಯಲ್ಲಿ ತನ್ನ ಪತ್ನಿಯ ಸಾವಿನ ಸುದ್ದಿ ಕೇಳಿದ ಕೂಡಲೇ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಪತ್ನಿ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಅಸ್ಸಾಂನ ಪೊಲೀಸ್ ಮಹಾನಿರ್ದೇಶಕ ಜಿಪಿ ಸಿಂಗ್ ಅವರು ಅಧಿಕಾರಿಯ ಸಾವಿನ ಬಗ್ಗೆ ಮಾಹಿತಿ ನೀಡಿದ್ದು, ಚೇಟಿಯಾ ಅವರು ಕ್ಯಾನ್ಸರ್‌ನಿಂದಾಗಿ ಪತ್ನಿ ಸಾವನ್ನಪ್ಪಿದ ಕೆಲವೇ ನಿಮಿಷಗಳಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅವರು ಹೇಳಿದ್ದಾರೆ. ಅಧಿಕಾರಿಯ ದುರಂತ ಸಾವಿನಿಂದ ಇಡೀ ಅಸ್ಸಾಂ ಪೊಲೀಸ್ ಕುಟುಂಬ ತೀವ್ರ ದುಃಖದಲ್ಲಿದೆ ಎಂದು ಡಿಜಿಪಿ ಜಿಪಿ ಸಿಂಗ್ ಹೇಳಿದ್ದಾರೆ.

“ದುರದೃಷ್ಟಕರ ಘಟನೆಯೊಂದರಲ್ಲಿ, ಅಸ್ಸಾಂನ ಗೃಹ ಮತ್ತು ರಾಜಕೀಯ ಸರ್ಕಾರದ ಕಾರ್ಯದರ್ಶಿ ಶಿಲಾದಿತ್ಯ ಚೇಟಿಯಾ IPS 2009 RR ಅವರು ಇಂದು ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೈದ್ಯರು ದೀರ್ಘಕಾಲದಿಂದ ಕ್ಯಾನ್ಸರ್ ನೊಂದಿಗೆ ಹೋರಾಡುತ್ತಿದ್ದ ಅವರ ಪತ್ನಿಯ ಮರಣವನ್ನು ಘೋಷಿಸಿದ ಕೆಲವೇ ನಿಮಿಷಗಳ ನಂತರ ಅವರು ಈ ರೀತಿ ಮಾಡಿದ್ದು, ಇಡೀ ಅಸ್ಸಾಂ ಪೊಲೀಸ್ ಕುಟುಂಬ ತೀವ್ರ ದುಃಖದಲ್ಲಿದೆ ಎಂದು ಅಸ್ಸಾಂ ಪೊಲೀಸ್ ಮುಖ್ಯಸ್ಥರು ಹೇಳಿದ್ದಾರೆ.

ಅಸ್ಸಾಂ ಟ್ರಿಬ್ಯೂನ್ ಪ್ರಕಾರ, 2009 ರ ಭಾರತೀಯ ಪೊಲೀಸ್ ಸೇವೆಯ ಅಧಿಕಾರಿ ಶಿಲಾದಿತ್ಯ ಚೇಟಿಯಾ ಅವರು ಕಳೆದ ನಾಲ್ಕು ತಿಂಗಳುಗಳಿಂದ ರಜೆಯಲ್ಲಿದ್ದರು. ಅವರು ಪತ್ನಿಯ ಕಾಯಿಲೆಯಿಂದ ನೊಂದಿದ್ದರು ಎನ್ನಲಾಗುತ್ತಿದೆ

ಚೇಟಿಯಾ ಅವರನ್ನು ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಗಲೇ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು.

ಇದನ್ನೂ ಓದಿ: ಸ್ವಂತ ಪಕ್ಷದಿಂದಲೇ ಅವಮಾನ ಎದುರಿಸುತ್ತಿದ್ದೇನೆ; ಇಂಡಿಯಾ ಬಣದ ನಾಯಕರಿಗೆ ಸ್ವಾತಿ ಮಲಿವಾಲ್ ಪತ್ರ

ಅಸ್ಸಾಂ ಸರ್ಕಾರದಲ್ಲಿ ಕಾರ್ಯದರ್ಶಿಯಾಗುವ ಮೊದಲು, ಶಿಲಾದಿತ್ಯ ಚೇಟಿಯಾ ಅವರು ರಾಜ್ಯದ ಟಿನ್ಸುಕಿಯಾ ಮತ್ತು ಸೋನಿತ್‌ಪುರ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಎಸ್‌ಪಿ) ಸೇವೆ ಸಲ್ಲಿಸಿದ್ದರು. ಅವರ ಸಾವಿನ ಹಿಂದಿನ ಸಂದರ್ಭಗಳ ಬಗ್ಗೆ ಪೊಲೀಸರು ಇನ್ನೂ ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:46 pm, Tue, 18 June 24