AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ವಿಮಾನ ನಿಲ್ದಾಣದಲ್ಲಿ ತ್ರಿವರ್ಣ ಧ್ವಜದ ಮೇಲೆ ಕುಳಿತು ನಮಾಜ್ ಮಾಡಿದ ವ್ಯಕ್ತಿಯ ಬಂಧನ

ದೆಹಲಿ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಸೈನಿಕ ಮಹಮ್ಮದ್ ತಾರಿಕ್ ಅಜೀಜ್ ನೆಲದ ಮೇಲೆ ರಾಷ್ಟ್ರಧ್ವಜವನ್ನು ಹರಡಿ, ಅದರ ಮೇಲೆ ನಮಾಜ್ ಮಾಡುತ್ತಿದ್ದುದನ್ನು ನೋಡಿದರು.

ದೆಹಲಿ ವಿಮಾನ ನಿಲ್ದಾಣದಲ್ಲಿ ತ್ರಿವರ್ಣ ಧ್ವಜದ ಮೇಲೆ ಕುಳಿತು ನಮಾಜ್ ಮಾಡಿದ ವ್ಯಕ್ತಿಯ ಬಂಧನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:May 21, 2022 | 8:03 PM

Share

ನವದೆಹಲಿ: ದೆಹಲಿ ವಿಮಾನ ನಿಲ್ದಾಣದಲ್ಲಿ (Delhi Airport) ತ್ರಿವರ್ಣ ಧ್ವಜದ ಮೇಲೆ ಕುಳಿತು ಪ್ರಾರ್ಥನೆ ಸಲ್ಲಿಸಿದ್ದಕ್ಕಾಗಿ ಅಸ್ಸಾಂನ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಮೇ 8ರಂದು ಈ ಘಟನೆ ನಡೆದಿದ್ದು, ಧ್ವಜದ (Indian Flag) ಮೇಲೆ ನಮಾಜ್ ಸಲ್ಲಿಸಿದ ವ್ಯಕ್ತಿಯನ್ನು ಮೊಹಮ್ಮದ್ ತಾರಿಕ್ ಅಜೀಜ್ ಎಂದು ಗುರುತಿಸಲಾಗಿದೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಸೈನಿಕ ಮಹಮ್ಮದ್ ತಾರಿಕ್ ಅಜೀಜ್ ನೆಲದ ಮೇಲೆ ರಾಷ್ಟ್ರಧ್ವಜವನ್ನು ಹರಡಿ, ಅದರ ಮೇಲೆ ನಮಾಜ್ ಮಾಡುತ್ತಿದ್ದುದನ್ನು ನೋಡಿದರು.

ಅನುಮಾನಾಸ್ಪದ ಚಟುವಟಿಕೆಗಳ ಹಿನ್ನೆಲೆಯಲ್ಲಿ ತಾರಿಕ್ ಅಜೀಜ್ ಅವರನ್ನು ಸಿಐಎಸ್ಎಫ್ ವಶಕ್ಕೆ ಪಡೆದಿದ್ದು, ನಂತರ ದೆಹಲಿ ಪೊಲೀಸರಿಗೆ ಹಸ್ತಾಂತರಿಸಲಾಗಿತ್ತು. ದೆಹಲಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಯನ್ನು ನೋಡಿದ ನಂತರ ಮತ್ತು ಸಿಐಎಸ್ಎಫ್ ದೂರಿನ ಮೇರೆಗೆ ಮೊಹಮ್ಮದ್ ತಾರಿಕ್ ಅಜೀಜ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

ಇದನ್ನೂ ಓದಿ: Shocking News: ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಯ ಕಣ್ಣಿಗೆ ಕಚ್ಚಿದ ಇಲಿ; ಆಮೇಲೇನಾಯ್ತು?

ಇದನ್ನೂ ಓದಿ
Image
ಲೈಂಗಿಕ ಕಾರ್ಯಕರ್ತರಿಗೂ ಆಧಾರ್ ಕಾರ್ಡ್ ನೀಡಲು ಸುಪ್ರೀಂ ಕೋರ್ಟ್​ ಆದೇಶ
Image
Jammu Tunnel Collapse: ಜಮ್ಮುವಿನಲ್ಲಿ ಸುರಂಗ ಕುಸಿತ; 5 ಮೃತದೇಹಗಳ ಪತ್ತೆ, ಮುಂದುವರಿದ ರಕ್ಷಣಾ ಕಾರ್ಯಾಚರಣೆ
Image
ಕೊರೋನಾ 4ನೇ ಅಲೆ ಜೊತೆ ಮಂಕಿಪಾಕ್ಸ್​​ ಭೀತಿ, ಹೈ ಅಲರ್ಟ್: ಮಾರ್ಗಸೂಚಿ ಪ್ರಕಟ

ದೆಹಲಿ ವಿಮಾನ ನಿಲ್ದಾಣದ ಸಿಸಿಟಿವಿ ದೃಶ್ಯಾವಳಿಯಲ್ಲಿ ಮೊಹಮ್ಮದ್ ತಾರಿಕ್ ಅಜೀಜ್ ಡಿ-ಬೋರ್ಡಿಂಗ್ ಗೇಟ್ ಸಂಖ್ಯೆ 1 ಮತ್ತು 3ರ ನಡುವೆ ರಾಷ್ಟ್ರಧ್ವಜವನ್ನು ಹರಡಿ ನೆಲದ ಮೇಲೆ ಕುಳಿತು ನಮಾಜ್ ಮಾಡುತ್ತಿರುವುದು ಸ್ಪಷ್ಟವಾಗಿ ಗೋಚರಿಸಿದೆ. (Source)

ಎಫ್‌ಐಆರ್ ಪ್ರಕಾರ, ಅಸ್ಸಾಂನ ದಿಮಾಪುರ್ ನಿವಾಸಿ ಮೊಹಮ್ಮದ್ ತಾರಿಕ್ ಅಜೀಜ್ ಅವರು ಮೇ 7ರಂದು ದುಬೈನಿಂದ 6E24 ವಿಮಾನದಲ್ಲಿ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದರು ಮತ್ತು ಮೇ 8ರಂದು ಅಸ್ಸಾಂಗೆ ಹಿಂತಿರುಗುತ್ತಿದ್ದರು. ಮೊಹಮ್ಮದ್ ತಾರಿಕ್ ಅಜೀಜ್​ನನ್ನು ಬಂಧಿಸಲಾಗಿದ್ದು, ಆತನ ಪಾಸ್​ಪೋರ್ಟ್ ಸೇರಿದಂತೆ ಎಲ್ಲಾ ಪ್ರಯಾಣ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ. ಆದರೆ, ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:02 pm, Sat, 21 May 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್