ಅಸ್ಸಾಂ: ತರಗತಿಯಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಲು ವಿದ್ಯಾರ್ಥಿನಿಯನ್ನು ಒತ್ತಾಯಿಸಿದ ಶಿಕ್ಷಕನ ವಿರುದ್ಧ ಪ್ರಕರಣ ದಾಖಲು

ಬಾಲಕಿಯ ಕುಟುಂಬಸ್ಥರು ಆರಂಭದಲ್ಲಿ ಘಟನೆಯ ಬಗ್ಗೆ ಹೇಳಲು ಹಿಂಜರಿದರು. ವಿದ್ಯಾರ್ಥಿನಿ ಈ ವಿಷಯವನ್ನು ಆಕೆಯ ತಾಯಿಯಲ್ಲಿ ಹೇಳಿದ್ದಾಳೆ. ಶಿಕ್ಷಕರು ಅಶ್ಲೀಲ ವಿಡಿಯೊ ವೀಕ್ಷಿಸುವಂತೆ ಒತ್ತಾಯಿಸಿದ್ದು, ಆಕೆಯನ್ನು ಅನುಚಿತವಾಗಿ ಮುಟ್ಟಿದ್ದಾರೆ ಎಂದು ವಿದ್ಯಾರ್ಥಿನಿ ಹೇಳಿರುವುದಾಗಿ ಕುಟುಂಬದ ಸದಸ್ಯರೊಬ್ಬರು ತಿಳಿಸಿದರು.

ಅಸ್ಸಾಂ: ತರಗತಿಯಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಲು ವಿದ್ಯಾರ್ಥಿನಿಯನ್ನು ಒತ್ತಾಯಿಸಿದ ಶಿಕ್ಷಕನ ವಿರುದ್ಧ ಪ್ರಕರಣ ದಾಖಲು
ಪ್ರಾತಿನಿಧಿಕ ಚಿತ್ರ
Follow us
ರಶ್ಮಿ ಕಲ್ಲಕಟ್ಟ
|

Updated on:Aug 17, 2024 | 7:20 PM

ಗುವಾಹಟಿ ಆಗಸ್ಟ್ 17: ಅಸ್ಸಾಂನ (Assam) ಕರೀಂಗಂಜ್ (Karimganj)ಜಿಲ್ಲೆಯ ಸರ್ಕಾರಿ ಶಾಲೆಯೊಂದರ ಮುಖ್ಯ ಶಿಕ್ಷಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ವಿದ್ಯಾರ್ಥಿನಿಯೊಬ್ಬಳು ತರಗತಿಯಲ್ಲಿ ಅಶ್ಲೀಲ ಚಿತ್ರಗಳನ್ನು ವೀಕ್ಷಿಸುವಂತೆ ಒತ್ತಾಯಿಸಿದ ಆರೋಪದ ಮೇಲೆ ಈ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಕರೀಮ್‌ಗಂಜ್ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಪಾರ್ಥ ಪ್ರತಿಮ್ ದಾಸ್ ಅವರು ಈ ಘಟನೆ ಆಗಸ್ಟ್ 12 ರಂದು ನಡೆದಿದ್ದು, ಪೊಲೀಸರು ಶಿಕ್ಷಕರ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಹಲವಾರು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಬಾಲಕಿಯ ಕುಟುಂಬಸ್ಥರು ಆರಂಭದಲ್ಲಿ ಘಟನೆಯ ಬಗ್ಗೆ ಹೇಳಲು ಹಿಂಜರಿದರು. ವಿದ್ಯಾರ್ಥಿನಿ ಈ ವಿಷಯವನ್ನು ಆಕೆಯ ತಾಯಿಯಲ್ಲಿ ಹೇಳಿದ್ದಾಳೆ. ಶಿಕ್ಷಕರು ಅಶ್ಲೀಲ ವಿಡಿಯೊ ವೀಕ್ಷಿಸುವಂತೆ ಒತ್ತಾಯಿಸಿದ್ದು, ಆಕೆಯನ್ನು ಅನುಚಿತವಾಗಿ ಮುಟ್ಟಿದ್ದಾರೆ ಎಂದು ವಿದ್ಯಾರ್ಥಿನಿ ಹೇಳಿರುವುದಾಗಿ ಕುಟುಂಬದ ಸದಸ್ಯರೊಬ್ಬರು ತಿಳಿಸಿದರು.

ಕೋಪಗೊಂಡ ಸ್ಥಳೀಯರು ಶಿಕ್ಷಕನ ಮೇಲೆ ಹಲ್ಲೆಗೆ ಯತ್ನಿಸಿದರು, ಆದರೆ ಅವರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು ಎಂದು ಎಸ್ಪಿ ಹೇಳಿದ್ದಾರೆ. ರೊಚ್ಚಿಗೆದ್ದ ಗುಂಪೊಂದು ಶಾಲೆಯನ್ನು ಧ್ವಂಸಗೊಳಿಸಿ ಮತ್ತು ಬೆಂಕಿ ಹಚ್ಚಿದರು ಎಂದು ಅವರು ಹೇಳಿದರು.

ಸ್ಥಳೀಯರು ಸರ್ಕಾರಿ ಆಸ್ತಿಗೆ ಹಾನಿ ಮಾಡಿರುವುದರಿಂದ ಅವರ ವಿರುದ್ಧವೂ ಪ್ರಕರಣ ದಾಖಲಿಸುತ್ತೇವೆ. ಸದ್ಯಕ್ಕೆ ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: Shocking News: 2 ವರ್ಷದ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಚರಂಡಿಗೆ ಎಸೆದು ಕೊಂದ ಯುವಕ

ನಾವು ನಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುತ್ತೇವೆ ಇದರಿಂದ ಅವರು ಶಿಕ್ಷಣ ಪಡೆಯುತ್ತಾರೆ ಮತ್ತು ಉತ್ತಮ ಮನುಷ್ಯರಾಗುತ್ತಾರೆ, ಆದರೆ ಅವರು ಅಂತಹ ಶಿಕ್ಷಕರಿಂದ ಏನು ಕಲಿಯುತ್ತಾರೆ, ”ಎಂದು ಹೆಸರು ಹೇಳಲು ಬಯಸದ ಸ್ಥಳೀಯರೊಬ್ಬರು ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:17 pm, Sat, 17 August 24

ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ